IND vs PAK: ದಿನೇಶ್ ಕಾರ್ತಿಕ್​ರನ್ನು ತಂಡದಿಂದ ಕೈ ಬಿಡಲು ಇದುವೇ ಕಾರಣ..!

| Updated By: ಝಾಹಿರ್ ಯೂಸುಫ್

Updated on: Sep 04, 2022 | 11:25 PM

Dinesh Karthik: ಜಡೇಜಾ ಸ್ಥಾನದಲ್ಲಿ ದೀಪಕ್ ಹೂಡಾ ಕಾಣಿಸಿಕೊಂಡಿದ್ದರು. ಮತ್ತೊಂದೆಡೆ ದಿನೇಶ್ ಕಾರ್ತಿಕ್ ಬದಲಿಗೆ ರಿಷಭ್ ಪಂತ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು.

1 / 6
ದುಬೈನಲ್ಲಿ ನಡೆದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ದಿನೇಶ್ ಕಾರ್ತಿಕ್ ಕಣಕ್ಕಿಳಿದಿರಲಿಲ್ಲ. ಈ ಪಂದ್ಯದ ಟಾಸ್ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೀಮ್​ನಲ್ಲಿ 3 ಬದಲಾವಣೆ ಮಾಡಿರುವುದು ಖಚಿತಪಡಿಸಿದ್ದರು.

2 / 6
ಅದರಂತೆ ಅವೇಶ್ ಖಾನ್ ಬದಲಿಗೆ ರವಿ ಬಿಷ್ಣೋಯ್ ಹಾಗೂ ರವೀಂದ್ರ ಜಡೇಜಾ ಸ್ಥಾನದಲ್ಲಿ ದೀಪಕ್ ಹೂಡಾ ಕಾಣಿಸಿಕೊಂಡಿದ್ದರು. ಮತ್ತೊಂದೆಡೆ ದಿನೇಶ್ ಕಾರ್ತಿಕ್ ಬದಲಿಗೆ ರಿಷಭ್ ಪಂತ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು.

3 / 6
ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಪಾಂಡ್ಯ ಬದಲಿಗೆ ಪಂತ್ ಕಾಣಿಸಿಕೊಂಡಿದ್ದರು. ಆದರೆ ಪಾಕ್ ವಿರುದ್ದ ಪಾಂಡ್ಯ ತಂಡಕ್ಕೆ ಮರಳಿದ್ದು ಹೀಗಾಗಿ ದಿನೇಶ್ ಕಾರ್ತಿಕ್ ಅವರನ್ನು ಕೈ ಬಿಡಲಾಯಿತು.

4 / 6
ಇಲ್ಲಿ ಡಿಕೆ ಅವರನ್ನು ಕೈ ಬಿಡಲು ಮುಖ್ಯ ಕಾರಣ ಎಡಗೈ ಬ್ಯಾಟ್ಸ್​ಮನ್​ನ ಆಯ್ಕೆ. ಅಂದರೆ ತಂಡದಲ್ಲಿ ಏಕೈಕ ಎಡಗೈ ಬ್ಯಾಟ್ಸ್​ಮನ್​ ಆಗಿದ್ದ ಜಡೇಜಾ ಗಾಯಗೊಂಡು ಹೊರಬಿದ್ದಿದ್ದರು. ಹೀಗಾಗಿ ಮತ್ತೋರ್ವ ಎಡಗೈ ಆಟಗಾರನನ್ನು ಆಡಿಸಬೇಕಾದ ಅನಿವಾರ್ಯತೆ ಇತ್ತು.

5 / 6
ಹೀಗಾಗಿ ಎಡಗೈ ದಾಂಡಿಗ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಆಯ್ಕೆ ಮಾಡಲಾಗಿದೆ. ಇದರಿಂದ ದಿನೇಶ್ ಕಾರ್ತಿಕ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿಯಬೇಕಾಯಿತು.

6 / 6
ಪಾಕ್ ವಿರುದ್ಧ ಕಣಕ್ಕಿಳಿದ ಟೀಮ್ ಇಂಡಿಯಾ ಪ್ಲೇಯಿಂಗ್ XI: ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್