Rohit Sharma: ರನ್​ ರಟ್​ನಲ್ಲಿ ಸಿಲುಕಿ ಒದ್ದಾಡುತ್ತಿರುವ ರೋಹಿತ್ ಶರ್ಮಾ

IND vs NZ: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ. ಅತ್ತ ನ್ಯೂಝಿಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 235 ರನ್​ ಗಳಿಸಿ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Nov 02, 2024 | 10:08 AM

ಟೆಸ್ಟ್ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ (Rohit Sharma) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲೂ ಹಿಟ್​ಮ್ಯಾನ್ ವಿಫಲರಾಗಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 18 ರನ್​ಗಳಿಸಿ ಔಟಾಗಿದ್ದಾರೆ.

1 / 5
ಇದರೊಂದಿಗೆ ಅನಗತ್ಯ ದಾಖಲೆಯೊಂದು ರೋಹಿತ್ ಶರ್ಮಾ ಪಾಲಾಗಿದೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತವರಿನಲ್ಲಿ ಅತ್ಯಧಿಕ ಕಡಿಮೆ ಸರಾಸರಿಯಲ್ಲಿ ರನ್ ಕಲೆಹಾಕಿದ ಭಾರತೀಯ ನಾಯಕನೆಂಬ ಹೀನಾಯ ದಾಖಲೆ ಹಿಟ್​ಮ್ಯಾನ್ ಹೆಸರಿಗೆ ಸೇರ್ಪಡೆಯಾಗಿದೆ.

2 / 5
ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1984 ರಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕರಾಗಿದ್ದ ಗವಾಸ್ಕರ್, ತವರಿನಲ್ಲಿ ಆಡಿದ 8 ಇನಿಂಗ್ಸ್​ಗಳಲ್ಲಿ ಕೇವಲ 140 ರನ್ ಕಲೆಹಾಕಿದ್ದರು. ಅಂದರೆ 17.50 ರ ಸರಾಸರಿಯಲ್ಲಿ ಬ್ಯಾಟಿಂಗ್ ಪ್ರದರ್ಶಿಸಿ ಭಾರೀ ಟೀಕೆಗೆ ಗುರಿಯಾಗಿದ್ದರು.

3 / 5
ಇದೀಗ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಸುನಿಲ್ ಗವಾಸ್ಕರ್​ಗಿಂತಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ವರ್ಷ ತವರಿನಲ್ಲಿ ಆಡಿದ 9 ಇನಿಂಗ್ಸ್​ಗಳಲ್ಲಿ ಹಿಟ್​ಮ್ಯಾನ್ ಕಲೆಹಾಕಿದ್ದು ಕೇವಲ 122 ರನ್​ಗಳು ಮಾತ್ರ. ಅಂದರೆ ಕೇವಲ 13.55 ಸರಾಸರಿಯಲ್ಲಿ ರನ್ ಕಲೆಹಾಕಿ ತವರಿನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ನಾಯಕ ಎನಿಸಿಕೊಂಡಿದ್ದಾರೆ.

4 / 5
ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ತವರಿನಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕನ ದಾಖಲೆ ಇಂಗ್ಲೆಂಡ್​ನ ಮಾಜಿ ಕ್ಯಾಪ್ಟನ್ ನಾಸಿರ್ ಹುಸೇನ್ ಹೆಸರಿನಲ್ಲಿದೆ. 2000 ರಲ್ಲಿ ನಾಸಿರ್ ಹುಸೇನ್ ತವರಿನಲ್ಲಿ ಆಡಿದ 10 ಇನಿಂಗ್ಸ್​ಗಳಿಂದ ಕೇವಲ 92 ರನ್​ ಗಳಿಸಿ ಈ ಕಳಪೆ ದಾಖಲೆ ಬರೆದಿದ್ದರು. ಇದೀಗ 9 ಇನಿಂಗ್ಸ್​ಗಳಿಂದ 122 ರನ್ ಪೇರಿಸಿ ಈ ಅನಗತ್ಯ ದಾಖಲೆ ಪಟ್ಟಿಯಲ್ಲಿ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ವೈಫಲ್ಯ ಮುಂದುವರೆದರೆ ನಾಸಿರ್ ಹುಸೇನ್ ಹೆಸರಿನಲ್ಲಿರುವ ಅತ್ಯಂತ ಹೀನಾಯ ದಾಖಲೆ ಹಿಟ್​ಮ್ಯಾನ್ ಪಾಲಾಗಬಹುದು.

5 / 5
Follow us
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್

ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ

ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್

ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್

ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ

ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ

ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್

ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್

ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ

ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ