IND vs PAK: ರೋಹಿತ್ ಶರ್ಮಾ ‘ಮಿಷನ್ 89’: ಹೀಗಾದ್ರೆ ಪಾಕ್​ಗೆ ಸೋಲು ಖಚಿತ..!

IND vs PAK: ಭಾರತ-ಪಾಕಿಸ್ತಾನ್ ನಡುವಣ ಪಂದ್ಯವು ಆಗಸ್ಟ್ 28 ರಂದು ನಡೆಯಲಿದೆ. ದುಬೈ ಇಂಟರ್​​ನ್ಯಾಷನಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

TV9 Web
| Updated By: ಝಾಹಿರ್ ಯೂಸುಫ್

Updated on: Aug 25, 2022 | 12:55 PM

ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಆಗಸ್ಟ್ 28 ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಭರ್ಜರಿ ಸಿದ್ದತೆಯಲ್ಲಿದೆ. ಅದರಲ್ಲೂ ನಾಯಕ ರೋಹಿತ್ ಶರ್ಮಾ ವಿಶೇಷ ಯೋಜನೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಆರಂಭಿಕರಾಗಿ ಆಡಲಿರುವ ಹಿಟ್​ಮ್ಯಾನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಪಾಕ್ ತಂಡಕ್ಕೆ ಸೋಲು ಖಚಿತ ಎನ್ನಬಹುದು. ಮತ್ತೊಂದೆಡೆ ಹೊಸ ದಾಖಲೆ ಕೂಡ ರೋಹಿತ್ ಶರ್ಮಾ ಪಾಲಾಗಲಿದೆ. ಅದರಂತೆ ಮಿಷನ್ 89 ಯೋಜನೆಯೊಂದಿಗೆ ಹಿಟ್​ಮ್ಯಾನ್ ಕಣಕ್ಕಿಳಿಯಲಿದ್ದಾರೆ. ಏನಿದು ಮಿಷನ್ 89...?

1 / 5
ಮಿಷನ್ 89 ರೋಹಿತ್ ಶರ್ಮಾ ಮುಂದಿರುವ ಟಾರ್ಗೆಟ್. ಅಂದರೆ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಹಿಟ್​ಮ್ಯಾನ್ 89 ರನ್ ಬಾರಿಸಿದರೆ ಏಷ್ಯಾಕಪ್​ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ ಎನಿಸಿಕೊಳ್ಳಲಿದ್ದಾರೆ. ಇದೀಗ ಅದೇ ಟಾರ್ಗೆಟ್​ನಲ್ಲಿ ರೋಹಿತ್ ಶರ್ಮಾ ಬ್ಯಾಟ್ ಬೀಸಿದರೆ ಅತ್ತ ಪಾಕ್ ವಿರುದ್ದ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಬಹುದು. ಅಲ್ಲದೆ ಈ ಮೂಲಕ ಗೆಲ್ಲುವ ಅವಕಾಶವನ್ನು ಸೃಷ್ಟಿಸಿಕೊಳ್ಳಬಹುದು.

2 / 5
ಪ್ರಸ್ತುತ, ಏಷ್ಯಾ ಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ಅವರು 23 ಪಂದ್ಯಗಳಲ್ಲಿ 2 ಶತಕ ಮತ್ತು 7 ಅರ್ಧ ಶತಕಗಳೊಂದಿಗೆ 971 ರನ್ ಗಳಿಸಿದ್ದಾರೆ.

3 / 5
27 ಪಂದ್ಯಗಳಲ್ಲಿ 1 ಶತಕ ಮತ್ತು 7 ಅರ್ಧಶತಕಗಳೊಂದಿಗೆ 883 ರನ್ ಗಳಿಸಿರುವ ರೋಹಿತ್ ಶರ್ಮಾ ಭಾರತೀಯ ರನ್‌ ಸರದಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಪಾಕ್ ವಿರುದ್ದದ ಪಂದ್ಯದಲ್ಲಿ 89 ರನ್ ಗಳಿಸುವ ಮೂಲಕ ರೋಹಿತ್ ಶರ್ಮಾ ಸಚಿನ್ ಅವರ ದಾಖಲೆಯನ್ನು ಹಿಂದಿಕ್ಕಬಹುದು.

4 / 5
ಇನ್ನು ಶ್ರೀಲಂಕಾದ ಸನತ್ ಜಯಸೂರ್ಯ ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಜಯಸೂರ್ಯ 1220 ರನ್​ಗಳಿಸಿದರೆ,  ಶ್ರೀಲಂಕಾದ ಕುಮಾರ ಸಂಗಕ್ಕಾರ 1075 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.  ಇನ್ನು ಸಚಿನ್ ತೆಂಡೂಲ್ಕರ್ ಮೂರನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ ಪ್ರಸ್ತುತ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

5 / 5
Follow us
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ