Updated on: Sep 27, 2022 | 3:59 PM
ಟೀಮ್ ಇಂಡಿಯಾ ಪರ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಭರ್ಜರಿ ಪ್ರದರ್ಶನ ಮುಂದುವರೆಸಿರುವ ಸೂರ್ಯಕುಮಾರ್ ಯಾದವ್ ಇದೀಗ ಹೊಸ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ದದ ಕೊನೆಯ ಟಿ20 ಪಂದ್ಯದಲ್ಲಿ 36 ಎಸೆತಗಳಲ್ಲಿ 69 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಇದೀಗ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ಗಳಿಸಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಳ್ಳಲಿದ್ದಾರೆ.
ಈ ವಿಶೇಷ ದಾಖಲೆ ಬರೆಯಲು ಸೂರ್ಯಕುಮಾರ್ ಯಾದವ್ಗೆ ಬೇಕಿರುವುದು ಕೇವಲ 8 ರನ್ಗಳ ಅವಶ್ಯಕತೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯ 8 ರನ್ ಕಲೆಹಾಕಿದರೆ ಟೀಮ್ ಇಂಡಿಯಾ ಪರ ಹೊಸ ಇತಿಹಾಸ ನಿರ್ಮಿಸಲಿದ್ದಾರೆ.
ಸದ್ಯ ಈ ವಿಶೇಷ ದಾಖಲೆ ಶಿಖರ್ ಧವನ್ ಹೆಸರಿನಲ್ಲಿದೆ. 2018 ರಲ್ಲಿ ಧವನ್ ಟಿ20 ಕ್ರಿಕೆಟ್‌ನಲ್ಲಿ ಭಾರತ ಪರ 689 ರನ್ ಬಾರಿಸುವ ಮೂಲಕ ಈ ದಾಖಲೆ ನಿರ್ಮಿಸಿದ್ದರು.
ಇದೀಗ 682 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೇವಲ 8 ರನ್ ಕಲೆಹಾಕಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.