AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

93 ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಅತ್ಯಂತ ಹೀನಾಯ ಸೋಲು..!

India vs South Africa, 1st Test: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 159 ರನ್​ಗಳಿಗೆ ಆಲೌಟಾದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 189 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ 153 ರನ್​ಗಳಿಗೆ ಆಲೌಟ್ ಆಗಿದೆ. ಮೊದಲ ಇನಿಂಗ್ಸ್​ನಲ್ಲಿನ 30 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 124 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ 30 ರನ್​ಗಳಿಂದ ಸೋಲನುಭವಿಸಿದೆ.

ಝಾಹಿರ್ ಯೂಸುಫ್
|

Updated on: Nov 16, 2025 | 2:53 PM

Share
ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 93 ವರ್ಷಗಳಾಗಿವೆ. ಈ 93 ವರ್ಷಗಳಲ್ಲಿ ಟೀಮ್ ಇಂಡಿಯಾ (Team India) ಹಲವು ಏಳು ಬೀಳುಗಳನ್ನು ಕಂಡಿದೆ. ಈ ಏಳು ಬೀಳುಗಳ ನಡುವೆ ಇದೀಗ ಭಾರತ ತಂಡವು ಅತ್ಯಲ್ಪ ಮೊತ್ತವನ್ನು ಬೆನ್ನತ್ತಲಾಗದೇ ಸೋತು ಭಾರೀ ಮುಖಭಂಗ ಅನುಭವಿಸಿದೆ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 30 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ 124 ರನ್​​ಗಳ ಗುರಿ ಪಡೆದ ಟೀಮ್ ಇಂಡಿಯಾ 93 ರನ್​ಗಳಿಸುವಷ್ಟರಲ್ಲಿ ಸರ್ಪಪತನ ಕಂಡಿದೆ. 

2 / 5
ಈ ಮೂಲಕ ಟೀಮ್ ಇಂಡಿಯಾಗೆ ತವರಿನಲ್ಲಿ ಹೀನಾಯ ಸೋಲುಣಿಸಿದ ಹೆಗ್ಗಳಿಕೆಯನ್ನು ಸೌತ್ ಆಫ್ರಿಕಾ ತಂಡ ತನ್ನದಾಗಿಸಿಕೊಂಡಿದೆ. ಅಂದರೆ ಭಾರತ ತಂಡವು ತವರು ಮೈದಾನದಲ್ಲಿ ಒಮ್ಮೆಯೂ 130 ಕ್ಕಿಂತ ಕಡಿಮೆ ಗುರಿಯನ್ನು ಬೆನ್ನತ್ತಲಾಗದೇ ಸೋತ ಚರಿತ್ರೆಯೇ ಇರಲಿಲ್ಲ.

3 / 5
2024 ರಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಕೊನೆಯ ಇನಿಂಗ್ಸ್​ನಲ್ಲಿ 147 ರನ್​​ಗಳ ಗುರಿ ಬೆನ್ನತ್ತಲಾಗದೇ ಟೀಮ್ ಇಂಡಿಯಾ 25 ರನ್​ಗಳಿಂದ ಸೋತಿದ್ದು ತವರಿನಲ್ಲಿನ ಹೀನಾಯ ಸೋಲಾಗಿತ್ತು. ಇದೀಗ ಅದಕ್ಕಿಂತ ಕೆಟ್ಟ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

4 / 5
ಸೌತ್ ಆಫ್ರಿಕಾ ತಂಡ ನೀಡಿದ 124 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ತವರಿನಲ್ಲಿ ಅತ್ಯಲ್ಪ ಗುರಿ ಬೆನ್ನತ್ತಲಾಗದೇ ಅತ್ಯಂತ ಹೀನಾಯ ಸೋಲನುಭವಿಸಿದೆ. ಅಷ್ಟೇ ಅಲ್ಲದೆ ಭಾರತದಲ್ಲಿನ ಟೆಸ್ಟ್ ಪಂದ್ಯದಲ್ಲಿ ಅತೀ ಕಡಿಮೆ ಗುರಿ ಪಡೆದು 100 ರನ್​ಗಳಿಸಲಾಗದೇ ಟೀಮ್ ಇಂಡಿಯಾ ಸೋತಿರುವುದು ಇದೇ ಮೊದಲು. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಭಾರತದ ಈ ಸೋಲು ಇತಿಹಾಸ ಪುಟಗಳಲ್ಲಿ ಅಚ್ಚಳಿಯದೇ ಉಳಿಯಲಿದೆ.

5 / 5