- Kannada News Photo gallery Cricket photos IND vs NZ: Lowest total for India after first 10 overs at home in Tests since 2001
IND vs NZ: 18 ವರ್ಷಗಳ ಬಳಿಕ ಟೀಮ್ ಇಂಡಿಯಾದ ಅತ್ಯಂತ ಕಳಪೆ ಆರಂಭ..!
India vs New Zealand, 1st Test: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಅದು ಸಹ 18 ವರ್ಷಗಳ ಬಳಿಕ, ಅಂದರೆ ತವರಿನಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು ಮೊದಲ 10 ಓವರ್ಗಳಲ್ಲಿ ರನ್ಗಳಿಸಲು ಪರದಾಡಿದ್ದಾರೆ.
Updated on: Oct 17, 2024 | 12:32 PM

ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಿರೀಕ್ಷಿತ ಆರಂಭ ಪಡೆಯಲು ಸಾಧ್ಯವಾಗಲಿಲ್ಲ.

ತಂಡದ ಮೊತ್ತ 9 ಆಗುವಷ್ಟರಲ್ಲಿ ರೋಹಿತ್ ಶರ್ಮಾ (2) ಔಟಾದರು. ಇನ್ನು ವಿರಾಟ್ ಕೊಹ್ಲಿ (0) ಹಾಗೂ ಸರ್ಫರಾಝ್ ಖಾನ್ (0) ಸೊನ್ನೆ ಸುತ್ತುವ ಮೂಲಕ ಹಿಂತಿರುಗಿದರು. ಪರಿಣಾಮ ಮೊದಲ ಹತ್ತು ಓವರ್ಗಳಲ್ಲಿ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 13 ರನ್ಗಳು ಮಾತ್ರ.

ಇದರೊಂದಿಗೆ 18 ವರ್ಷಗಳ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಅತ್ಯಂತ ಕಳಪೆ ಆರಂಭ ಪಡೆದುಕೊಂಡಂತಾಗಿದೆ. ಇದಕ್ಕೂ ಮುನ್ನ ಇಂತಹದೊಂದು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದು 2006 ರಲ್ಲಿ. ನಾಗ್ಪುರದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಭಾರತ ತಂಡವು ಮೊದಲ 10 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು ಕೇವಲ 10 ರನ್ ಕಲೆಹಾಕಿದ್ದರು.

ಇದೀಗ ಹದಿನೆಂಟು ವರ್ಷಗಳ ಬಳಿಕ ಮತ್ತೊಮ್ಮೆ ಭಾರತೀಯ ಬ್ಯಾಟರ್ಗಳು ರನ್ಗಳಿಸಲು ಪರದಾಡಿದ್ದಾರೆ. ನ್ಯೂಝಿಲೆಂಡ್ ವೇಗಿಗಳ ಕರಾರುವಾಕ್ ದಾಳಿಗೆ ತಡಕಾಡಿದ ಟೀಮ್ ಇಂಡಿಯಾ ಬ್ಯಾಟ್ಸ್ಮನ್ಗಳು ಮೊದಲ 10 ಓವರ್ಗಳಲ್ಲಿ ಕೇವಲ 13 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಅಲ್ಲದೆ ಭೋಜನಾ ವಿರಾಮದ ವೇಳೆಗೆ ಟೀಮ್ ಇಂಡಿಯಾ ಕೇವಲ 34 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಕ್ರೀಸ್ನಲ್ಲಿ ರಿಷಭ್ ಪಂತ್ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ಲಂಚ್ ಬ್ರೇಕ್ ಬಳಿಕ ಇನಿಂಗ್ಸ್ ಮುಂದುವರೆಸಲಿದ್ದಾರೆ. ಇನ್ನು ನ್ಯೂಝಿಲೆಂಡ್ ಪರ ವಿಲಿಯಂ ಒರೋಕ್ 3 ವಿಕೆಟ್ ಪಡೆದರೆ, ಮ್ಯಾಟ್ ಹೆನ್ರಿ 2 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
