Shubman Gill Record: ಶುಭ್ಮನ್ ಗಿಲ್ ಸಿಡಿಲಬ್ಬರಕ್ಕೆ ಕಿಂಗ್ ಕೊಹ್ಲಿ ದಾಖಲೆ ಧೂಳೀಪಟ
Shubhman Gill - Virat Kohli: ಶುಭ್ಮನ್ ಗಿಲ್ ಕೇವಲ 87 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್ನಲ್ಲಿ 1000 ರನ್ ಕಲೆಹಾಕಿದ ಸಾಧನೆ ಮಾಡಿದರು. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ವಿಶೇಷ.
Updated on: Jan 18, 2023 | 5:23 PM

ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಉತ್ತಮ ಫಾರ್ಮ್ನಲ್ಲಿದ್ದಾರೆ. ಶ್ರೀಲಂಕಾ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಗಿಲ್ ಇದೀಗ ನ್ಯೂಜಿಲೆಂಡ್ ವಿರುದ್ಧ ಡಬಲ್ ಸೆಂಚುರಿ ಬಾರಿಸಿ ಬ್ಯಾಟ್ ಮೇಲೆಕ್ಕೆತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಯುವ ಬ್ಯಾಟರ್ ಅತ್ಯುತ್ತಮ ಇನಿಂಗ್ಸ್ ಆಡಿದರು.

ನ್ಯೂಜಿಲೆಂಡ್ ಬೌಲರ್ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಶುಭ್ಮನ್ ಗಿಲ್ ಕೇವಲ 87 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್ನಲ್ಲಿ 1000 ರನ್ ಕಲೆಹಾಕಿದ ಸಾಧನೆ ಮಾಡಿದರು. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ವಿಶೇಷ.

ಹೌದು, ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್ನಲ್ಲಿ ಅತ್ಯಂತ ವೇಗವಾಗಿ ಸಾವಿರ ರನ್ ಪೂರೈಸಿದ ದಾಖಲೆ ಇದೀಗ ಶುಭ್ಮನ್ ಗಿಲ್ ಪಾಲಾಗಿದೆ. ಈ ಹಿಂದೆ ಈ ರೆಕಾರ್ಡ್ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಹೆಸರಿನಲ್ಲಿತ್ತು.

ಕಿಂಗ್ ಕೊಹ್ಲಿ ಹಾಗೂ ಗಬ್ಬರ್ ಧವನ್ 24 ಇನಿಂಗ್ಸ್ ಮೂಲಕ ಏಕದಿನ ಕ್ರಿಕೆಟ್ನಲ್ಲಿ 1000 ರನ್ ಪೂರೈಸಿ ದಾಖಲೆ ಬರೆದಿದ್ದರು. ಆದರೆ ಇದೀಗ ಈ ದಾಖಲೆಯನ್ನು ಮುರಿದು ಶುಭ್ಮನ್ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ದ್ವಿಶತಕದೊಂದಿಗೆ ಶುಭ್ಮನ್ ಗಿಲ್ ಕೇವಲ ಕೇವಲ 19 ಏಕದಿನ ಇನಿಂಗ್ಸ್ ಮೂಲಕ 1000 ರನ್ ಪೂರೈಸಿದ್ದಾರೆ. ಈ ಮೂಲಕ ಸಾವಿರ ರನ್ಗಳ ವೇಗದ ಸರದಾರನಾಗಿದ್ದ ವಿರಾಟ್ ಕೊಹ್ಲಿಯ ದಾಖಲೆಯನ್ನು ಗಿಲ್ ಮುರಿದರು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೊಸ ದಾಖಲೆಯನ್ನು ನಿರ್ಮಿಸಿದರು.

ಇನ್ನು ಈ ಪಂದ್ಯದಲ್ಲಿ 149 ಎಸೆತಗಳನ್ನು ಎದುರಿಸಿದ ಶುಭ್ಮನ್ ಗಿಲ್ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್ನೊಂದಿಗೆ 208 ರನ್ ಬಾರಿಸಿದರು.
