Virat Kohli: ಏಕದಿನದಲ್ಲಿ ರಿಕಿ ಪಾಂಟಿಂಗ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಕಿಂಗ್ ಕೊಹ್ಲಿ..!

Virat Kohli, ICC World Cup 2023: ಈ ಬಾರಿಯ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರ ಬ್ಯಾಟ್‌ನಿಂದ ನಿರಂತರವಾಗಿ ರನ್‌ಗಳು ಹೊರಬರುತ್ತಿವೆ. ಏತನ್ಮಧ್ಯೆ, ಇಂದು ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಬ್ಯಾಟ್ ಅಬ್ಬರಿಸಿದೆ.

ಪೃಥ್ವಿಶಂಕರ
|

Updated on: Nov 15, 2023 | 4:58 PM

ಈ ಬಾರಿಯ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರ ಬ್ಯಾಟ್‌ನಿಂದ ನಿರಂತರವಾಗಿ ರನ್‌ಗಳು ಹೊರಬರುತ್ತಿವೆ. ಏತನ್ಮಧ್ಯೆ, ಇಂದು ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಬ್ಯಾಟ್ ಅಬ್ಬರಿಸಿದೆ.

1 / 8
ರೋಹಿತ್ ಶರ್ಮಾ ವಿಕೆಟ್ ನಂತರ ಮೈದಾನಕ್ಕೆ ಬಂದ ವಿರಾಟ್ ಕೊಹ್ಲಿ, ಕಿವೀಸ್ ಬೌಲರ್​ಗಳ ಬೆಂಡೆತ್ತುದ್ದಿದ್ದಾರೆ. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಅಧಿಕ ರನ್ ಕಲೆಹಾಕಿದವರ ಪೈಕಿ ಕೊಹ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.

2 / 8
ನ್ಯೂಜಿಲೆಂಡ್ ವಿರುದ್ಧ ಪ್ರಸ್ತುತ 85 ರನ್​ಗಳ ಇನ್ನಿಂಗ್ಸ್ ಆಡಿರುವ ವಿರಾಟ್, ಏಕದಿನ ಮಾದರಿಯಲ್ಲಿ 13750 ರನ್​ಗಳ ಗಡಿ ದಾಟಿದ್ದಾರೆ. ಈ ಮೂಲಕ ಏಕದಿನದಲ್ಲಿ ಅಧಿಕ ರನ್ ಕಲೆಹಾಕಿದವರ ಪಟ್ಟಿಯಲ್ಲಿ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿದ್ದಾರೆ.

3 / 8
ಏಕದಿನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡುವುದಾದರೆ, ಈ ವಿಷಯದಲ್ಲಿ ಭಾರತದ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಈ ಮಾದರಿಯಲ್ಲಿ ಅವರು 18,426 ರನ್‌ಗಳನ್ನು ಹೊಂದಿದ್ದಾರೆ.

4 / 8
 ಶ್ರೀಲಂಕಾದ ಕುಮಾರ ಸಂಗಕ್ಕಾರ ಎರಡನೇ ಸ್ಥಾನದಲ್ಲಿದ್ದು, ಈ ವಿಕೆಟ್ ಕೀಪರ್ ಬ್ಯಾಟರ್ ಏಕದಿನದಲ್ಲಿ 14,234 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

5 / 8
ಇದಾದ ನಂತರ ಈಗ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ. ಕೊಹ್ಲಿ ಇದೀಗ 13,750ಕ್ಕೂ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

6 / 8
ಇನ್ನು ನಾಲ್ಕನೇ ಸ್ಥಾನದಲ್ಲಿರುವ ರಿಕಿ ಪಾಂಟಿಂಗ್ ತಮ್ಮ ಏಕದಿನ ವೃತ್ತಿಜೀವನದಲ್ಲಿ 13,704 ರನ್ ಸಿಡಿಸಿದ್ದರು. ಆದರೆ ಈಗ ಕೊಹ್ಲಿ ಪಾಂಟಿಂಗ್ ಅವರನ್ನು ಹಿಂದಿಕ್ಕಿ ಮುಂದೆ ಹೋಗಿದ್ದಾರೆ.

7 / 8
ಇನ್ನು ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ಶ್ರೀಲಂಕಾದ ಸನತ್ ಜಯಸೂರ್ಯ 13,430 ರನ್ ಗಳಿಸಿದ್ದಾರೆ.

8 / 8
Follow us