
ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ಹಾಗೂ ಭಾರತ ನಡುವಿನ ಹೈವೋಲ್ಟೇಜ್ ಕದನದಲ್ಲಿ ಟೀಂ ಇಂಡಿಯಾ 4 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಬೌಲಿಂಗ್ನಲ್ಲಿ ಮ್ಯೂಜಿಕ್ ಮಾಡಿದ ಮೊಹಮ್ಮದ್ ಶಮಿ 5 ವಿಕೆಟ್ ಪಡೆದು ಮಿಂಚಿದರೆ, ಬ್ಯಾಟಿಂಗ್ನಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ 95 ರನ್ ಬಾರಿಸಿ 5 ರನ್ಗಳಿಂದ ಶತಕ ವಂಚಿತರಾದರು.

ಇದರೊಂದಿಗೆ ವಿರಾಟ್ ಕೊಹ್ಲಿ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ನ್ಯೂಜಿಲೆಂಡ್ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ 2023 ರ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರ ಎನಿಸಿಕೊಂಡಿದ್ದಾರೆ.

ಕೊಹ್ಲಿಗೂ ಮುನ್ನ ಇದೇ ಪಂದ್ಯದಲ್ಲಿ 46 ರನ್ಗಳ ಇನ್ನಿಂಗ್ಸ್ ಆಡಿದ್ದ ರೋಹಿತ್ ಶರ್ಮಾ, ಈ ವಿಶ್ವಕಪ್‌ನಲ್ಲಿ ಅಧಿಕ ರನ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು. ಆದರೆ ಕೆಲವೇ ಹೊತ್ತಿನಲ್ಲಿ ಕೊಹ್ಲಿ ಅವರನ್ನು ಹಿಂದಿಕ್ಕಿದರು.

ಸ್ಯಾಂಟ್ನರ್ ಬೌಲ್ ಮಾಡಿದ 33ನೇ ಓವರ್‌ನಲ್ಲಿ ಡೀಪ್ ಸ್ಕ್ವೇರ್ ಲೆಗ್ ಕಡೆ ಸಿಂಗಲ್ ಕದಿಯುವ ಮೂಲಕ ತಮ್ಮ ಅರ್ಧಶತಕವನ್ನು ಪೂರೈಸಿದಿರು.

ಇದು ಏಕದಿನದಲ್ಲಿ ಕೊಹ್ಲಿ ಅವರ 69ನೇ ಅರ್ಧಶತಕ ಮತ್ತು ಈ ವಿಶ್ವಕಪ್‌ನಲ್ಲಿ ಅವರ ಮೂರನೇ ಅರ್ಧಶತಕವಾಗಿದೆ.

ಈ ಮೂಲಕ ಅತ್ಯಧಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಮತ್ತು ಭಾರತದ ನಾಯಕ ರೋಹಿತ್ ಶರ್ಮಾ ಅವರನ್ನು ಕೊಹ್ಲಿ ಹಿಂದಿಕ್ಕಿ 2023 ರ ವಿಶ್ವಕಪ್‌ನಲ್ಲಿ ಅಗ್ರ ರನ್ ಗಳಿಸಿದ ಆಟಗಾರ ಎನಿಸಿಕೊಂಡರು.

ಪ್ರಸ್ತುತ ಅಗ್ರಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಖಾತೆಯಲ್ಲಿ 330* ರನ್‌ಗಳಿದ್ದರೆ, ಪಂದ್ಯದ ಆರಂಭಕ್ಕೂ ಮುನ್ನ ಅಗ್ರಸ್ಥಾನದಲ್ಲಿದ್ದ ಮೊಹಮ್ಮದ್ ರಿಜ್ವಾನ್ ಇದೀಗ ಮೂರನೇ ಸ್ಥಾನಕ್ಕೆ ಜಾರಿದ್ದಾರೆ.

ಪಾಕಿಸ್ತಾನದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ ನಾಲ್ಕು ಪಂದ್ಯಗಳಿಂದ 294 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದರೆ, ಐದು ಪಂದ್ಯಗಳಿಂದ 290 ರನ್ ಗಳಿಸಿರುವ ರಚಿನ್ ರವೀಂದ್ರ ನಾಲ್ಕನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಮತ್ತೊಬ್ಬ ಕಿವೀಸ್ ಆರಂಭಿಕ ಡೆವೊನ್ ಕಾನ್ವೇ 249 ರನ್ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.