- Kannada News Photo gallery Cricket photos IND vs PAK Asia Cup 2023 KL Rahul Equals Virat Kohlis 12 years old Elite Record
ಕಿಂಗ್ ಕೊಹ್ಲಿಯ 12 ವರ್ಷದ ಹಿಂದಿನ ದಾಖಲೆಯನ್ನು ಸರಿಗಟ್ಟಿದ ಕೆಎಲ್ ರಾಹುಲ್..!
KL Rahul: ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.
Updated on: Sep 11, 2023 | 10:32 AM

ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್ ಕೊಹ್ಲಿಯ 12 ವರ್ಷಗಳ ಹಿಂದಿನ ದಾಖಲೆಯನ್ನು ಸರಿಗಟ್ಟಿದ್ದಾರೆ.

ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಗಿಲ್ ವಿಕೆಟ್ ಬಳಿಕ ರಾಹುಲ್ ಅಜೇಯ 17 ರನ್ಗಳಿಸುವ ಮೂಲಕ ಟೀಂ ಇಂಡಿಯಾ ಪರ ಅತಿ ಕಡಿಮೆ ಏಕದಿನ ಪಂದ್ಯಗಳಲ್ಲಿ 2000 ರನ್ ಪೂರೈಸಿದ ಮೂರನೇ ಆಟಗಾರನೆನಿಸಿಕೊಂಡಿದ್ದಾರೆ.

ಇನ್ನು ರಾಹುಲ್ ಈ ಮೈಲಿಗಲ್ಲನ್ನು ಸ್ಥಾಪಿಸಲು 53 ಏಕದಿನ ಇನ್ನಿಂಗ್ಸ್ಗಳನ್ನು ತೆಗೆದುಕೊಂಡಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 12 ವರ್ಷಗಳ ಹಿಂದೆ ಇಷ್ಟೇ ಸಂಖ್ಯೆಯ ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದರು.

ಅತಿ ಕಡಿಮೆ ಏಕದಿನ ಇನ್ನಿಂಗ್ಸ್ಗಳಲ್ಲಿ 2000 ರನ್ ಪೂರೈಸಿದ ಭಾರತೀಯರ ಪೈಕಿ ಮಾಜಿ ಆರಂಭಿಕ ಶಿಖರ್ ಧವನ್ ಮೊದಲ ಸ್ಥಾನದಲ್ಲಿದ್ದಾರೆ. ಧವನ್ ಕೇವಲ 48 ಇನ್ನಿಂಗ್ಸ್ಗಳಲ್ಲಿ ಈ ದಾಖಲೆ ನಿಮ್ಮಿಸಿದ್ದರು.

ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರಾದ ನವಜೋತ್ ಸಿಧು ಮತ್ತು ಸೌರವ್ ಗಂಗೂಲಿ ಇದ್ದು, ಈ ಇಬ್ಬರು 52 ಏಕದಿನ ಇನ್ನಿಂಗ್ಸ್ಗಳಲ್ಲಿ 2000 ರನ್ ಪೂರೈಸಿದ್ದರು.

ಏತನ್ಮಧ್ಯೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಮಳೆಯಿಂದ ರದ್ದುಗೊಳಿಸಲಾಗಿದ್ದು, ಈ ಪಂದ್ಯವನ್ನು ಮೀಸಲು ದಿನದಂದು ಅಂದರೆ ಇಂದು ಪೂರ್ಣಗೊಳಿಸಲಾಗುತ್ತದೆ. ಪ್ರಸ್ತುತ ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, 2 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿದೆ.

ತಂಡದ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಅರ್ಧಶತಕ ಸಿಡಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ರೋಹಿತ್ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಸಿಡಿಸಿದರೆ, ಗಿಲ್ 52 ಎಸೆತಗಳಲ್ಲಿ 10 ಬೌಂಡರಿ ಸಹಿತ 58 ರನ್ ಬಾರಿಸಿದರು.

ಇನ್ನು ಮೀಸಲು ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ 17 ಮತ್ತು 8 ರನ್ ಬಾರಿಸಿದ್ದಾರೆ. ಪಾಕ್ ಬೌಲರ್‌ಗಳ ಪೈಕಿ ಶಾಹೀನ್ ಅಫ್ರಿದಿ ಮತ್ತು ಶಾದಾಬ್ ಖಾನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ



















