IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Oct 23, 2022 | 6:53 PM

Rohit Sharma: ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

1 / 7
IND vs PAK: ಮೆಲ್ಬೋರ್ನ್​ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

2 / 7
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ  ಒಟ್ಟು 16 ತಂಡಗಳು ಕಣಕ್ಕಿಳಿದಿತ್ತು. ಈ ಹದಿನಾರು ತಂಡಗಳಲ್ಲಿ ಒಟ್ಟು 240 ಆಟಗಾರರು ಸ್ಥಾನ ಪಡೆದಿದ್ದರು. ವಿಶೇಷ ಎಂದರೆ ಈ 240 ಆಟಗಾರರಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಇದುವರೆಗಿನ ಎಲ್ಲಾ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

3 / 7
ಅವರಲ್ಲಿ ಇದೀಗ ಎಲ್ಲಾ 8 ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ.

4 / 7
ಅಂದರೆ 2007 ಚೊಚ್ಚಲ ಟಿ20 ವಿಶ್ವಕಪ್​ನಿಂದ ಹಿಡಿದು 2009, 2010, 2012, 2014, 2016, 2021 ಮತ್ತು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಆಡಿದ ಮೊದಲ ಆಟಗಾರನಾಗಿ ರೋಹಿತ್ ಶರ್ಮಾ ಹೊರಹೊಮ್ಮಿದ್ದಾರೆ.

5 / 7
ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಯಾರು ಮಾಡದ ವಿಶೇಷ ಸಾಧನೆಯನ್ನು ರೋಹಿತ್ ಶರ್ಮಾ ಬರೆದಿಟ್ಟಿದ್ದಾರೆ. ಇನ್ನು ಬಾಂಗ್ಲಾದೇಶದ ತಂಡದ ನಾಯಕ ಶಕೀಬ್ ಅಲ್ ಹಸನ್​ಗೂ ಈ ಸಾಧನೆ ಮಾಡುವ ಅವಕಾಶವಿದೆ.

6 / 7
ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ 2007 ರಿಂದ ಎಲ್ಲಾ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ಬಾರಿ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷ. ಇದೀಗ ಸೂಪರ್​-12 ನಲ್ಲಿ ಬಾಂಗ್ಲಾ ಪರ ಶಕೀಬ್ ಕಣಕ್ಕಿಳಿದರೆ ಈ ಸಾಧನೆ ಮಾಡಿದ 2ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

7 / 7
2007 ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಹಿಟ್​​ಮ್ಯಾನ್, ಆ ಬಳಿಕ ಪ್ರತಿ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೀಗ ಮೊದಲ ಬಾರಿಗೆ ನಾಯಕನಾಗಿ ಟಿ20 ವಿಶ್ವಕಪ್ ಆಡುತ್ತಿರುವುದು ವಿಶೇಷ.