IND vs SA: ಟಿ20 ಸರಣಿಗೆ ಟೀಮ್ ಇಂಡಿಯಾದ 8 ಆಟಗಾರರು ಅಲಭ್ಯ

Updated on: Dec 07, 2025 | 7:59 AM

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಡಿಸೆಂಬರ್ 9 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್​ ಕಟಕ್​ನಲ್ಲಿ ನಡೆದರೆ, ಎರಡನೇ ಪಂದ್ಯ ಮುಲ್ಲನ್​ಪುರ್​ನಲ್ಲಿ ಜರುಗಲಿದೆ. ಇನ್ನುಳಿದ ಪಂದ್ಯಗಳು ಕ್ರಮವಾಗಿ ಧರ್ಮಶಾಲ, ಲಕ್ನೋ ಮತ್ತು ಅಹಮದಾಬಾದ್​ನಲ್ಲಿ ನಡೆಯಲಿದೆ.

1 / 10
ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದಿರುವ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗೆ ಸಜ್ಜಾಗಬೇಕಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಈ ಸರಣಿಗಾಗಿ 15 ಸದಸ್ಯರುಗಳ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಕೆಲ ಪ್ರಮು ಆಟಗಾರರು ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಆ ಆಟಗಾರರು ಯಾರೆಂದರೆ...

ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದಿರುವ ಟೀಮ್ ಇಂಡಿಯಾ ಇದೀಗ ಟಿ20 ಸರಣಿಗೆ ಸಜ್ಜಾಗಬೇಕಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಈ ಸರಣಿಗಾಗಿ 15 ಸದಸ್ಯರುಗಳ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಕೆಲ ಪ್ರಮು ಆಟಗಾರರು ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಆ ಆಟಗಾರರು ಯಾರೆಂದರೆ...

2 / 10

ರಿಂಕು ಸಿಂಗ್: ಭಾರತದ ಪರ 35 ಟಿ20 ಪಂದ್ಯಗಳನ್ನಾಡಿರುವ ರಿಂಕು ಸಿಂಗ್ ಅವರನ್ನು  ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಕೈ ಬಿಡಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದ ರಿಂಕು ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂಬುದು ವಿಶೇಷ.

3 / 10

ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಟೀಮ್ ಇಂಡಿಯಾ ಪರ ಈವರೆಗೆ 4 ಟಿ20 ಪಂದ್ಯಗಳನ್ನಾಡಿದ್ದಾರೆ. ಅದರಲ್ಲೂ ಕಳೆದ ತಿಂಗಳು ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇದೀಗ ಹಾರ್ದಿಕ್ ಪಾಂಡ್ಯ ಅವರ ಕಂಬ್ಯಾಕ್ ಬೆನ್ನಲ್ಲೇ ನಿತೀಶ್ ಕುಮಾರ್ ರೆಡ್ಡಿ ತಂಡದಿಂದ ಹೊರಬಿದ್ದಿದ್ದಾರೆ.

4 / 10

ಯಶಸ್ವಿ ಜೈಸ್ವಾಲ್: ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಅವರನ್ನು ಸಹ ಟಿ20 ಸರಣಿಗೆ ಆಯ್ಕೆ ಮಾಡಿಲ್ಲ. ಹೀಗಾಗಿ ಜೈಸ್ವಾಲ್ ಕೂಡ ಮುಂಬರುವ 5 ಪಂದ್ಯಗಳ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

5 / 10

ಪ್ರಸಿದ್ಧ್ ಕೃಷ್ಣ: ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ಅವರನ್ನು ಸಹ ಟಿ20 ಸರಣಿಗೆ ಪರಿಗಣಿಸಲಾಗಿಲ್ಲ. ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ದುಬಾರಿಯಾಗಿದ್ದ ಪ್ರಸಿದ್ಧ್ ಕೃಷ್ಣ ಅವರನ್ನು ಟಿ20 ತಂಡದಿಂದ ಕೈ ಬಿಡಲಾಗಿದೆ. ಹೀಗಾಗಿ ಅವರು ಸಹ ಮುಂದಿನ ಸರಣಿಯಲ್ಲಿ ಕಣಕ್ಕಿಳಿಯುವುದಿಲ್ಲ.

6 / 10

ರಿಷಭ್ ಪಂತ್: ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸೌತ್ ಆಫ್ರಿಕಾ ವಿರುದ್ಧದ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು. ಇದಾಗ್ಯೂ ಅವರಿಗೆ ಕಣಕ್ಕಿಳಿಯಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಟಿ20 ಸರಣಿಗೆ ಆಯ್ಕೆ ಮಾಡಲಾದ 15 ಸದಸ್ಯರುಗಳ ತಂಡದಲ್ಲಿ ರಿಷಭ್​ಗೆ ಸ್ಥಾನ ನೀಡಿಲ್ಲ.

7 / 10

ರೋಹಿತ್ ಶರ್ಮಾ: 2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಆದರೆ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್​ ಪಟ್ಟ ಅಲಂಕರಿಸಿದ ಬೆನ್ನಲ್ಲೇ ಹಿಟ್​ಮ್ಯಾನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮಾ ಅವರನ್ನು ಪರಿಗಣಿಸಲಾಗಿಲ್ಲ.

8 / 10

ರವೀಂದ್ರ ಜಡೇಜಾ: ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮತ್ತೋರ್ವ ಆಟಗಾರ ರವೀಂದ್ರ ಜಡೇಜಾ. ಚುಟುಕು ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಜಡೇಜಾ ಇದೀಗ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್​ನತ್ತ ಫೋಕಸ್ ಮಾಡಿದ್ದಾರೆ. ಹೀಗಾಗಿ ಅವರನ್ನೂ ಸಹ ಟಿ20​ ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ.

9 / 10

ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್ 2024 ರಲ್ಲಿ ಫೈನಲ್ ಪಂದ್ಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ಚುಟುಕು ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಿಂಗ್ ಕೊಹ್ಲಿ ಕೂಡ ಕಾಣಿಸಿಕೊಳ್ಳುವುದಿಲ್ಲ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ...

10 / 10

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ)*, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.

Loading...
Unable to load recommendations.
Follow Us