IND vs SA: ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ರಿಎಂಟ್ರಿ

Updated on: Nov 18, 2025 | 3:54 PM

India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್​ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಗುವಾಹಟಿಯ ಬರ್ಸಪಾರ ಸ್ಟೇಡಿಯಂ ಆತಿಥ್ಯವಹಿಸಲಿದೆ.

1 / 5
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ. ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕೂ ಮುನ್ನ ಯುವ ಆಲ್​ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

2 / 5
ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಕೊಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರನ್ನು ತಂಡದಿಂದ ರಿಲೀಸ್ ಮಾಡಲಾಗಿತ್ತು. ಹೀಗಾಗಿ ಅವರು ಸೌತ್ ಆಫ್ರಿಕಾ ಎ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ಎ ಪರ ಕಣಕ್ಕಿಳಿದಿದ್ದರು.

3 / 5
ಇದೀಗ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಮುನ್ನ ನಿತೀಶ್ ಕುಮಾರ್ ರೆಡ್ಡಿಗೆ ಬುಲಾವ್ ನೀಡಲಾಗಿದೆ. ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಕುತ್ತಿಗೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದುದು ಅನುಮಾನ ಎನ್ನಲಾಗಿದೆ.

4 / 5
ಇದರ ಬೆನ್ನಲ್ಲೇ ನಿತೀಶ್ ಕುಮಾರ್ ರೆಡ್ಡಿಗೆ ಭಾರತ ತಂಡವನ್ನು ಸೇರಿಕೊಳ್ಳುವಂತೆ ಸೂಚಿಸಲಾಗಿದೆ. ಹೀಗಾಗಿ ಗುವಾಹಟಿಯಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಗಿಲ್ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅಲ್ಲದೆ ಗಿಲ್ ಅನುಪಸ್ಥಿತಿಯಲ್ಲಿ ರಿಷಭ್ ಪಂತ್ ಭಾರತ ತಂಡವನ್ನು ಮುನ್ನಡೆಸಬಹುದು.

5 / 5
ಭಾರತ ಟೆಸ್ಟ್​ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್, ನಿತೀಶ್ ಕುಮಾರ್ ರೆಡ್ಡಿ.