Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: 121 ವರ್ಷಗಳ ಬಳಿಕ 23 ವಿಕೆಟ್ ಪತನ..!

IND vs SA 2nd Test: ಈ ಭರ್ಜರಿ ಪ್ರದರ್ಶನದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ರೋಹಿತ್ ಶರ್ಮಾ (39), ಶುಭ್​ಮನ್ ಗಿಲ್ (36) ಹಾಗೂ ವಿರಾಟ್ ಕೊಹ್ಲಿಯ (46) ಉತ್ತಮ ಬ್ಯಾಟಿಂಗ್​ನಿಂದಾಗಿ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: Jan 04, 2024 | 6:28 AM

ಕೇಪ್​ಟೌನ್​ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಸೌತ್ ಆಫ್ರಿಕಾ (IND vs SA) ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಬೌಲರ್​ಗಳು ಪರಾಕ್ರಮ ಮೆರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು ಮೊಹಮ್ಮದ್ ಸಿರಾಜ್ ದಾಳಿಗೆ ತತ್ತರಿಸಿತು. 9 ಓವರ್​ಗಳನ್ನು ಎಸೆದ ಸಿರಾಜ್ ಕೇವಲ 15 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ ಸೌತ್ ಆಫ್ರಿಕಾ ತಂಡ ಕೇವಲ 55 ರನ್​ಗಳಿಗೆ ಆಲೌಟ್ ಆಗಿದೆ.

2 / 7
ಈ ಭರ್ಜರಿ ಪ್ರದರ್ಶನದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ರೋಹಿತ್ ಶರ್ಮಾ (39), ಶುಭ್​ಮನ್ ಗಿಲ್ (36) ಹಾಗೂ ವಿರಾಟ್ ಕೊಹ್ಲಿಯ (46) ಉತ್ತಮ ಬ್ಯಾಟಿಂಗ್​ನಿಂದಾಗಿ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತ್ತು.

3 / 7
ಆದರೆ ಕೆಎಲ್ ರಾಹುಲ್ (8) ವಿಕೆಟ್ ಕಳೆದುಕೊಳ್ಳುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾ 11 ಎಸೆತಗಳಲ್ಲಿ ಒಂದೇ ಒಂದು ರನ್ ಕಲೆಹಾಕದೇ 6 ವಿಕೆಟ್ ಕಳೆದುಕೊಂಡಿತು. ಪರಿಣಾಮ ಭಾರತ ತಂಡವು 153 ರನ್​ಗಳಿಗೆ ತನ್ನ ಮೊದಲ ಇನಿಂಗ್ಸ್ ಅಂತ್ಯಗೊಳಿಸಿತು.

4 / 7
ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಸೌತ್ ಆಫ್ರಿಕಾ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆ 3 ವಿಕೆಟ್ ಕಳೆದುಕೊಂಡು 62 ರನ್ ಕಲೆಹಾಕಿದೆ. ಅಂದರೆ ಮೊದಲ ದಿನದಾಟದಲ್ಲೇ ಉಭಯ ತಂಡಗಳು ಒಟ್ಟು 23 ವಿಕೆಟ್ ಕಳೆದುಕೊಂಡಿದೆ.

5 / 7
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೀಗೆ ಸಂಭವಿಸಿರುವುದು ಕೇವಲ 2 ಬಾರಿ ಮಾತ್ರ. 1902 ರಲ್ಲಿ ಮೆಲ್ಬೋರ್ನ್​​ನಲ್ಲಿ ನಡೆದ ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಪಂದ್ಯದ ಮೊದಲ ದಿನದಾಟವೇ ಒಟ್ಟು 25 ವಿಕೆಟ್​ಗಳು ಪತನವಾಗಿತ್ತು.

6 / 7
ಇದೀಗ ಬರೋಬ್ಬರಿ 121 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ಮೊದಲ ದಿನದಾಟದಲ್ಲೇ 23 ವಿಕೆಟ್​ಗಳು ಉರುಳಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನ ಮೊದಲ ದಿನವೇ 22+ ವಿಕೆಟ್ ಕಬಳಿಸಿ ಭಾರತ-ಸೌತ್ ಆಫ್ರಿಕಾ ಬೌಲರ್​ಗಳು ಇತಿಹಾಸವನ್ನು ಪುನರಾವರ್ತಿಸಿದ್ದಾರೆ.

7 / 7
Follow us
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್

ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್

‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?

ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್

ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ

ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ