AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 2nd ODI: ಭಾರತ- ದ. ಆಫ್ರಿಕಾ ದ್ವಿತೀಯ ಏಕದಿನದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

ರಾಂಚಿಯ ಜೆಎಸ್​​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on: Oct 10, 2022 | 10:37 AM

Share
ರಾಂಚಿಯ ಜೆಎಸ್​​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಜಯ ಸಾಧಿಸಿದೆ. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬೌಲರ್​ಗಳು ನಿರೀಕ್ಷೆಗೆ ತಕ್ಕಂತೆ ಯಶಸ್ಸು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ, ಟೀಮ್ ಇಂಡಿಯಾ ಬ್ಯಾಟರ್​ಗಳು ಅಮೋಘ ಆಟ ಪ್ರದರ್ಶಿಸಿದರು.

1 / 8
ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ (Ishan Kishan) ಶತಕದ ಜೊತೆಯಾಟ ಆಡಿ ತಂಡಕ್ಕೆ 7 ವಿಕೆಟ್​ಗಳ ಜಯ ತಂದುಕೊಟ್ಟರು. ಈ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಅಂಕಗಳ ಅಂತರದ ಸಮಬಲ ಸಾಧಿಸಿದೆ.

2 / 8
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡವು ನಿಗದಿತ 50 ಓವರ್​ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿತು. ಓಪನರ್​ಗಳಾದ ಕ್ವಿಂಟನ್ ಡಿ ಕಾಕ್ (5) ಹಾಗೂ ಜೆನ್ಮನ್ ಮಲಾನ್ (25) ವಿಕೆಟ್‌ಗಳು ತಂಡವು 40 ರನ್ ಗಳಿಸುವಷ್ಟರಲ್ಲಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

3 / 8
ಈ ಹಂತದಲ್ಲಿ ಜೊತೆ ಸೇರಿದ ಆ್ಯಡನ್ ಮರ್ಕ್ರಮ್ ಹಾಗೂ ರೀಜಾ ಹೆನ್ರಿಕ್ಸ್ ಮೂರನೇ ವಿಕೆಟ್‌ಗೆ 129 ರನ್‌ಗಳ ಜೊತೆಯಾಟ ಆಡಿದರು. 76 ಎಸೆತಗಳನ್ನು ಎದುರಿಸಿದ ರೀಜಾ 9 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 74 ರನ್ ಗಳಿಸಿದರು. ಇನ್ನೊಂದೆಡೆ ಮರ್ಕ್ರಮ್ 89 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 79 ರನ್ ಚಚ್ಚಿದರು.

4 / 8
ಭಾರತದ ಪರ ಮೊಹಮ್ಮದ್ ಸಿರಾಜ್ 3 ವಿಕೆಟ್ ಕಿತ್ತರು.

5 / 8
279 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ 45.5 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ ಗುರಿ ತಲುಪುವ ಮೂಲಕ ಗೆಲುವಿನ ನಗೆ ಬೀರಿತು. ಭಾರತದ ಆರಂಭ ಕೂಡ ಚೆನ್ನಾಗಿರಲಿಲ್ಲ. 48 ರನ್​ಗಳಿಗೆ 2 ವಿಕೆಟ್​ ಕಳೆದುಕೊಂಡು ಆಘಾತ ಅನುಭವಿಸಿತು. ನಾಯಕ ಶಿಖರ್​ ಧವನ್ 13​ ಹಾಗೂ ಶುಭ್ಮನ್​ ಗಿಲ್​ 28 ರನ್​ ಗಳಿಸಿ ಪೆವಿಲಿಯನ್​ ಸೇರಿಕೊಂಡರು.

6 / 8
ಈ ಸಂದರ್ಭ ಶ್ರೇಯಸ್​ ಅಯ್ಯರ್ ಹಾಗೂ ಇಶಾನ್​ ಕಿಶನ್​ ಜೋಡಿ ಮೂರನೇ ವಿಕೆಟ್​ಗೆ 161 ರನ್​ ಜೊತೆಯಾಟವಾಡಿದರು. 84 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್​ ನೆರವಿನಿಂದ 93 ರನ್​ ಬಾರಿಸಿದ ಕಿಶನ್​ 7 ರನ್​ ಅಂತರದಲ್ಲಿ ಶತಕವನ್ನು ಮಿಸ್ ಮಾಡಿಕೊಂಡರು. ಅಜೇಯ ಆಟವಾಡಿದ ಶ್ರೇಯಸ್​ ಅಯ್ಯರ್ (113) ಭರ್ಜರಿ ಶತಕ ದಾಖಲಿಸಿ ಸಂಭ್ರಮಿಸಿದರು.

7 / 8
ಕಿಶನ್ ನಿರ್ಗಮನದ ಬಳಿಕ ಬಂದ ಸಂಜು ಸ್ಯಾಮ್ಸನ್​ 30 ರನ್​ ಬಾರಿಸಿ ಅಜೇಯರಾಗುಳಿದರು. ಶ್ರೇಯಸ್ ಅಯ್ಯರ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಚಿಕೊಂಡರು.

8 / 8
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?

RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ

ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!