- Kannada News Photo gallery Cricket photos IND vs SA Arshdeep Singh becomes the first Indian pacer to five wicket haul against SA in ODIs
IND vs SA: ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ ಭಾರತದ ಏಕೈಕ ಬೌಲರ್ ಅರ್ಷದೀಪ್ ಸಿಂಗ್..!
IND vs SA: ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
Updated on: Dec 17, 2023 | 5:38 PM

ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅರ್ಷದೀಪ್ ಸಿಂಗ್ ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ಭಾರತದ ಏಕೈಕ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಅರ್ಷದೀಪ್ ಪಾತ್ರರಾಗಿದ್ದಾರೆ.

ಈ ಮೊದಲು, ದಕ್ಷಿಣ ಆಫ್ರಿಕಾದಲ್ಲಿ ಆಫ್ರಿಕನ್ ತಂಡದ ವಿರುದ್ಧ ಆಡುವಾಗ ಯಾವುದೇ ಭಾರತೀಯ ವೇಗದ ಬೌಲರ್ ಈ ಸಾಧನೆ ಮಾಡಿರಲಿಲ್ಲ. ಪಂದ್ಯದಲ್ಲಿ ಅರ್ಷದೀಪ್ 10 ಓವರ್ ಬೌಲ್ ಮಾಡಿ 37 ರನ್ ನೀಡಿ 5 ವಿಕೆಟ್ ಪಡೆದರು.

ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಹೊರತಾಗಿ ಅವೇಶ್ ಖಾನ್ ಕೂಡ ಅದ್ಭುತವಾಗಿ ಬೌಲಿಂಗ್ ಮಾಡಿ 4 ವಿಕೆಟ್ ಪಡೆದರು.

ಅಂದಹಾಗೆ, ಅರ್ಷದೀಪ್ ದಕ್ಷಿಣ ಆಫ್ರಿಕಾದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಆಗಿದ್ದಾರೆ.

ಅರ್ಷದೀಪ್ಗೂ ಮುನ್ನ ಆಶಿಶ್ ನೆಹ್ರಾ 2003ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಪಡೆದಿದ್ದರೆ, 2018ರಲ್ಲಿ ಸೆಂಚುರಿಯನ್‌ನಲ್ಲಿ ಆಫ್ರಿಕಾ ತಂಡದ ವಿರುದ್ಧ ಯುಜುವೇಂದ್ರ ಚಾಹಲ್ 5 ವಿಕೆಟ್ ಪಡೆದಿದ್ದರು.

ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಆದರೆ ಅರ್ಷದೀಪ್ ಮತ್ತು ಅವೇಶ್ ವಿಧ್ವಂಸಕತೆಯನ್ನು ಸೃಷ್ಟಿಸಿ ಆಫ್ರಿಕನ್ ಬ್ಯಾಟ್ಸ್‌ಮನ್‌ಗಳನ್ನು ದಂಗುಬಡಿಸಿದರು.

ಭಾರತದ ಇಬ್ಬರೂ ಬೌಲರ್‌ಗಳು ಆರಂಭದಿಂದಲೂ ಅಪಾಯಕಾರಿ ಬೌಲಿಂಗ್ ಮಾಡಿ ಇಡೀ ಆಫ್ರಿಕಾ ತಂಡವನ್ನು 116 ರನ್ಗಳಿಗೆ ಆಲೌಟ್ ಮಾಡಿದರು. ಭಾರತದ ಪರ ಅರ್ಷದೀಪ್ 5, ಅವೇಶ್ ಖಾನ್ 4 ಹಾಗೂ ಕುಲ್ದೀಪ್ ಯಾದವ್ 1 ವಿಕೆಟ್ ಪಡೆದರು.




