ಭಯ ಬಿದ್ದೇ ಅತ್ಯಂತ ಕೆಟ್ಟ ದಾಖಲೆಗೆ ಕೊರಳೊಡ್ಡಿದ ರಿಝ್ವಾನ್

Updated on: Feb 24, 2025 | 12:48 PM

India vs Pakistan: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 241 ರನ್ ಕಲೆಹಾಕಿದರೆ. ಈ ಗುರಿಯನ್ನು ಟೀಮ್ ಇಂಡಿಯಾ 42.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಇನ್ನು ಈ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿ ಪಾಕ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಹೀನಾಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 6
ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಈ ರೆಕಾರ್ಡ್​ಗಳ ನಡುವೆ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಅನಗತ್ಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಸಹ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ..!

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಈ ರೆಕಾರ್ಡ್​ಗಳ ನಡುವೆ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಅನಗತ್ಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಸಹ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ..!

2 / 6

ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕ್ ತಂಡವು 47 ರನ್​ಗಳಿಗೆ ಆರಂಭಿಕರಿಬ್ಬರ ವಿಕೆಟ್ ಕಳೆದುಕೊಂಡಿತು.

3 / 6

ಈ ಹಂತದಲ್ಲಿ ಕಣಕ್ಕಿಳಿದ ಮೊಹಮ್ಮದ್ ರಿಝ್ವಾನ್ ಟೀಮ್ ಇಂಡಿಯಾ ಬೌಲರ್​ಗಳನ್ನು ಎದುರಿಸಲು ತಡಕಾಡಿದರು. ಅದರಲ್ಲೂ ಕೆಲ ಹಂತದಲ್ಲಿ ವಿಕೆಟ್ ಕಳೆದುಕೊಳ್ಳುವ ಭಯ ಭೀತಿಯಲ್ಲೇ ಬ್ಯಾಟಿಂಗ್ ಮಾಡುತ್ತಿದ್ದರು. ಪರಿಣಾಮ 46 ರನ್​ಗಳಿಸಲು ಮೊಹಮ್ಮದ್ ರಿಝ್ವಾನ್ ಬರೋಬ್ಬರಿ 77 ಎಸೆತಗಳನ್ನು ತೆಗೆದುಕೊಂಡಿದ್ದಾರೆ.

4 / 6

2004 ರಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪಾಕ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಯೀನ್ ಖಾನ್ 78 ಎಸೆತಗಳಲ್ಲಿ 52 ರನ್ ಮಾತ್ರ ಬಾರಿಸಿದ್ದರು. ಇದೀಗ ಭಾರತದ ವಿರುದ್ಧ ಮೊಹಮ್ಮದ್ ರಿಝ್ವಾನ್ 59.74ರ ಸ್ಟ್ರೈಕ್ ರೇಟ್​ನಲ್ಲಿ ಕೇವಲ 46 ರನ್ ಬಾರಿಸಿ ಅತ್ಯಂತ ಕೆಟ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6

ಇದರೊಂದಿಗೆ ಈ ಶತಮಾನದಲ್ಲಿ ಕನಿಷ್ಠ 75 ಎಸೆತಗಳನ್ನು ಎದುರಿಸಿ ಅತ್ಯಂತ ನಿಧಾನಗತಿಯ ಇನ್ನಿಂಗ್ಸ್ ಆಡಿದ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಎಂಬ ಅನಗತ್ಯ ದಾಖಲೆಯೊಂದು ರಿಝ್ವಾನ್ ಪಾಲಾಯಿತು. ಇದಕ್ಕೂ ಮುನ್ನ ಇಂತಹದೊಂದು ಕೆಟ್ಟ ದಾಖಲೆ ಮೊಯೀನ್ ಖಾನ್ ಹೆಸರಿನಲ್ಲಿತ್ತು.

6 / 6

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 49.4 ಓವರ್​ಗಳಲ್ಲಿ 241 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು. ಈ ಶತಕದ ನೆರವಿನಿಂದ ಭಾರತ ತಂಡವು 42.3 ಓವರ್​ಗಳಲ್ಲಿ 244 ರನ್ ಬಾರಿಸಿ 6 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

Loading...
Unable to load recommendations.
Follow Us