IND vs NZ: 5 ವಿಕೆಟ್​ಗಳ ಗೊಂಚಲು ಪಡೆದ ಜಡೇಜಾ; ಮೂವರು ದಿಗ್ಗಜರ ದಾಖಲೆ ಉಡೀಸ್

Ravindra Jadeja: ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಐದು ವಿಕೆಟ್​ಗಳ ಗೊಂಚಲು ಪಡೆದ ರವೀಂದ್ರ ಜಡೇಜಾ, ಟೀಂ ಇಂಡಿಯಾದ ಮೂವರು ದಿಗ್ಗಜ ಬೌಲರ್​ಗಳ ದಾಖಲೆ ಮುರಿದಿದ್ದಾರೆ. ಇದೀಗ ಜಡೇಜಾ ಟೆಸ್ಟ್​ನಲ್ಲಿ ಅಧಿಕ ವಿಕೆಟ್ ಪಡೆದಿರುವ ಭಾರತದ ಐದನೇ ಬೌಲರ್ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Nov 01, 2024 | 4:08 PM

ಭಾರತ ಹಾಗೂ ನ್ಯೂಜಿಲೆಂಡ್ ನಡವೆ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ 235 ರನ್​​ಗಳಿಗೆ ನ್ಯೂಜಿಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಕಿವೀಸ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಟೀಂ ಇಂಡಿಯಾ ಸ್ಪಿನ್ನರ್ ರವೀಂದ್ರ ಜಡೇಜಾ 5 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು.

1 / 5
ರವೀಂದ್ರ ಜಡೇಜಾ ಖಾತೆಗೆ ಜಾರಿದ ಬಿದ್ದ ವಿಕೆಟ್​ಗಳ ಪೈಕಿ, ವಿಲ್ ಯಂಗ್, ಟಾಮ್ ಬ್ಲಂಡೆಲ್, ಗ್ಲೆನ್ ಫಿಲಿಪ್ಸ್, ಇಶ್ ಸೋಧಿ ಹಾಗೂ ಮ್ಯಾಟ್ ಹೆನ್ರಿ ಸೇರಿದ್ದಾರೆ. ದಿನದಾಟದ ಮೊದಲೆರಡು ಸೆಷನ್​ಗಳಲ್ಲಿ ಮೂರು ವಿಕೆಟ್ ಉರುಳಿಸಿದ್ದ ಜಡೇಜಾ, ಚಹಾ ವಿರಾಮದ ಮೊದಲು ಗ್ಲೆನ್ ಫಿಲಿಪ್ಸ್ ಅವರ ವಿಕೆಟ್ ಉರುಳಿಸಿದರು. ಈ ಮೂಲಕ ಜಡೇಜಾ ವಿಶಿಷ್ಟ ದಾಖಲೆಯನ್ನು ಮಾಡಿದರು.

2 / 5
ಗ್ಲೆನ್ ಫಿಲಿಪ್ಸ್ ಅವರ ವಿಕೆಟ್ ಉರುಳಿಸುವ ಮೂಲಕ ರವೀಂದ್ರ ಜಡೇಜಾ, ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಬೌಲರ್​ಗಳ ಪೈಕಿಯಲ್ಲಿ ಇದೀಗ ಐದನೇ ಸ್ಥಾನಕ್ಕೆ ಬಂದಿದ್ದಾರೆ. ಈ ಮೂಲಕ ಜಡೇಜಾ, ಜಹೀರ್ ಖಾನ್ ಮತ್ತು ಇಶಾಂತ್ ಶರ್ಮಾ ಅವರನ್ನೂ ಸಹ ಹಿಂದಿಕ್ಕಿದ್ದಾರೆ.

3 / 5
ರವೀಂದ್ರ ಜಡೇಜಾ ಈಗ ಟೆಸ್ಟ್ ಕ್ರಿಕೆಟ್‌ನಲ್ಲಿ 312 ವಿಕೆಟ್‌ಗಳನ್ನು ಉರುಳಿಸಿದ್ದು, ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್​ಗಳ ಪಟ್ಟಿಯಲ್ಲಿ ಜಹೀರ್ ಖಾನ್ ಹಾಗೂ ಇಶಾಂತ್​ ಶರ್ಮಾರನ್ನು ಹಿಂದಿಕ್ಕಿದ್ದಾರೆ. ಜಹೀರ್ ಮತ್ತು ಇಶಾಂತ್ ಕ್ರಿಕೆಟ್‌ನ ಸುದೀರ್ಘ ಸ್ವರೂಪದಲ್ಲಿ ತಲಾ 311 ವಿಕೆಟ್‌ಗಳನ್ನು ಪಡೆದಿದ್ದಾರೆ.

4 / 5
ಹಾಗೆಯೇ ವಾಂಖೆಡೆ ಮೈದಾನದಲ್ಲಿ 5 ವಿಕೆಟ್​ಗಳ ಗೊಂಚಲು ಪಡೆದ ರವೀಂದ್ರ ಜಡೇಜಾ ಈ ಮೂಲಕ ಭಾರತದಲ್ಲಿ ಆಡಿದ ಟೆಸ್ಟ್‌ ಪಂದ್ಯದ ಇನ್ನಿಂಗ್ಸ್‌ವೊಂದರಲ್ಲಿ ಅತಿ ಹೆಚ್ಚು ಬಾರಿ ಐದು ವಿಕೆಟ್‌ಗಳನ್ನು ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಕಪಿಲ್ ದೇವ್‌ರನ್ನು ಹಿಂದಿಕ್ಕಿದ್ದಾರೆ. ಕಪಿಲ್ ಭಾರತದಲ್ಲಿ 11 ಬಾರಿ ಐದು ವಿಕೆಟ್ ಪಡೆದಿದ್ದರೆ, ಜಡೇಜಾ 12 ಬಾರಿ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

5 / 5

Published On - 4:08 pm, Fri, 1 November 24

Follow us
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ

ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ