- Kannada News Photo gallery Cricket photos IND vs SA 2nd T20 Highlights India beat South Africa by 16 runs Check Photos
IND vs SA 2nd T20: ಭಾರತ-ದ. ಆಫ್ರಿಕಾ 2ನೇ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ
ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಹಾಗೂ ವಿರಾಟ್ ಕೊಹ್ಲಿಯ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 16 ರನ್ಗಳಿಂದ ಗೆದ್ದಿತು.
Updated on: Oct 03, 2022 | 11:06 AM

ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ (India vs South Africa) ತಂಡ ಭರ್ಜರಿ ಜಯ ಸಾಧಿಸಿದೆ. ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ವಿರಾಟ್ ಕೊಹ್ಲಿಯ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ 16 ರನ್ಗಳಿಂದ ಗೆದ್ದಿತು.

ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ರೋಹಿತ್ ಶರ್ಮಾ 37 ಎಸೆತದಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ನೊಂದಿಗೆ 43 ರನ್ ಬಾರಿಸಿದರೆ, ಕೆ.ಎಲ್ ರಾಹುಲ್ 28 ಎಸೆತದಲ್ಲಿ 5 ಬೌಡರಿ ಮತ್ತು 4 ಸಿಕ್ಸರ್ನಿಂದ 57 ರನ್ ಗಳಿಸಿದರು.

ಬಳಿಕ ಶುರುವಾಗಿದ್ದು ಕೊಹ್ಲಿ ಸೂರ್ಯಕುಮಾರ್ ಜುಗಲ್ಬಂದಿ. ಸೂರ್ಯ ತಮ್ಮ ಅದ್ಭುತ ಫಾರ್ಮ್ ಮುಂದುವರೆಸಿದರು. 22 ಬಾಲ್ನಲ್ಲಿ 5 ಸಿಕ್ಸರ್ ಹಾಗೂ 5 ಬೌಂಡರಿಯಿಂದ 61 ರನ್ ಚಚ್ಚಿದರು.

ಕೊನೆಯಲ್ಲಿ ದಿನೇಶ್ ಕಾರ್ತಿಕ್ ಬಂದು 7 ಎಸೆತಗಳಲ್ಲಿ 1 ಫೋರ್, 2 ಸಿಕ್ಸರ್ ಸಿಡಿಸಿ ಅಜೇಯ 17 ರನ್ ಗಳಿಸಿದರು.

ಮತ್ತೊಂದು ತುದಿಯಲ್ಲಿದ್ದ ಕೊಹ್ಲಿ 28 ಎಸೆತಗಲ್ಲಿ ಅಜೇಯ 49 ರನ್ ಬಾರಿಸಿದರು. ಪರಿಣಾಮ ಭಾರತ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 237 ರನ್ ಕಲೆಹಾಕಿತು. ಆಫ್ರಿಕಾ ಪರ ಕೇಶವ್ ಮಹರಾಜ್ 23 ರನ್‌ಗಳಿಗೆ 2 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿ ಸೋಲಿಗೆ ಶರಣಾಯಿತು. ಡೇವಿಡ್ ಮಿಲ್ಲರ್ ಅಜೇಯ 106 ರನ್ ಸಿಡಿಸಿದರೆ, ಡಿಕಾಕ್ ಅಜೇಯ 69 ರನ್ ಗಳಿಸಿದರು.

ಭಾರತ ಪರ ಅರ್ಶ್ದೀಪ್ ಸಿಂಗ್ 2 ವಿಕೆಟ್ ಪಡೆದರು.

ಸೂರ್ಯಕುಮಾರ್ ಯಾದವ್ ಟಿ20 ಮಾದರಿಯಲ್ಲಿ 1,000 ದಾಖಲಿಸಿ ಭಾರತ ಮೂರನೇ ಬ್ಯಾಟರ್ ಆಗಿ ಹೊರಹೊಮ್ಮಿದ ಸಾಧನೆ ಮಾಡಿದರು.
