- Kannada News Photo gallery Cricket photos IND vs SA: India Will Have To Make At Least 4 Changes in Playing XI
IND vs SA: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ 4 ಬದಲಾವಣೆ ಖಚಿತ
India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಈ ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕಳೆದ ಬಾರಿ ತಂಡದಲ್ಲಿ ಕಾಣಿಸಿಕೊಂಡ ನಾಲ್ವರು ಆಟಗಾರರನ್ನು ಈ ಬಾರಿ ಕೈ ಬಿಡಲಾಗಿದೆ.
Updated on:Nov 30, 2025 | 11:56 AM

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 3 ಪಂದ್ಯಗಳ ಏಕದಿನ ಸರಣಿಯು ಇಂದಿನಿಂದ (ನ.30) ಶುರುವಾಗಲಿದೆ. ರಾಂಚಿಯಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ 4 ಬದಲಾವಣೆ ಮಾಡಿಕೊಳ್ಳುವುದು ಖಚಿತ. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದ ನಾಲ್ವರು ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಅವರೆಂದರೆ....

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಾಣಿಸಿಕೊಂಡಿದ್ದ ಶುಭ್ಮನ್ ಗಿಲ್ ಈ ಬಾರಿ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಕುತ್ತಿಗೆ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರ ಬದಲಿಗೆ ರುತುರಾಜ್ ಗಾಯಕ್ವಾಡ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಕೊನೆಯ ಪಂದ್ಯದ ವೇಳೆಗೆ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಕೂಡ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಈ ಬಾರಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ತಿಲಕ್ ವರ್ಮಾ ಆಯ್ಕೆಯಾಗಿದ್ದಾರೆ.

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಕೊನೆಯ ಮ್ಯಾಚ್ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅಲ್ಲದೆ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ಗೆ ಏಕದಿನ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿದ್ದ ಅಕ್ಷರ್ ಪಟೇಲ್ ಅವರನ್ನು ಸಹ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಲ್ರೌಂಡರ್ ಆಗಿ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ 4 ಬದಲಾವಣೆ ಕಂಡು ಬರುವುದು ಖಚಿತ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.
Published On - 11:55 am, Sun, 30 November 25
