- Kannada News Photo gallery Cricket photos IND vs SA, ICC World Cup 2023 Full list of records India smashed by crushing South Africa
IND vs SA: ಕ್ರಿಕೆಟ್ ಕಾಶಿಯಲ್ಲಿ ನಡೆದ ಭಾರತ- ಆಫ್ರಿಕಾ ಕದನದಲ್ಲಿ ಸೃಷ್ಟಿಯಾದ ದಾಖಲೆಗಳೆಷ್ಟು ಗೊತ್ತಾ?
IND vs SA, ICC World Cup 2023: ಕ್ರಿಕೆಟ್ ಕಾಶಿ ಈಡನ್ ಗಾರ್ಡನ್ನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಹಲವು ಮೈಲಿಗಲ್ಲುಗಳಿಗೆ ಸಾಕ್ಷಿಯಾಯಿತು. ಹರಿಣಗಳ ವಿರುದ್ಧ ಶತಕ ಸಿಡಿಸಿದ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಐತಿಹಾಸಿದ ದಾಖಲೆಯನ್ನೂ ಮುರಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ದಾಖಲೆಗಳು ಸೃಷ್ಟಿಯಾದವು.
Updated on: Nov 06, 2023 | 9:54 AM

ಕ್ರಿಕೆಟ್ ಕಾಶಿ ಈಡನ್ ಗಾರ್ಡನ್ನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಹಲವು ಮೈಲಿಗಲ್ಲುಗಳಿಗೆ ಸಾಕ್ಷಿಯಾಯಿತು. ಹರಿಣಗಳ ವಿರುದ್ಧ ಶತಕ ಸಿಡಿಸಿದ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಐತಿಹಾಸಿದ ದಾಖಲೆಯನ್ನೂ ಮುರಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ದಾಖಲೆಗಳು ಸೃಷ್ಟಿಯಾದವು.

ಆಫ್ರಿಕಾ ವಿರುದ್ಧ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಸಚಿನ್ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿದ್ದರೆ, ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಭಾರತದ ವಿರುದ್ಧ ಕೇವಲ 83 ರನ್‌ಗಳಿಗೆ ಆಲೌಟ್ ಆದ ದಕ್ಷಿಣ ಆಫ್ರಿಕಾ ಈಡನ್ ಗಾರ್ಡನ್ಸ್‌ನಲ್ಲಿ ಭಾರತದ ವಿರುದ್ಧ ಅತಿ ಕಡಿಮೆ ರನ್‌ಗಳಿಗೆ ಆಲೌಟ್ ಆದ ಬೇಡದ ದಾಖಲೆಯನ್ನು ತನ್ನದಾಗಿಸಿಕೊಂಡಿತು.

ಈ ವರ್ಷ ನಡೆದ 4 ಏಕದಿನ ಪಂದ್ಯಗಳಲ್ಲಿ ಭಾರತ ತಂಡ ಎದುರಾಳಿ ತಂಡವನ್ನು 100ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದೆ. ಇದು ಪುರುಷರ ಕ್ರಿಕೆಟ್‌ನಲ್ಲಿ ದಾಖಲೆಯಾಗಿದೆ.

ಕಳೆದ ಎರಡು ಏಕದಿನ ಪಂದ್ಯಗಳಲ್ಲಿ ಭಾರತ ಕೇವಲ 138 ರನ್ಗಳನ್ನು ಬಿಟ್ಟುಕೊಟ್ಟಿದೆ. ಶ್ರೀಲಂಕಾವನ್ನು 55 ರನ್‌ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 83 ರನ್‌ಗಳಿಗೆ ಆಲೌಟ್ ಮಾಡಿದೆ. ಇದು ಸತತ ಎರಡು ಪಂದ್ಯಗಳಲ್ಲಿ ಗಳಿಸಿದ ಅತಿ ಕಡಿಮೆ ರನ್ ಆಗಿದೆ. ಇಷ್ಟು ದಿನ ವೆಸ್ಟ್ ಇಂಡೀಸ್ ಈ ದಾಖಲೆಯನ್ನು ಹೊಂದಿತ್ತು. ವೆಸ್ಟ್ ಇಂಡೀಸ್ 1992-93ರಲ್ಲಿ ಎರಡು ಪಂದ್ಯಗಳಲ್ಲಿ ಪಾಕಿಸ್ತಾನಕ್ಕೆ 152 ರನ್ (81 ಮತ್ತು 71) ನೀಡಿತ್ತು.

ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ 243 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಇದು ಪುರುಷರ ಏಕದಿನ ಕ್ರಿಕೆಟ್‌ನಲ್ಲಿ ರನ್‌ಗಳ ವಿಷಯದಲ್ಲಿ ದಕ್ಷಿಣ ಆಫ್ರಿಕಾದ ಅತಿದೊಡ್ಡ ಸೋಲಿನ ಅಂತರವಾಗಿದೆ.

ಒಂದು ಕ್ಯಾಲೆಂಡರ್ ವರ್ಷದಲ್ಲಿ ಭಾರತ ಐದು ಪಂದ್ಯಗಳಲ್ಲಿ 200ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಪುರುಷರ ಕ್ರಿಕೆಟ್‌ನಲ್ಲಿ ಯಾವುದೇ ತಂಡವು ವರ್ಷದಲ್ಲಿ ಮೂರಕ್ಕಿಂತ ಹೆಚ್ಚು ಬಾರಿ 200 ಪ್ಲಸ್ ರನ್‌ಗಳಿಂದ ಗೆದ್ದಿಲ್ಲ. ಆದರೆ ಆ ಸಾಧನೆಯನ್ನು ಭಾರತ ಈಗ ಮಾಡಿದೆ.

ಆಫ್ರಿಕಾ ವಿರುದ್ಧ 5 ವಿಕೆಟ್ ಪಡೆದ ರವೀಂದ್ರ ಜಡೇಜಾ ಏಕದಿನ ವಿಶ್ವಕಪ್‌ನಲ್ಲಿ ಒಂದು ಪಂದ್ಯದಲ್ಲಿ ಐದು ವಿಕೆಟ್‌ಗಳನ್ನು ಪಡೆದ ಭಾರತದ ಎರಡನೇ ಸ್ಪಿನ್ನರ್ ಎನಿಸಿಕೊಂಡರು. ಜಡೇಜಾಗೂ ಮೊದಲು ಯುವರಾಜ್ ಸಿಂಗ್ 2011ರ ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧ 31 ರನ್‌ಗಳಿಗೆ 5 ವಿಕೆಟ್ ಪಡೆದಿದ್ದರು.

ಏಕದಿನ ವಿಶ್ವಕಪ್‌ನಲ್ಲಿ ಜನ್ಮದಿನದಂದು ಶತಕ ಸಿಡಿಸಿದ ಮೂರನೇ ಆಟಗಾರ ಎಂಬ ಖ್ಯಾತಿಗೆ ಕೊಹ್ಲಿ ಬಾಜನರಾದರು. ಕೊಹ್ಲಿಗೂ ಮೊದಲು ನ್ಯೂಜಿಲೆಂಡ್‌ನ ರಾಸ್ ಟೇಲರ್ 2011 ರ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ 27 ನೇ ಹುಟ್ಟುಹಬ್ಬದಂದು ಅಜೇಯ 131 ರನ್ ಸಿಡಿಸಿದ್ದರು. ಮಿಚೆಲ್ ಮಾರ್ಷ್ ಕಳೆದ ತಿಂಗಳು ತಮ್ಮ 32ನೇ ಹುಟ್ಟುಹಬ್ಬದಂದು ಈ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಶತಕ ಬಾರಿಸಿದ್ದರು.



















