IND vs NZ: ಟೀಮ್ ಇಂಡಿಯಾಗೆ ಆಘಾತ: ಮೊದಲ ಪಂದ್ಯಕ್ಕೆ ಯುವ ದಾಂಡಿಗ ಅನುಮಾನ

|

Updated on: Oct 16, 2024 | 8:01 AM

India vs New Zealand: ಇಂಡೊ-ಕಿವೀಸ್ ಟೆಸ್ಟ್ ಸರಣಿ ಇಂದಿನಿಂದ (ಅ.16) ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಭಾರತ ತಂಡದ ಯುವ ಬ್ಯಾಟರ್​ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಸರ್ಫರಾಝ್ ಖಾನ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

1 / 6
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ. ಕತ್ತು ಮತ್ತು ಭುಜದ ನೋವಿನಿಂದ ಬಳಲುತ್ತಿರುವ ಗಿಲ್ ಬೆಂಗಳೂರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

2 / 6
ಟೀಮ್ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಗಿಲ್ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಶತಕ ಬಾರಿಸಿ ಮಿಂಚಿದ್ದರು. ಇದೀಗ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ಟೀಮ್ ಮ್ಯಾನೇಜ್ಮೆಂಟ್ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

3 / 6
ಇನ್ನು ಶುಭ್​ಮನ್ ಗಿಲ್ ಹೊರಗುಳಿದರೆ ಅವರ ಸ್ಥಾನದಲ್ಲಿ ಯುವ ದಾಂಡಿಗ ಸರ್ಫರಾಝ್ ಖಾನ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಇರಾನಿ ಕಪ್ ಪಂದ್ಯದಲ್ಲಿ ಮುಂಬೈ ಪರ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿರುವ ಸರ್ಫರಾಝ್ ಉತ್ತಮ ಫಾರ್ಮ್​ನಲ್ಲಿದ್ದು, ಹೀಗಾಗಿ ಗಿಲ್ ಬದಲಿಗೆ ಅವರಿಗೆ ಚಾನ್ಸ್ ಸಿಗಬಹುದು.

4 / 6
ಒಂದು ವೇಳೆ ಸರ್ಫರಾಝ್ ಖಾನ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಲಭಿಸಿದರೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಕಂಡು ಬರಬಹುದು. ಇಲ್ಲಿ 5ನೇ ಕ್ರಮಾಂಕದಲ್ಲಿ ಆಡುತ್ತಿರುವ ಕೆಎಲ್ ರಾಹುಲ್​ಗೆ ಮುಂಬಡ್ತಿ ನೀಡಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಅಲ್ಲದೆ ಸರ್ಫರಾಝ್ ಅವರನ್ನು 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಸಬಹುದು. ಅದರಂತೆ ಟೀಮ್ ಇಂಡಿಯಾದ ಸಂಭವನೀಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

5 / 6
ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ರಿಷಭ್ ಪಂತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್.

6 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.