AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ವರ್ಷದಲ್ಲಿ ಸಾವಿರ ರನ್; ಇತಿಹಾಸ ಬರೆದ ಯಶಸ್ವಿ ಜೈಸ್ವಾಲ್

Yashasvi Jaiswal: ಪುಣೆ ಟೆಸ್ಟ್‌ನ ಎರಡನೇ ದಿನದಂದು 30 ರನ್‌ಗಳ ಇನ್ನಿಂಗ್ಸ್ ಆಡಿದ ಜೈಸ್ವಾಲ್, ಈ ಮೂಲಕ 2024ರಲ್ಲಿ ಟೆಸ್ಟ್‌ನಲ್ಲಿ 1000 ರನ್ ಪೂರೈಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಯಶಸ್ವಿ ಜೈಸ್ವಾಲ್ 2024 ರಲ್ಲಿ ಇದುವರೆಗೆ ಆಡಿರುವ 10 ಟೆಸ್ಟ್‌ಗಳಲ್ಲಿ 59.23 ಸರಾಸರಿ ಮತ್ತು 76 ಸ್ಟ್ರೈಕ್ ರೇಟ್‌ನಲ್ಲಿ 1007 ರನ್ ಗಳಿಸಿದ್ದಾರೆ.

ಪೃಥ್ವಿಶಂಕರ
|

Updated on: Oct 25, 2024 | 3:45 PM

Share
ಪುಣೆಯಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ 30 ರನ್​ಗಳ ಇನ್ನಿಂಗ್ಸ್ ಆಡಿದರು. ಜೈಸ್ವಾಲ್​ಗೆ ಉತ್ತಮ ಆರಂಭ ಸಿಕ್ಕ ಹೊರತಾಗಿಯೂ ಅದನ್ನು ಬಿಗ್ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ವಿಫಲರಾದರು. ಆದಾಗ್ಯೂ ಜೈಸ್ವಾಲ್ ಟೆಸ್ಟ್ ಕ್ರಿಕೆಟ್​ನಲ್ಲಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 5
ಪುಣೆ ಟೆಸ್ಟ್‌ನ ಎರಡನೇ ದಿನದಂದು 30 ರನ್‌ಗಳ ಇನ್ನಿಂಗ್ಸ್ ಆಡಿದ ಜೈಸ್ವಾಲ್, ಈ ಮೂಲಕ 2024ರಲ್ಲಿ ಟೆಸ್ಟ್‌ನಲ್ಲಿ 1000 ರನ್ ಪೂರೈಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಯಶಸ್ವಿ ಜೈಸ್ವಾಲ್ 2024 ರಲ್ಲಿ ಇದುವರೆಗೆ ಆಡಿರುವ 10 ಟೆಸ್ಟ್‌ಗಳಲ್ಲಿ 59.23 ಸರಾಸರಿ ಮತ್ತು 76 ಸ್ಟ್ರೈಕ್ ರೇಟ್‌ನಲ್ಲಿ 1007 ರನ್ ಗಳಿಸಿದ್ದಾರೆ.

2 / 5
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಇಂಗ್ಲೆಂಡ್​ನ ಜೋ ರೂಟ್ 14 ಟೆಸ್ಟ್‌ಗಳಲ್ಲಿ 60 ಸರಾಸರಿಯಲ್ಲಿ 1305 ರನ್ ಗಳಿಸಿದ್ದಾರೆ. ಈ ವರ್ಷ ರೂಟ್, 5 ಶತಕ ಮತ್ತು 4 ಅರ್ಧ ಶತಕಗಳನ್ನು ಸಿಡಿಸಿದ್ದಾರೆ. ಈ ವರ್ಷ ಮುಲ್ತಾನ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಡಿದ ಟೆಸ್ಟ್‌ನಲ್ಲಿ ರೂಟ್ ಗರಿಷ್ಠ 262 ರನ್​ಗಳ ಇನ್ನಿಂಗ್ಸ್ ಕೂಡ ಆಡಿದ್ದರು.

3 / 5
ಇನ್ನು ಜೈಸ್ವಾಲ್ ಈ ವರ್ಷದ ಆರಂಭದಲ್ಲಿ ರಾಜ್‌ಕೋಟ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 214 ರನ್​ ಬಾರಿಸಿದ್ದರು. ಇದಕ್ಕೂ ಮುನ್ನ ವೈಜಾಗ್ ಟೆಸ್ಟ್‌ನಲ್ಲಿ 209 ರನ್‌ಗಳ ಇನ್ನಿಂಗ್ಸ್‌ ಕೂಡ ಆಡಿದ್ದರು. ಕಳೆದ ವರ್ಷ, ವೆಸ್ಟ್ ಇಂಡೀಸ್ ವಿರುದ್ಧದ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲಿ ಜೈಸ್ವಾಲ್ 171 ರನ್‌ಗಳ ಸ್ಮರಣೀಯ ಇನ್ನಿಂಗ್ಸ್‌ ಆಡಿದ್ದರು.

4 / 5
ಪ್ರಸಕ್ತ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಶಸ್ವಿ ಉತ್ತಮ ಆರಂಭ ಕಂಡರೂ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ವಿಫಲರಾಗಿದ್ದಾರೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಜೈಸ್ವಾಲ್ ಕ್ರಮವಾಗಿ 13 ಮತ್ತು 35 ರನ್ ಗಳಿಸಿದ್ದರು. ಈ ಟೆಸ್ಟ್ ಪಂದ್ಯವನ್ನು ಭಾರತ 8 ವಿಕೆಟ್‌ಗಳಿಂದ ಸೋತಿದ್ದು, ಸರಣಿಯಲ್ಲಿ 0-1 ಯಿಂದ ಹಿನ್ನಡೆ ಅನುಭವಿಸಿದೆ. ಇನ್ನು ಎರಡನೇ ಟೆಸ್ಟ್‌ನಲ್ಲೂ ಉತ್ತಮ ಆರಂಭ ಪಡೆದ ಜೈಸ್ವಾಲ್ 60 ಎಸೆತಗಳಲ್ಲಿ ನಾಲ್ಕು ಬೌಂಡರಿ ಸಹಿತ 30 ರನ್ ಬಾರಿಸಿ ಔಟಾದರು.

5 / 5