AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾಗೆ ಡಬಲ್ ಶಾಕ್: ತಂಡದಿಂದ ಇಬ್ಬರು ಔಟ್, ಬದಲಿ ಆಟಗಾರರ ಆಯ್ಕೆ

Team India: ಕೆಎಲ್ ರಾಹುಲ್ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್.

TV9 Web
| Edited By: |

Updated on: Jan 12, 2022 | 7:30 PM

Share
ಭಾರತ - ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಬೆನ್ನಲ್ಲೇ ಟೀಮ್ ಇಂಡಿಯಾ ಏಕದಿನ ಸರಣಿ ಆಡಲಿದೆ. ಈಗಾಗಲೇ ಈ ಸರಣಿಗಾಗಿ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಆದರೆ ತಂಡದಲ್ಲಿ ಸ್ಥಾನ ಪಡೆದಿದ್ದ ಇಬ್ಬರು ಆಟಗಾರರು ಸರಣಿ ಆರಂಭಕ್ಕೆ ವಾರಗಳು ಮಾತ್ರ ಬಾಕಿಯಿರುವಾಗ ಹೊರಬಿದ್ದಿದ್ದಾರೆ.

1 / 7
ಹೌದು, ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಗೆ ಆಯ್ಕೆಯಾಗಿದ್ದ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅವರ ಬದಲಿ ಆಟಗಾರನಾಗಿ ಭಾರತ ಟೆಸ್ಟ್ ತಂಡದಲ್ಲಿರುವ ಆಲ್​ರೌಂಡರ್ ಜಯಂತ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.

2 / 7
ಈ ಬದಲಾವಣೆ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಕೂಡ ಏಕದಿನ ಸರಣಿಯಿಂದ ಹಿಂದೆ ಸರಿದಿದ್ದಾರೆ. ಜೋಹಾನ್ಸ್​ಬರ್ಗ್​ ಟೆಸ್ಟ್​ ವೇಳೆ ಸಿರಾಜ್ ಮಂಡಿರಜ್ಜು ಗಾಯಕ್ಕೊಳಗಾಗಿದ್ದರು. ಇದೀಗ ಗಾಯದ ಕಾರಣ ಸಿರಾಜ್ 3ನೇ ಟೆಸ್ಟ್​ ಪಂದ್ಯದಿಂದ ಹೊರಗುಳಿದಿದ್ದಾರೆ. ಅಷ್ಟೇ ಅಲ್ಲದೆ ಏಕದಿನ ಸರಣಿ ವೇಳೆ ಚೇತರಿಸಿಕೊಳ್ಳುವುದು ಅನುಮಾನ.

3 / 7
ಹೀಗಾಗಿ ಮೊಹಮ್ಮದ್ ಸಿರಾಜ್ ಬದಲಿಗೆ ನವದೀಪ್ ಸೈನಿಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ಶ್ರೀಲಂಕಾ ವಿರುದ್ದ ಕೊನೆಯ ಏಕದಿನ ಪಂದ್ಯವಾಡಿದ್ದ ಸೈನಿ ಇದೀಗ ಮತ್ತೆ ಬದಲಿ ಆಟಗಾರನಾಗಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಸೈನಿ ಟೀಮ್ ಇಂಡಿಯಾ ಪರ 8 ಏಕದಿನ ಪಂದ್ಯಗಳನ್ನು ಆಡಿದ್ದು ಈ ವೇಳೆ 6 ವಿಕೆಟ್ ಕಬಳಿಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗೆ ಅನುಭವಿ ಸೈನಿಯನ್ನು ಆಯ್ಕೆ ಮಾಡಲಾಗಿದೆ.

4 / 7
 ಇನ್ನು ವಾಷಿಂಗ್ಟನ್ ಸುಂದರ್ ಸ್ಥಾನದಲ್ಲಿ ಅವಕಾಶ ಪಡೆದಿರುವ 31 ವರ್ಷದ ಜಯಂತ್ ಯಾದವ್ 2016 ರಲ್ಲಿ ಟೀಮ್ ಇಂಡಿಯಾ ಪರ ಏಕೈಕ ಏಕದಿನ ಪಂದ್ಯವಾಡಿದ್ದರು. ಇದೀಗ 6 ವರ್ಷಗಳ ಬಳಿಕ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಹಾಗೆಯೇ ಕಾರಣ ಈ ಸರಣಿಯಿಂದ ಟೀಮ್ ಇಂಡಿಯಾ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಅವರ ಬದಲಿಗೆ ಉಪನಾಯಕ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.

5 / 7
ಭಾರತ-ದಕ್ಷಿಣ ಆಫ್ರಿಕಾ ನಡುವಣ 3 ಪಂದ್ಯಗಳ ಏಕದಿನ ಸರಣಿ ಜನವರಿ 19 ರಿಂದ ಬೋಲ್ಯಾಂಡ್ಸ್​ ಪಾರ್ಕ್​ ಸ್ಟೇಡಿಯಂನಲ್ಲಿ ಶುರುವಾಗಲಿದ್ದು, 2ನೇ ಪಂದ್ಯವು ಜನವರಿ 21 ಹಾಗೂ ಮೂರನೇ ಪಂದ್ಯವು ಜನವರಿ 23 ರಂದು ಕೇಪ್​ ಟೌನ್​ನಲ್ಲಿ ನಡೆಯಲಿದೆ.

6 / 7
 ದಕ್ಷಿಣ ಆಫ್ರಿಕಾ ಏಕದಿನ ಸರಣಿಗಾಗಿ ಟೀಮ್ ಇಂಡಿಯಾ ಹೀಗಿದೆ: ಕೆಎಲ್ ರಾಹುಲ್ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಹಾಲ್, ಆರ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಜಯಂತ್ ಯಾದವ್, ನವದೀಪ್ ಸೈನಿ.

7 / 7
TV9 Web
TV9 Web

TV9 Kannada

Read More
Follow Us
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ