IND vs NZ: ಟೀಮ್ ಇಂಡಿಯಾಗೆ ಗುಡ್ ನ್ಯೂಸ್: ಯುವ ದಾಂಡಿಗ ರಿಎಂಟ್ರಿ

|

Updated on: Oct 22, 2024 | 2:56 PM

India vs New Zealand 2nd Test: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಗುರುವಾರದಿಂದ ಶುರುವಾಗಲಿದೆ. ಅಕ್ಟೋಬರ್ 24 ರಿಂದ ಆರಂಭವಾಗಲಿರುವ ಈ ಪಂದ್ಯಕ್ಕೆ ಪುಣೆಯ ಎಂಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯುವ ದಾಂಡಿಗ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

1 / 5
ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಯುವ ದಾಂಡಿಗ ಶುಭ್​ಮನ್ ಗಿಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಗಿಲ್ ಈಗ ಸಂಪೂರ್ಣ ಫಿಟ್ ಆಗಿದ್ದು, ಪುಣೆಯಲ್ಲಿ ನಡೆಯಲಿರುವ 2ನೇ ಪಂದ್ಯಕ್ಕೆ ಲಭ್ಯರಿರಲಿದ್ದಾರೆ ಎಂದು ಟೀಮ್ ಇಂಡಿಯಾದ ಸಹಾಯಕ ಕೋಚ್ ರಿಯಾನ್ ಟೆನ್ ದೋಸ್ಹಾಟೆ ತಿಳಿಸಿದ್ದಾರೆ.

2 / 5
ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಶುಭ್​ಮನ್ ಗಿಲ್ ಕತ್ತು ಮತ್ತು ಭುಜದ ನೋವಿಗೆ ಒಳಗಾಗಿದ್ದರು. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅಲ್ಲದೆ ಗಿಲ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸರ್ಫರಾಝ್ ಖಾನ್ ಕಾಣಿಸಿಕೊಂಡಿದ್ದರು.

3 / 5
ಇದೀಗ ಶುಭ್​ಮನ್ ಗಿಲ್ ಆಗಮನದೊಂದಿಗೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಿಂದ ಒಬ್ಬ ಆಟಗಾರ ಹೊರಬೀಳಲಿದ್ದಾರೆ. ಇಲ್ಲಿ ಮೊದಲ ಪಂದ್ಯದಲ್ಲಿ ಸರ್ಫರಾಝ್ ಖಾನ್ 150 ರನ್ ಬಾರಿಸಿರುವ ಕಾರಣ ಅವರನ್ನು ಕೈ ಬಿಡುವ ಸಾಧ್ಯತೆಯಿಲ್ಲ ಎನ್ನಬಹುದು.

4 / 5
ಆದರೆ ಗಿಲ್​ಗೆ ಸ್ಥಾನ ಕಲ್ಪಿಸಲು ಓರ್ವ ಬ್ಯಾಟರ್​ನನ್ನು ಕೈ ಬಿಡಬೇಕಾದ ಅನಿವಾರ್ಯತೆಯಂತು ಇದೆ. ಹೀಗಾಗಿ ಮೊದಲ ಪಂದ್ಯದಲ್ಲಿ ವಿಫಲರಾಗಿರುವ ಕೆಎಲ್ ರಾಹುಲ್ ಅವರನ್ನು ಟೆಸ್ಟ್ ಪಂದ್ಯದಿಂದ ಕೈ ಬಿಡುವ ಸಾಧ್ಯತೆಯಿದೆ.

5 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.