AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರು: ಅಭ್ಯಾಸಕ್ಕೆ ಇಬ್ಬರು ಆಟಗಾರರು ಗೈರು..!

Champions Trophy 2025: ಚಾಂಪಿಯನ್ಸ್ ಟ್ರೋಫಿಯ 12ನೇ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮಾರ್ಚ್ 2 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Feb 27, 2025 | 12:54 PM

Share
ಚಾಂಪಿಯನ್ಸ್ ಟ್ರೋಫಿಯಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿ ಸೆಮಿಫೈನಲ್​ಗೇರಿರುವ ಟೀಮ್ ಇಂಡಿಯಾ ಇದೀಗ ಲೀಗ್​ ಹಂತದ ಕೊನೆಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಮಾರ್ಚ್ 2 ರಂದು ದುಬೈನಲ್ಲಿ ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯಕ್ಕಾಗಿ ಅಭ್ಯಾಸವನ್ನು ಆರಂಭಿಸಿರುವ ಟೀಮ್ ಇಂಡಿಯಾಗೆ ಇದೀಗ ಹೊಸ ಚಿಂತೆಯೊಂದು ಶುರುವಾಗಿದೆ.

1 / 6
ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಅಭ್ಯಾಸಕ್ಕೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಗೈರಾಗಿದ್ದಾರೆ. ಹಿಟ್​ಮ್ಯಾನ್ ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಟೀಮ್ ಇಂಡಿಯಾದ ಅಭ್ಯಾಸದ ವೇಳೆ ಕಾಣಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.

2 / 6
ಹಾಗೆಯೇ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ ಕೂಡ ಅಭ್ಯಾಸಕ್ಕೆ ಹಾಜರಾಗಿರಲಿಲ್ಲ. ಗಿಲ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಬುಧವಾರ ನಡೆದ ಅಭ್ಯಾಸದಿಂದ ಶುಭ್​ಮನ್ ಗಿಲ್ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಇತ್ತ ಟೀಮ್ ಇಂಡಿಯಾದ ಆರಂಭಿಕರಿಬ್ಬರು ಅಭ್ಯಾಸಕ್ಕೆ ಗೈರು ಹಾಜರಾಗಿರುವುದು ಇದೀಗ ಹೊಸ ಚಿಂತೆಗೆ ಕಾರಣವಾಗಿದೆ. ಏಕೆಂದರೆ ಮಾರ್ಚ್ 2 ರಂದು ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ ಪಂದ್ಯದ ಬೆನ್ನಲ್ಲೇ ಮಾರ್ಚ್ 4 ರಂದು ಮೊದಲ ಸೆಮಿಫೈನಲ್ ಜರುಗಲಿದೆ. ಈ ಸೆಮಿಫೈನಲ್​ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.

4 / 6
ಇದಕ್ಕೂ ಮುನ್ನ ಈ ಇಬ್ಬರು ಆಟಗಾರರು ಸಂಪೂರ್ಣ ಗುಣಮುಖರಾಗುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯ. ಅದರಂತೆ ನ್ಯೂಝಿಲೆಂಡ್ ವಿರುದ್ಧದ ಔಪಚಾರಿಕ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರಾ ಅಥವಾ ಮಾರ್ಚ್ 4 ರಂದು ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಣಕ್ಕಿಳಿಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

6 / 6

Published On - 12:54 pm, Thu, 27 February 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ

ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್

ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು

‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು