AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾದ 8 ಆಟಗಾರರು ಅಲಭ್ಯ..!

India vs South Africa ODI Series: ಭಾರತ ಮತ್ತು ಸೌತ್ ಆಫ್ರಿಕಾ ಮೂರು ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲ ಮ್ಯಾಚ್ ಇಂದು (ನ.30) ರಾಂಚಿಯಲ್ಲಿ ನಡೆದರೆ, ದ್ವಿತೀಯ ಪಂದ್ಯವು ರಾಯ್​​ಪುರದಲ್ಲಿ ನಡೆಯಲಿದೆ. ಹಾಗೆಯೇ ಕೊನೆಯ ಮ್ಯಾಚ್​​ಗೆ ವಿಶಾಖಪಟ್ಟಣದ ಎಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. 

ಝಾಹಿರ್ ಯೂಸುಫ್
|

Updated on:Nov 30, 2025 | 7:54 AM

Share
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ಇಂದಿನಿಂದ (ನ.30) ಶುರುವಾಗಲಿದೆ. ಮೂರು ಪಂದ್ಯಗಳ ಈ ಏಕದಿನ ಸರಣಿಗೆ ಟೀಮ್ ಇಂಡಿಯಾದ 8 ಆಟಗಾರರು ಅಲಭ್ಯರಾಗಿದ್ದಾರೆ. ಅಂದರೆ ಈ ಹಿಂದೆ ಭಾರತ ಏಕದಿನ ತಂಡವನ್ನು ಪ್ರತಿನಿಧಿಸಿದ್ದ ಕೆಲ ಆಟಗಾರರು ಈ ಬಾರಿ ಕಾಣಿಸಿಕೊಳ್ಳುವುದಿಲ್ಲ. ಆ ಆಟಗಾರರು ಯಾರೆಂದರೆ....

1 / 10
ಶುಭ್​ಮನ್ ಗಿಲ್: ಭಾರತ ಏಕದಿನ ತಂಡದ ನಾಯಕ ಶುಭ್​​​ಮನ್ ಗಿಲ್ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆ ನೋವಿನ ಸಮಸ್ಯೆಗೆ ಸಿಲುಕಿದ್ದ ಗಿಲ್​​ಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ.

2 / 10
ಶ್ರೇಯಸ್ ಅಯ್ಯರ್: ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಕೂಡ ಈ ಸರಣಿಗೆ ಅಲಭ್ಯರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ವೇಳೆ ಅಯ್ಯರ್ ಗಾಯಗೊಂಡಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.

3 / 10
ಹಾರ್ದಿಕ್ ಪಾಂಡ್ಯ: ಭಾರತ ತಂಡದ ಪ್ರಮುಖ ಆಲ್​​ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಫಿಟ್​​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೂ ಹೆಚ್ಚಿನ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧದದ ಟಿ20 ಸರಣಿಯ ಮೂಲಕ ಪಾಂಡ್ಯ ಕಂಬ್ಯಾಕ್ ಮಾಡಲಿದ್ದಾರೆ.

4 / 10
ಮೊಹಮ್ಮದ್ ಸಿರಾಜ್: ಭಾರತ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿರುವ ಮೊಹಮ್ಮದ್ ಸಿರಾಜ್ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಪರಿಗಣಿಸಲಾಗಿಲ್ಲ. ಇದಾಗ್ಯೂ ಅವರು ಟಿ20 ತಂಡದಲ್ಲಿ ಸ್ಥಾನ ಪಡೆಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 10
ಅಕ್ಷರ್ ಪಟೇಲ್: ಟೀಮ್ ಇಂಡಿಯಾದ ಸ್ಪಿನ್ ಆಲ್​​ರೌಂಡರ್ ಅಕ್ಷರ್ ಪಟೇಲ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿದ್ದರು. ಇದಾಗ್ಯೂ ಅವರ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಅವರನ್ನು ಸಹ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.

6 / 10
ವರುಣ್ ಚಕ್ರವರ್ತಿ: ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಸಹ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಪರಿಗಣಿಸಲಾಗಿಲ್ಲ. ಇದಾಗ್ಯೂ ಅವರು ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

7 / 10
ಜಸ್​​​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ವೇಗಿ ಜಸ್​​ಪ್ರೀತ್ ಬುಮ್ರಾ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿಲ್ಲ. ಮುಂಬರುವ ಟಿ20 ವಿಶ್ವಕಪ್​ ಹಿನ್ನಲೆಯಲ್ಲಿ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ.

8 / 10
ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿ ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಇದಾಗ್ಯೂ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆ ಮಾಡಿರಲಿಲ್ಲ. ಇದೀಗ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದಲೂ ಕೈ ಬಿಡಲಾಗಿದೆ.

9 / 10
ಭಾರತ ಏಕದಿನ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

10 / 10

Published On - 7:53 am, Sun, 30 November 25