IND vs SA: ಕ್ರಿಕೆಟ್ ಕಾಶಿಯಲ್ಲಿ ನಡೆದ ಭಾರತ- ಆಫ್ರಿಕಾ ಕದನದಲ್ಲಿ ಸೃಷ್ಟಿಯಾದ ದಾಖಲೆಗಳೆಷ್ಟು ಗೊತ್ತಾ?

Updated on: Nov 06, 2023 | 9:54 AM

IND vs SA, ICC World Cup 2023: ಕ್ರಿಕೆಟ್ ಕಾಶಿ ಈಡನ್ ಗಾರ್ಡನ್​ನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಹಲವು ಮೈಲಿಗಲ್ಲುಗಳಿಗೆ ಸಾಕ್ಷಿಯಾಯಿತು. ಹರಿಣಗಳ ವಿರುದ್ಧ ಶತಕ ಸಿಡಿಸಿದ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಐತಿಹಾಸಿದ ದಾಖಲೆಯನ್ನೂ ಮುರಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ದಾಖಲೆಗಳು ಸೃಷ್ಟಿಯಾದವು.

1 / 9
ಕ್ರಿಕೆಟ್ ಕಾಶಿ ಈಡನ್ ಗಾರ್ಡನ್​ನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಹಲವು ಮೈಲಿಗಲ್ಲುಗಳಿಗೆ ಸಾಕ್ಷಿಯಾಯಿತು. ಹರಿಣಗಳ ವಿರುದ್ಧ ಶತಕ ಸಿಡಿಸಿದ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಐತಿಹಾಸಿದ ದಾಖಲೆಯನ್ನೂ ಮುರಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ದಾಖಲೆಗಳು ಸೃಷ್ಟಿಯಾದವು.

ಕ್ರಿಕೆಟ್ ಕಾಶಿ ಈಡನ್ ಗಾರ್ಡನ್​ನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಹಲವು ಮೈಲಿಗಲ್ಲುಗಳಿಗೆ ಸಾಕ್ಷಿಯಾಯಿತು. ಹರಿಣಗಳ ವಿರುದ್ಧ ಶತಕ ಸಿಡಿಸಿದ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಐತಿಹಾಸಿದ ದಾಖಲೆಯನ್ನೂ ಮುರಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ದಾಖಲೆಗಳು ಸೃಷ್ಟಿಯಾದವು.

2 / 9

ಆಫ್ರಿಕಾ ವಿರುದ್ಧ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಸಚಿನ್ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿದ್ದರೆ, ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

3 / 9

ಭಾರತದ ವಿರುದ್ಧ ಕೇವಲ 83 ರನ್​ಗಳಿಗೆ ಆಲೌಟ್ ಆದ ದಕ್ಷಿಣ ಆಫ್ರಿಕಾ ಈಡನ್ ಗಾರ್ಡನ್ಸ್‌ನಲ್ಲಿ ಭಾರತದ ವಿರುದ್ಧ ಅತಿ ಕಡಿಮೆ ರನ್​ಗಳಿಗೆ ಆಲೌಟ್ ಆದ ಬೇಡದ ದಾಖಲೆಯನ್ನು ತನ್ನದಾಗಿಸಿಕೊಂಡಿತು.

4 / 9

ಈ ವರ್ಷ ನಡೆದ 4 ಏಕದಿನ ಪಂದ್ಯಗಳಲ್ಲಿ ಭಾರತ ತಂಡ ಎದುರಾಳಿ ತಂಡವನ್ನು 100ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದೆ. ಇದು ಪುರುಷರ ಕ್ರಿಕೆಟ್‌ನಲ್ಲಿ ದಾಖಲೆಯಾಗಿದೆ.

5 / 9

ಕಳೆದ ಎರಡು ಏಕದಿನ ಪಂದ್ಯಗಳಲ್ಲಿ ಭಾರತ ಕೇವಲ 138 ರನ್​ಗಳನ್ನು ಬಿಟ್ಟುಕೊಟ್ಟಿದೆ. ಶ್ರೀಲಂಕಾವನ್ನು 55 ರನ್‌ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 83 ರನ್‌ಗಳಿಗೆ ಆಲೌಟ್ ಮಾಡಿದೆ. ಇದು ಸತತ ಎರಡು ಪಂದ್ಯಗಳಲ್ಲಿ ಗಳಿಸಿದ ಅತಿ ಕಡಿಮೆ ರನ್ ಆಗಿದೆ. ಇಷ್ಟು ದಿನ ವೆಸ್ಟ್ ಇಂಡೀಸ್ ಈ ದಾಖಲೆಯನ್ನು ಹೊಂದಿತ್ತು. ವೆಸ್ಟ್ ಇಂಡೀಸ್ 1992-93ರಲ್ಲಿ ಎರಡು ಪಂದ್ಯಗಳಲ್ಲಿ ಪಾಕಿಸ್ತಾನಕ್ಕೆ 152 ರನ್ (81 ಮತ್ತು 71) ನೀಡಿತ್ತು.

6 / 9

ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ 243 ರನ್​ಗಳಿಂದ ಸೋಲೊಪ್ಪಿಕೊಂಡಿತು. ಇದು ಪುರುಷರ ಏಕದಿನ ಕ್ರಿಕೆಟ್​ನಲ್ಲಿ ರನ್‌ಗಳ ವಿಷಯದಲ್ಲಿ ದಕ್ಷಿಣ ಆಫ್ರಿಕಾದ ಅತಿದೊಡ್ಡ ಸೋಲಿನ ಅಂತರವಾಗಿದೆ.

7 / 9

ಒಂದು ಕ್ಯಾಲೆಂಡರ್ ವರ್ಷದಲ್ಲಿ ಭಾರತ ಐದು ಪಂದ್ಯಗಳಲ್ಲಿ 200ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಪುರುಷರ ಕ್ರಿಕೆಟ್‌ನಲ್ಲಿ ಯಾವುದೇ ತಂಡವು ವರ್ಷದಲ್ಲಿ ಮೂರಕ್ಕಿಂತ ಹೆಚ್ಚು ಬಾರಿ 200 ಪ್ಲಸ್ ರನ್‌ಗಳಿಂದ ಗೆದ್ದಿಲ್ಲ. ಆದರೆ ಆ ಸಾಧನೆಯನ್ನು ಭಾರತ ಈಗ ಮಾಡಿದೆ.

8 / 9

ಆಫ್ರಿಕಾ ವಿರುದ್ಧ 5 ವಿಕೆಟ್ ಪಡೆದ ರವೀಂದ್ರ ಜಡೇಜಾ ಏಕದಿನ ವಿಶ್ವಕಪ್‌ನಲ್ಲಿ ಒಂದು ಪಂದ್ಯದಲ್ಲಿ ಐದು ವಿಕೆಟ್‌ಗಳನ್ನು ಪಡೆದ ಭಾರತದ ಎರಡನೇ ಸ್ಪಿನ್ನರ್ ಎನಿಸಿಕೊಂಡರು. ಜಡೇಜಾಗೂ ಮೊದಲು ಯುವರಾಜ್ ಸಿಂಗ್ 2011ರ ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧ 31 ರನ್‌ಗಳಿಗೆ 5 ವಿಕೆಟ್ ಪಡೆದಿದ್ದರು.

9 / 9

ಏಕದಿನ ವಿಶ್ವಕಪ್​ನಲ್ಲಿ ಜನ್ಮದಿನದಂದು ಶತಕ ಸಿಡಿಸಿದ ಮೂರನೇ ಆಟಗಾರ ಎಂಬ ಖ್ಯಾತಿಗೆ ಕೊಹ್ಲಿ ಬಾಜನರಾದರು. ಕೊಹ್ಲಿಗೂ ಮೊದಲು ನ್ಯೂಜಿಲೆಂಡ್‌ನ ರಾಸ್ ಟೇಲರ್ 2011 ರ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ 27 ನೇ ಹುಟ್ಟುಹಬ್ಬದಂದು ಅಜೇಯ 131 ರನ್ ಸಿಡಿಸಿದ್ದರು. ಮಿಚೆಲ್ ಮಾರ್ಷ್ ಕಳೆದ ತಿಂಗಳು ತಮ್ಮ 32ನೇ ಹುಟ್ಟುಹಬ್ಬದಂದು ಈ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಶತಕ ಬಾರಿಸಿದ್ದರು.

Loading...
Unable to load recommendations.
Follow Us