IND vs SA: ಟೀಮ್ ಇಂಡಿಯಾಗೆ ಯುವ ಆಲ್ರೌಂಡರ್ ರಿಎಂಟ್ರಿ
India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಗುವಾಹಟಿಯ ಬರ್ಸಪಾರ ಸ್ಟೇಡಿಯಂ ಆತಿಥ್ಯವಹಿಸಲಿದೆ.
Updated on: Nov 18, 2025 | 3:54 PM

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ. ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕೂ ಮುನ್ನ ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಕೊಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರನ್ನು ತಂಡದಿಂದ ರಿಲೀಸ್ ಮಾಡಲಾಗಿತ್ತು. ಹೀಗಾಗಿ ಅವರು ಸೌತ್ ಆಫ್ರಿಕಾ ಎ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ಎ ಪರ ಕಣಕ್ಕಿಳಿದಿದ್ದರು.

ಇದೀಗ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಮುನ್ನ ನಿತೀಶ್ ಕುಮಾರ್ ರೆಡ್ಡಿಗೆ ಬುಲಾವ್ ನೀಡಲಾಗಿದೆ. ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಕುತ್ತಿಗೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದುದು ಅನುಮಾನ ಎನ್ನಲಾಗಿದೆ.

ಇದರ ಬೆನ್ನಲ್ಲೇ ನಿತೀಶ್ ಕುಮಾರ್ ರೆಡ್ಡಿಗೆ ಭಾರತ ತಂಡವನ್ನು ಸೇರಿಕೊಳ್ಳುವಂತೆ ಸೂಚಿಸಲಾಗಿದೆ. ಹೀಗಾಗಿ ಗುವಾಹಟಿಯಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಗಿಲ್ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಲ್ಲದೆ ಗಿಲ್ ಅನುಪಸ್ಥಿತಿಯಲ್ಲಿ ರಿಷಭ್ ಪಂತ್ ಭಾರತ ತಂಡವನ್ನು ಮುನ್ನಡೆಸಬಹುದು.

ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್, ನಿತೀಶ್ ಕುಮಾರ್ ರೆಡ್ಡಿ.
