- Kannada News Photo gallery Cricket photos IND vs NZ Rohit Sharma admits his mistakes after India's ugly batting collapse in bengaluru
IND vs NZ: 46 ರನ್ಗೆ ಆಲೌಟ್; ಮಾಧ್ಯಮಗಳ ಮುಂದೆ ತಪ್ಪನ್ನು ಒಪ್ಪಿಕೊಂಡ ರೋಹಿತ್ ಶರ್ಮಾ
Rohit Sharma: ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಇಡೀ ತಂಡ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 46 ರನ್ಗಳಿಗೆ ಆಲೌಟ್ ಆಯಿತು. ಪಂದ್ಯದ ಎರಡನೇ ದಿನದಾಟದಂತ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.
Updated on: Oct 17, 2024 | 7:49 PM

ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಇಡೀ ತಂಡ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 46 ರನ್ಗಳಿಗೆ ಆಲೌಟ್ ಆಯಿತು. ಪಂದ್ಯದ ಎರಡನೇ ದಿನದಾಟದಂತ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ನ ಎರಡನೇ ದಿನದ ಪ್ರದರ್ಶನದ ಬಗ್ಗೆ ದಿನದಾಟ ಮುಗಿದ ಬಳಿಕ ರೋಹಿತ್ ಶರ್ಮಾ ಬಳಿ ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಇದರಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಕ್ರಮಾಂಕ ಬದಲಾವಣೆ, ರಿಷಬ್ ಪಂತ್ ಇಂಜುರಿ ಹಾಗೂ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಗ್ಗೆ ಪ್ರಶ್ನೆಗಳಿದ್ದವು.

ಮೊದಲನೆಯದ್ದಾಗಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಬಗ್ಗೆ ಮಾತನಾಡಿದ ರೋಹಿತ್ ಶರ್ಮಾ, ಪಿಚ್ ಅನ್ನು ಅರ್ಥ ಮಾಡಿಕೊಳ್ಳುವಲ್ಲಿ ನಾವು ಎಡವಿದೆವು. ಪಿಚ್ ಫ್ಲಾಟ್ ಆಗಿದ್ದು ಬ್ಯಾಟ್ಸ್‌ಮನ್‌ಗಳಿಗೆ ಸಹಾಯ ಮಾಡುತ್ತದೆ ಎಂದು ಭಾವಿಸಿ ನಾನು ಮೊದಲು ಬ್ಯಾಟಿಂಗ್ ಆಯ್ದುಕೊಂಡೆ ಎಂದಿದ್ದಾರೆ.

ಹಾಗೆಯೇ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಕ್ರಮಾಂಕ ಬದಲಾಯಿಸಲಾಗಿತ್ತು. ವಾಸ್ತವವಾಗಿ ಕೊಹ್ಲಿ ಟೆಸ್ಟ್ನಲ್ಲಿ 4ನೇ ಕ್ರಮಾಂಕದಲ್ಲಿ ಕ್ರೀಸ್ಗಿಳಿಯುತ್ತಾರೆ. ಆದರೆ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಶೂನ್ಯಕ್ಕೆ ಔಟಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರೋಹಿತ್, ವಿರಾಟ್ ಕೊಹ್ಲಿ ಅವರೇ ಈ ನಿರ್ಧಾರ ತೆಗೆದುಕೊಂಡಿದ್ದರಿಂದ ಅವರ ಬ್ಯಾಟಿಂಗ್ ಕ್ರಮಾಂಕ ಬದಲಿಸಲಾಯಿತು ಎಂದಿದ್ದಾರೆ.

ಇನ್ನು ಪಂದ್ಯದ ವೇಳೆ ಪಂತ್ ಅವರ ಕಾಲಿಗೆ ಚೆಂಡು ಬಡಿದು ಮೈದಾನದಿಂದ ಹೊರಹೊಗಿದ್ದರು. ಈ ಬಗ್ಗೆ ಮಾಹಿತಿ ನೀಡಿದ ರೋಹಿತ್, ಪಂತ್ ಶಸ್ತ್ರಚಿಕಿತ್ಸೆಗೆ ಒಳಗಾದ ಅದೇ ಕಾಲಿಗೆ ಚೆಂಡು ಬಡಿದಿದೆ. ಹೀಗಾಗಿ ಪಂತ್ ಅವರ ಕಾಲು ಊದಿಕೊಂಡಿದ್ದು, ಈ ಗಾಯದ ಗಂಭೀರತೆ ನಂತರ ತಿಳಿಯಲಿದೆ ಎಂದಿದ್ದಾರೆ.

ಮೊದಲ ಇನ್ನಿಂಗ್ಸ್ನಲ್ಲಿ ಸತತ ವಿಕೆಟ್ ಪತನದ ನಡುವೆಯೂ ತಂಡದ ಕೆಲವರು ಕೆಟ ಶಾಟ್ ಆಡಿ ವಿಕೆಟ್ ಒಪ್ಪಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ರೋಹಿತ್, ಭಾರತದ ಬ್ಯಾಟ್ಸ್‌ಮನ್‌ಗಳ ಶಾಟ್ ಆಯ್ಕೆ ಸರಿ ಇರಲಿಲ್ಲ. ಇದು ತಂಡಕ್ಕೆ ಕೆಟ್ಟ ದಿನವಾಗಿತ್ತು. ಕೆಲವೊಮ್ಮೆ ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದು ಅಂದುಕೊಂಡಂತೆ ನಡೆಯುವುದಿಲ್ಲ ಎಂದು ರೋಹಿತ್ ಹೇಳಿದ್ದಾರೆ.
