IND vs NZ: ಏಕದಿನ ವಿಶ್ವಕಪ್‌ನಲ್ಲಿ ಇತಿಹಾಸ ಸೃಷ್ಟಿಸಿದ ಮೊಹಮ್ಮದ್ ಶಮಿ..!
Mohammed Shami, ICC World Cup 2023: 2023 ರ ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಿದ ಶಮಿ,ಪಂದ್ಯದ ಮೊದಲ ಎಸೆತದಲ್ಲಿ ವಿಲ್ ಯಂಗ್ ವಿಕೆಟ್ ಪಡೆದರು. ಇದರೊಂದಿಗೆ ಇನ್ನೂ ನಾಲ್ಕು ವಿಕೆಟ್ ಪಡೆದ ಶಮಿ ಐತಿಹಾಸಿಕ ಸಾಧನೆ ಮಾಡಿದರು. ಕಿವೀಸ್ ವಿರುದ್ಧ 5 ವಿಕೆಟ್ ಪಡೆಯುವ ಮೂಲಕ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಎರಡನೇ ಬಾರಿಗೆ ಐದು ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎನಿಸಿಕೊಂಡರು.