IND vs SA: 9ನೇ ಬಾರಿಗೆ 5 ವಿಕೆಟ್! ಜಾವಗಲ್ ಶ್ರೀನಾಥ್ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
IND vs SA, Jasprit Bumrah: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಕೇಪ್ ಟೌನ್ ಟೆಸ್ಟ್ನಲ್ಲಿ ಟೀಂ ಇಂಡಿಯಾ ಆಫ್ರಿಕಾ ತಂಡವನ್ನು 176 ರನ್ಗಳಿಗೆ ಆಲೌಟ್ ಮಾಡಿದೆ. ಈ ಮೂಲಕ 79 ರನ್ಗಳ ಗೆಲುವಿನ ಗುರಿ ಪಡೆದಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಪರ ಬುಮ್ರಾ 6 ವಿಕೆಟ್ ಪಡೆದು ಮಿಂಚಿದರು.
1 / 8
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಕೇಪ್ ಟೌನ್ ಟೆಸ್ಟ್ನಲ್ಲಿ ಟೀಂ ಇಂಡಿಯಾ ಆಫ್ರಿಕಾ ತಂಡವನ್ನು 176 ರನ್ಗಳಿಗೆ ಆಲೌಟ್ ಮಾಡಿದೆ. ಈ ಮೂಲಕ 79 ರನ್ಗಳ ಗೆಲುವಿನ ಗುರಿ ಪಡೆದಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಪರ ಬುಮ್ರಾ 6 ವಿಕೆಟ್ ಪಡೆದು ಮಿಂಚಿದರು.
2 / 8
ವಾಸ್ತವವಾಗಿ ಎರಡನೇ ಟೆಸ್ಟ್ನ ಮೊದಲ ದಿನವೇ ಹಲವು ದಾಖಲೆಗಳು ಸೃಷ್ಟಿಯಾಗಿದ್ದವು. ಮೊಹಮ್ಮದ್ ಸಿರಾಜ್ ಮೊದಲ ದಿನದ ಎಲ್ಲರ ಗಮನ ಸೆಳೆದರೆ, ಎರಡನೇ ದಿನದ ಜಸ್ಪ್ರೀತ್ ಬುಮ್ರಾ ಹಲವು ದಾಖಲೆ ನಿರ್ಮಿಸಿದರು. ಎರಡನೇ ದಿನದ ಮೊದಲ ಓವರ್ನಲ್ಲೇ ವಿಕೆಟ್ ಪಡೆಯುವ ಮೂಲಕ ಎರಡನೇ ದಿನವೂ ಪಿಚ್ ಬದಲಾಗಿಲ್ಲ ಎಂಬುದನ್ನು ತೋರಿಸಿಕೊಟ್ಟರು.
3 / 8
ಪಂದ್ಯದ ಮೊದಲನೇ ದಿನದಂದು, ದಕ್ಷಿಣ ಆಫ್ರಿಕಾ ತಂಡವು ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಬಂದಾಗ, ಜಸ್ಪ್ರೀತ್ ಬುಮ್ರಾ ಒಂದು ವಿಕೆಟ್ ಪಡೆದರು. ಇದಾದ ಬಳಿಕವೂ ಅದೇ ಪ್ರದರ್ಶನವನ್ನು ಮುಂದುವರೆಸಿದ ಬುಮ್ರಾ ಒಂದರ ಹಿಂದೆ ಒಂದರಂತೆ ನಾಲ್ಕು ವಿಕೆಟ್ ಕಬಳಿಸಿದರು. ಇದರಿಂದಾಗಿ ದಕ್ಷಿಣ ಆಫ್ರಿಕಾ ತಂಡ ಸಂಕಷ್ಟಕ್ಕೆ ಸಿಲುಕಿತು.
4 / 8
ಈ ಮೂಲಕ ಬುಮ್ರಾ ದಕ್ಷಿಣ ಆಫ್ರಿಕಾದಲ್ಲಿ ಮೂರನೇ ಬಾರಿಗೆ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಇದುವರೆಗೆ 8 ಟೆಸ್ಟ್ ಪಂದ್ಯಗಳನ್ನು ಆಡಿರುವ ಬುಮ್ರಾ ಅವರ ಹೆಸರಿನಲ್ಲಿ 50 ಕ್ಕೂ ಹೆಚ್ಚು ವಿಕೆಟ್ಗಳಿವೆ.
5 / 8
ಈ ಪಂದ್ಯದಲ್ಲಿ ಐದಕ್ಕೂ ಹೆಚ್ಚು ವಿಕೆಟ್ ಪಡೆಯುವ ಮೂಲಕ ಬುಮ್ರಾ ಅವರು ತಮ್ಮ ವೃತ್ತಿಜೀವನದಲ್ಲಿ ಒಟ್ಟು 9 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದರು. ಬುಮ್ರಾ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಎರಡು ಬಾರಿ ಈ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ.
6 / 8
ಜಸ್ಪ್ರೀತ್ ಬುಮ್ರಾ ಐದು ವಿಕೆಟ್‌ಗಳನ್ನು ಕಬಳಿಸುವುದರೊಂದಿಗೆ ಭಾರತದ ಮಾಜಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಪಂದ್ಯದಲ್ಲಿ ಜಾವಗಲ್ ಶ್ರೀನಾಥ್ ಭಾರತ ತಂಡದ ಪರ ಅತಿ ಹೆಚ್ಚು ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದರು.
7 / 8
ಕನ್ನಡಿಗ ಜಾವಗಲ್ ಶ್ರೀನಾಥ್ ಮೂರು ಬಾರಿ ಈ ಸಾಧನೆ ಮಾಡಿದ್ದರು. ಇದೀಗ ಬುಮ್ರಾ ಕೂಡ ಮೂರು ಬಾರಿ 5 ವಿಕೆಟ್ ಪಡೆದು ಶ್ರೀನಾಥ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಇಬ್ಬರನ್ನು ಹೊರತುಪಡಿಸಿ ಮೊಹಮ್ಮದ್ ಶಮಿ, ವೆಂಕಟೇಶ್ ಪ್ರಸಾದ್ ಮತ್ತು ಶ್ರೀಶಾಂತ್ ಎರಡು ಬಾರಿ ಈ ಸಾಧನೆ ಮಾಡಿದ್ದಾರೆ.
8 / 8
ಇದರೊಂದಿಗೆ ಒಂದೇ ತಂಡದ ಇಬ್ಬರು ಬೌಲರ್‌ಗಳು ಒಂದೇ ಪಂದ್ಯದಲ್ಲಿ 5 ವಿಕೆಟ್ ಉರುಳಿಸಿದ್ದು ಅಪರೂಪದ ಘಟನೆಗೆ ಸಾಕ್ಷಿಯಾಯಿತು. ಮೊಹಮ್ಮದ್ ಸಿರಾಜ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದಿದ್ದರೆ, ಈಗ ಜಸ್ಪ್ರೀತ್ ಬುಮ್ರಾ ಅದೇ ರೀತಿ ಮಾಡಿದ್ದಾರೆ.