- Kannada News Photo gallery Cricket photos IND vs NZ: Shubman Gill will be available for the 2nd Test
IND vs NZ: ಟೀಮ್ ಇಂಡಿಯಾಗೆ ಗುಡ್ ನ್ಯೂಸ್: ಯುವ ದಾಂಡಿಗ ರಿಎಂಟ್ರಿ
India vs New Zealand 2nd Test: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಗುರುವಾರದಿಂದ ಶುರುವಾಗಲಿದೆ. ಅಕ್ಟೋಬರ್ 24 ರಿಂದ ಆರಂಭವಾಗಲಿರುವ ಈ ಪಂದ್ಯಕ್ಕೆ ಪುಣೆಯ ಎಂಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯುವ ದಾಂಡಿಗ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.
Updated on: Oct 22, 2024 | 2:56 PM

ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಯುವ ದಾಂಡಿಗ ಶುಭ್ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಗಿಲ್ ಈಗ ಸಂಪೂರ್ಣ ಫಿಟ್ ಆಗಿದ್ದು, ಪುಣೆಯಲ್ಲಿ ನಡೆಯಲಿರುವ 2ನೇ ಪಂದ್ಯಕ್ಕೆ ಲಭ್ಯರಿರಲಿದ್ದಾರೆ ಎಂದು ಟೀಮ್ ಇಂಡಿಯಾದ ಸಹಾಯಕ ಕೋಚ್ ರಿಯಾನ್ ಟೆನ್ ದೋಸ್ಹಾಟೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಶುಭ್ಮನ್ ಗಿಲ್ ಕತ್ತು ಮತ್ತು ಭುಜದ ನೋವಿಗೆ ಒಳಗಾಗಿದ್ದರು. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅಲ್ಲದೆ ಗಿಲ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಸರ್ಫರಾಝ್ ಖಾನ್ ಕಾಣಿಸಿಕೊಂಡಿದ್ದರು.

ಇದೀಗ ಶುಭ್ಮನ್ ಗಿಲ್ ಆಗಮನದೊಂದಿಗೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಿಂದ ಒಬ್ಬ ಆಟಗಾರ ಹೊರಬೀಳಲಿದ್ದಾರೆ. ಇಲ್ಲಿ ಮೊದಲ ಪಂದ್ಯದಲ್ಲಿ ಸರ್ಫರಾಝ್ ಖಾನ್ 150 ರನ್ ಬಾರಿಸಿರುವ ಕಾರಣ ಅವರನ್ನು ಕೈ ಬಿಡುವ ಸಾಧ್ಯತೆಯಿಲ್ಲ ಎನ್ನಬಹುದು.

ಆದರೆ ಗಿಲ್ಗೆ ಸ್ಥಾನ ಕಲ್ಪಿಸಲು ಓರ್ವ ಬ್ಯಾಟರ್ನನ್ನು ಕೈ ಬಿಡಬೇಕಾದ ಅನಿವಾರ್ಯತೆಯಂತು ಇದೆ. ಹೀಗಾಗಿ ಮೊದಲ ಪಂದ್ಯದಲ್ಲಿ ವಿಫಲರಾಗಿರುವ ಕೆಎಲ್ ರಾಹುಲ್ ಅವರನ್ನು ಟೆಸ್ಟ್ ಪಂದ್ಯದಿಂದ ಕೈ ಬಿಡುವ ಸಾಧ್ಯತೆಯಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.
