IND vs SA: ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹಠಾತ್ ಹಿಂದೆ ಸರಿದ ಇಶಾನ್ ಕಿಶನ್..!

|

Updated on: Dec 17, 2023 | 7:09 PM

IND vs SA, Ishan Kishan: ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಇಶಾನ್ ಕಿಶನ್ 2 ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿಕೆ ನೀಡಿದೆ.

1 / 7
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯವನ್ನು ರಾಹುಲ್ ಪಡೆ ಸುಲಭವಾಗಿ ಗೆದ್ದು ಬೀಗಿದೆ. ಈ ನಡುವೆ ಟೀಂ ಇಂಡಿಯಾ ಪಾಳಯದಿಂದ ಬಿಗ್​ ನ್ಯೂಸ್ ಒಂದು ಹೊರಬಿದ್ದಿದೆ.

2 / 7
ಸಿಕ್ಕಿರುವ ಮಾಹಿತಿ ಪ್ರಕಾರ ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಇಶಾನ್ ಕಿಶನ್ 2 ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿಕೆ ನೀಡಿದೆ.

3 / 7
ಇಶಾನ್ ಕಿಶನ್ ಅವರೇ ಸರಣಿಯಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದಾರೆ, ಅದಕ್ಕಾಗಿ ಅವರಿಗೆ ಅನುಮತಿ ನೀಡಲಾಗಿದೆ. ಅಲ್ಲದೆ ಟೆಸ್ಟ್ ಸರಣಿಯಿಂದ ಹೊರಬಿದ್ದಿರುವ ಇಶಾನ್ ಕಿಶನ್ ಅವರ ಜಾಗದಲ್ಲಿ ಕೆಎಸ್ ಭರತ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಮಂಡಳಿ ತಿಳಿಸಿದೆ.

4 / 7
ಇಶಾನ್ ಕಿಶನ್ ತಮ್ಮ ಹೆಸರನ್ನು ಏಕೆ ಹಿಂಪಡೆದಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಬಿಸಿಸಿಐ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಇಶಾನ್ ಕಿಶನ್ ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ನಂತರ ಮಂಡಳಿಯು ಅವರ ಮನವಿಯನ್ನು ಸ್ವೀಕರಿಸಿದೆ ಎಂದು ಹೇಳಿದೆ.

5 / 7
ಎಡಗೈ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಈ ವರ್ಷದ ಜುಲೈನಲ್ಲಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತದ ಪರ ಟೆಸ್ಟ್‌ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದರು. ಇಶಾನ್ ಈ ಸರಣಿಯ ಎರಡೂ ಪಂದ್ಯಗಳನ್ನು ಆಡಿದ್ದರು. ಇದರಲ್ಲಿ ಇಶಾನ್ 3 ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕ ಸೇರಿದಂತೆ 78 ರನ್ ಗಳಿಸಿದ್ದು, 5 ಕ್ಯಾಚ್‌ಗಳನ್ನೂ ಪಡೆದಿದ್ದರು.

6 / 7
ಆದಾಗ್ಯೂ, ಇಶಾನ್‌ಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಆಡುವ ಅವಕಾಶ ಸಿಗುವುದು ಅನುಮಾನವಾಗಿತ್ತು. ಏಕೆಂದರೆ ವಿಶ್ವಕಪ್‌ನಲ್ಲಿ ರಾಹುಲ್, ಕೀಪರ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಟೆಸ್ಟ್ ಸರಣಿಯಲ್ಲೂ ರಾಹುಲ್ ಈ ಜವಾಬ್ದಾರಿಯನ್ನು ನಿರ್ವಹಿಸುವುದು ಖಚಿತವೆಂದು ಹೇಳಲಾಗುತ್ತಿದೆ.

7 / 7
ಇಶಾನ್ ಬದಲಿಗೆ ಅನುಭವಿ ವಿಕೆಟ್ ಕೀಪರ್ ಕೆಎಸ್ ಭರತ್ ಅವರನ್ನು ಬಿಸಿಸಿಐ ತಂಡಕ್ಕೆ ಕರೆಸಿಕೊಂಡಿದೆ. ಇದಕ್ಕೂ ಮೊದಲು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭರತ್ ಕೂಡ ತಂಡದಲ್ಲಿದ್ದರು. ಆದರೆ ಹಿಂದಿನ ಪಂದ್ಯಗಳಲ್ಲಿ ಅವರ ನಿರಾಶಾದಾಯಕ ಪ್ರದರ್ಶನದ ನಂತರ ವೆಸ್ಟ್ ಇಂಡೀಸ್ ಸರಣಿಯಲ್ಲಿ ಅವರಿಗೆ ಆಡುವ ಅವಕಾಶ ನೀಡಲಿಲ್ಲ. ಸದ್ಯ ಆಫ್ರಿಕಾ ಸರಣಿಗೆ ಆಯ್ಕೆಯಾಗಿರುವ ಭರತ್​ಗೆ ತಂಡದಲ್ಲಿ ಆಡುವ ಅವಕಾಶ ಸಿಗುವ ಸಾಧ್ಯತೆ ತೀರ ಕಡಿಮೆ.

Published On - 7:06 pm, Sun, 17 December 23