- Kannada News Photo gallery Cricket photos IND vs PAK Asia Cup 2022 Pakistan does not have a Hardik Pandya like all rounder said former pacer Aaqib Javed
Hardik Pandya: ನಮ್ಮ ತಂಡದಲ್ಲಿ ಹಾರ್ದಿಕ್ ಪಾಂಡ್ಯರಂತಹ ಆಟಗಾರ ಇಲ್ಲ ಎಂದ ಪಾಕಿಸ್ತಾನ ಕ್ರಿಕೆಟಿಗ
IND vs PAK, Asia Cup 2022: ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿ 2022ಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಏಷ್ಯಾಕಪ್ ಟೂರ್ನಿಗಿಂತ ಹೆಚ್ಚು ಕ್ರೇಜ್ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯಕ್ಕಿದೆ.
Updated on:Aug 14, 2022 | 11:29 AM

ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿ 2022ಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಏಷ್ಯಾಕಪ್ ಟೂರ್ನಿಗಿಂತ ಹೆಚ್ಚು ಕ್ರೇಜ್ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯಕ್ಕಿದೆ. ಆಗಸ್ಟ್ 28ರಂದು ನಡೆಯಲಿರುವ ಸಾಂಪ್ರದಾಯಿಕ ಎದುರಾಳಿಗಳ ನಡುವಣ ಈ ಹೈ-ವೋಲ್ಟೇಜ್ ಪಂದ್ಯ ವೀಕ್ಷಿಸಲು ಕ್ರಿಕೆಟ್ ಅಭಿಮಾನಿಗಳು ಬಹಳಾ ಕಾತುರದಿಂದ ಎದುರು ನೋಡುತ್ತಿದ್ದಾರೆ.

ಹೀಗಿರುವಾಗ ಪಾಕಿಸ್ತಾನ ತಂಡದ ಮಾಜಿ ವೇಗಿ ಅಖಿಬ್ ಜಾವೆದ್ ಏಷ್ಯಾಕಪ್ ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ಬಗ್ಗೆ ಮಾತನಾಡಿದ್ದಾರೆ. ಯಾವ ವಿಭಾಗದಲ್ಲಿ ಯಾವ ತಂಡ ಬಲಿಷ್ಠ ಎಂಬ ಕುರಿತು ಇವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಎರಡೂ ತಂಡಗಳ ಬ್ಯಾಟಿಂಗ್ ವಿಭಾಗದಲ್ಲಿ ಸಾಕಷ್ಟು ಬದಲಾವಣೆಗಳಿವೆ. ಭಾರತ ಪರ ರೋಹಿತ್ ಶರ್ಮಾ ಸೆಟ್ ಆಗಿ ಆಡಿದರು ಎಂದಾದರೆ ಏಕಾಂಗಿಯಾಗಿ ನಿಂತು ಪಂದ್ಯವನ್ನು ಗೆಲ್ಲಿಸಿಕೊಡುತ್ತಾರೆ. ಇತ್ತ ಪಾಕ್ ತಂಡದಲ್ಲಿ ಫಖರ್ ಜಮಾಮ್ ಕೂಡ ಹೀಗೆ. ಫಖರ್ ಕಂಟ್ರೊಲ್ ಪಡೆದುಕೊಂಡು ಆಡಿದರೆ ಪಾಕಿಸ್ತಾನಕ್ಕೆ ಗೆಲುವು ಖಚಿತ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮಧ್ಯಮ ಕ್ರಮಾಂಕ ಭಾರತದಷ್ಟು ಬಲಿಷ್ಠವಾಗಿಲ್ಲ. ಯಾಕೆಂದರೆ ಟೀಮ್ ಇಂಡಿಯಾದಲ್ಲಿ ಆಲ್ರೌಂಡರ್ ಗಳಿದ್ದಾರೆ. ಮುಖ್ಯವಾಗಿ ಹಾರ್ದಿಕ್ ಪಾಂಡ್ಯ ರೀತಿಯ ಆಟಗಾರ ನಮ್ಮ ತಂಡದಲ್ಲಿ ಇಲ್ಲ ಎಂದು ಅಖಿಬ್ ಜಾವೆದ್ ಹೇಳಿದ್ದಾರೆ.

ಇನ್ನು ಏಷ್ಯಾಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವು ದಾಖಲು ಮಾಡಲಿದೆ ಎಂದು ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಪ್ರಶಸ್ತಿ ಎತ್ತಿ ಹಿಡಿಯುವ ಸಾಮರ್ಥ್ಯ ಟೀಮ್ ಇಂಡಿಯಾ ಬಳಿ ಇದೆ ಎಂದಿದ್ದಾರೆ.

ಏಷ್ಯಾಕಪ್ ಮಾತ್ರವಲ್ಲದೇ ಯಾವುದೇ ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸುವುದು ಕಷ್ಟ. ಮುಂಬರುವ ಟಿ20 ವಿಶ್ವಕಪ್ ನಲ್ಲೂ ಭಾರತ ಪ್ರಬಲ ಸ್ಪರ್ಧಿಯಾಗಲಿದೆ. ಟೀಮ್ ಇಂಡಿಯಾ ಬ್ಯಾಟಿಂಗ್, ಬೌಲಿಂಗ್ ವಿಭಾಗ ಇತರೆ ತಂಡಗಳಿಗಿಂತಲೂ ಉತ್ತಮವಾಗಿದ್ದು, ಏಷ್ಯಾಕಪ್ ಎತ್ತಿ ಹಿಡಿಯುವ ಎಲ್ಲ ಸಾಮರ್ಥ್ಯ ಹೊಂದಿದೆ ಎಂದಿದ್ದಾರೆ.

ಏಷ್ಯಾಕಪ್ ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.
Published On - 11:29 am, Sun, 14 August 22




