Suryakumar Yadav: ಸೂರ್ಯನ ಸಿಡಿಲಬ್ಬರ: ಹೊಸ ದಾಖಲೆಯ ಹೊಸ್ತಿಲಲ್ಲಿ ಮಿಸ್ಟರ್ 360
TV9 Web | Updated By: ಝಾಹಿರ್ ಯೂಸುಫ್
Updated on:
Sep 27, 2022 | 3:59 PM
India vs South Africa: ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ತಿರುವನಂತಪುರದ ಗ್ರೀನ್ಫೀಲ್ಡ್ ಮೈದಾನದಲ್ಲಿ ನಡೆಯಲಿದೆ.
1 / 5
ಟೀಮ್ ಇಂಡಿಯಾ ಪರ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಭರ್ಜರಿ ಪ್ರದರ್ಶನ ಮುಂದುವರೆಸಿರುವ ಸೂರ್ಯಕುಮಾರ್ ಯಾದವ್ ಇದೀಗ ಹೊಸ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿದ್ದಾರೆ.
2 / 5
ಆಸ್ಟ್ರೇಲಿಯಾ ವಿರುದ್ದದ ಕೊನೆಯ ಟಿ20 ಪಂದ್ಯದಲ್ಲಿ 36 ಎಸೆತಗಳಲ್ಲಿ 69 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಇದೀಗ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳಿಸಿದ ಟೀಮ್ ಇಂಡಿಯಾ ಆಟಗಾರ ಎನಿಸಿಕೊಳ್ಳಲಿದ್ದಾರೆ.
3 / 5
ಈ ವಿಶೇಷ ದಾಖಲೆ ಬರೆಯಲು ಸೂರ್ಯಕುಮಾರ್ ಯಾದವ್ಗೆ ಬೇಕಿರುವುದು ಕೇವಲ 8 ರನ್ಗಳ ಅವಶ್ಯಕತೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯ 8 ರನ್ ಕಲೆಹಾಕಿದರೆ ಟೀಮ್ ಇಂಡಿಯಾ ಪರ ಹೊಸ ಇತಿಹಾಸ ನಿರ್ಮಿಸಲಿದ್ದಾರೆ.
4 / 5
ಸದ್ಯ ಈ ವಿಶೇಷ ದಾಖಲೆ ಶಿಖರ್ ಧವನ್ ಹೆಸರಿನಲ್ಲಿದೆ. 2018 ರಲ್ಲಿ ಧವನ್ ಟಿ20 ಕ್ರಿಕೆಟ್ನಲ್ಲಿ ಭಾರತ ಪರ 689 ರನ್ ಬಾರಿಸುವ ಮೂಲಕ ಈ ದಾಖಲೆ ನಿರ್ಮಿಸಿದ್ದರು.
5 / 5
ಇದೀಗ 682 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕೇವಲ 8 ರನ್ ಕಲೆಹಾಕಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.