IND vs NZ: 18 ವರ್ಷಗಳ ಬಳಿಕ ಟೀಮ್ ಇಂಡಿಯಾದ ಅತ್ಯಂತ ಕಳಪೆ ಆರಂಭ..!

|

Updated on: Oct 17, 2024 | 12:32 PM

India vs New Zealand, 1st Test: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಅದು ಸಹ 18 ವರ್ಷಗಳ ಬಳಿಕ, ಅಂದರೆ ತವರಿನಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಮೊದಲ 10 ಓವರ್​ಗಳಲ್ಲಿ ರನ್​ಗಳಿಸಲು ಪರದಾಡಿದ್ದಾರೆ.

1 / 5
ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಿರೀಕ್ಷಿತ ಆರಂಭ ಪಡೆಯಲು ಸಾಧ್ಯವಾಗಲಿಲ್ಲ.

2 / 5
ತಂಡದ ಮೊತ್ತ 9 ಆಗುವಷ್ಟರಲ್ಲಿ ರೋಹಿತ್ ಶರ್ಮಾ (2) ಔಟಾದರು. ಇನ್ನು ವಿರಾಟ್ ಕೊಹ್ಲಿ (0) ಹಾಗೂ ಸರ್ಫರಾಝ್ ಖಾನ್ (0) ಸೊನ್ನೆ ಸುತ್ತುವ ಮೂಲಕ ಹಿಂತಿರುಗಿದರು. ಪರಿಣಾಮ ಮೊದಲ ಹತ್ತು ಓವರ್​ಗಳಲ್ಲಿ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 13 ರನ್​ಗಳು ಮಾತ್ರ.

3 / 5
ಇದರೊಂದಿಗೆ 18 ವರ್ಷಗಳ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಅತ್ಯಂತ ಕಳಪೆ ಆರಂಭ ಪಡೆದುಕೊಂಡಂತಾಗಿದೆ. ಇದಕ್ಕೂ ಮುನ್ನ ಇಂತಹದೊಂದು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದು 2006 ರಲ್ಲಿ. ನಾಗ್ಪುರದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಭಾರತ ತಂಡವು ಮೊದಲ 10 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು ಕೇವಲ 10 ರನ್ ಕಲೆಹಾಕಿದ್ದರು.

4 / 5
ಇದೀಗ ಹದಿನೆಂಟು ವರ್ಷಗಳ ಬಳಿಕ ಮತ್ತೊಮ್ಮೆ ಭಾರತೀಯ ಬ್ಯಾಟರ್​ಗಳು ರನ್​ಗಳಿಸಲು ಪರದಾಡಿದ್ದಾರೆ. ನ್ಯೂಝಿಲೆಂಡ್ ವೇಗಿಗಳ ಕರಾರುವಾಕ್ ದಾಳಿಗೆ ತಡಕಾಡಿದ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಮೊದಲ 10 ಓವರ್​ಗಳಲ್ಲಿ ಕೇವಲ 13 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

5 / 5
ಅಲ್ಲದೆ ಭೋಜನಾ ವಿರಾಮದ ವೇಳೆಗೆ ಟೀಮ್ ಇಂಡಿಯಾ ಕೇವಲ 34 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಕ್ರೀಸ್​ನಲ್ಲಿ ರಿಷಭ್ ಪಂತ್ ಹಾಗೂ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ಲಂಚ್ ಬ್ರೇಕ್ ಬಳಿಕ ಇನಿಂಗ್ಸ್ ಮುಂದುವರೆಸಲಿದ್ದಾರೆ. ಇನ್ನು ನ್ಯೂಝಿಲೆಂಡ್ ಪರ ವಿಲಿಯಂ ಒರೋಕ್ 3 ವಿಕೆಟ್ ಪಡೆದರೆ, ಮ್ಯಾಟ್ ಹೆನ್ರಿ 2 ವಿಕೆಟ್ ಕಬಳಿಸಿ ಮಿಂಚಿದ್ದಾರೆ.