IND vs SA: ಏಕದಿನದಲ್ಲಿ ನಾಯಕನಾಗಿ ಕೆಎಲ್ ರಾಹುಲ್ ಪ್ರದರ್ಶನ ಹೇಗಿದೆ?

Updated on: Nov 28, 2025 | 10:20 PM

KL Rahul captaincy: ನವೆಂಬರ್ 30 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ಭಾರತವನ್ನು ಮುನ್ನಡೆಸಲಿದ್ದಾರೆ. ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಗಾಯದಿಂದ ಹೊರಗುಳಿದಿದ್ದಾರೆ. 12 ಏಕದಿನ ಪಂದ್ಯಗಳಲ್ಲಿ 8 ಗೆಲುವುಗಳೊಂದಿಗೆ ರಾಹುಲ್ 67% ಯಶಸ್ಸಿನ ಪ್ರಮಾಣ ಹೊಂದಿದ್ದಾರೆ. ಟೆಸ್ಟ್ ಸರಣಿ ಗೆದ್ದ ದಕ್ಷಿಣ ಆಫ್ರಿಕಾದ ಆತ್ಮವಿಶ್ವಾಸ ಮುರಿಯುವುದು ರಾಹುಲ್​ಗೆ ದೊಡ್ಡ ಸವಾಲು.

1 / 5
ಟೆಸ್ಟ್ ಸರಣಿ ಸೋಲಿನ ನಂತರ, ಟೀಂ ಇಂಡಿಯಾ ಈಗ ದಕ್ಷಿಣ ಆಫ್ರಿಕಾ ವಿರುದ್ಧ 2 ಏಕದಿನ ಪಂದ್ಯಗಳನ್ನು ಆಡಲಿದೆ. ಎರಡೂ ತಂಡಗಳ ನಡುವೆ ಒಟ್ಟು 3 ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಈ ಸರಣಿಯು ನವೆಂಬರ್ 30 ರಿಂದ ಪ್ರಾರಂಭವಾಗಲಿದೆ. ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ, ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಭಾರತೀಯ ತಂಡವನ್ನು ಮುನ್ನಡೆಸಲಿದ್ದಾರೆ.

2 / 5
ಶುಭ್​ಮನ್ ಗಾಯದಿಂದಾಗಿ, ಹಲವು ವರ್ಷಗಳ ನಂತರ ಕೆಎಲ್‌ ರಾಹುಲ್​ಗೆ ಮತ್ತೊಮ್ಮೆ ನಾಯಕತ್ವದ ಜವಾಬ್ದಾರಿಯನ್ನು ನೀಡಲಾಗಿದೆ. ಆದಾಗ್ಯೂ ಏಕದಿನ ಮಾದರಿಯಲ್ಲಿ ಕೆಎಲ್ ರಾಹುಲ್ ಎಷ್ಟು ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ? ನಾಯಕನಾಗಿ ರಾಹುಲ್ ಎಷ್ಟು ಯಶಸ್ವಿಯಾಗಿದ್ದಾರೆ ಎಂಬುದರ ವಿವರ ಇಲ್ಲಿದೆ.

3 / 5
ರಾಹುಲ್ ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾಯಕತ್ವ ವಹಿಸಿದ್ದಾರೆ. ಆದಾಗ್ಯೂ, ರಾಹುಲ್​ಗೆ ಏಕದಿನ ಕ್ರಿಕೆಟ್‌ನಲ್ಲಿ ನಾಯಕತ್ವದ ಹೆಚ್ಚಿನ ಅನುಭವವಿಲ್ಲ. 12 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿರುವ ರಾಹುಲ್ 8 ಪಂದ್ಯಗಳಲ್ಲಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದ್ದು, 4 ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ. ನಾಯಕನಾಗಿ ಏಕದಿನ ಕ್ರಿಕೆಟ್‌ನಲ್ಲಿ ರಾಹುಲ್ ಅವರ ಗೆಲುವಿನ ಶೇಕಡಾವಾರು ಶೇಕಡಾ 67 ರಷ್ಟಿದೆ.

4 / 5
ದಕ್ಷಿಣ ಆಫ್ರಿಕಾ ತಂಡವು ಭಾರತವನ್ನು ಟೆಸ್ಟ್ ಸರಣಿಯಲ್ಲಿ 2-0 ಅಂತರದಿಂದ ವೈಟ್‌ವಾಶ್ ಮಾಡಿದೆ. ಇದರಿಂದಾಗಿ ದಕ್ಷಿಣ ಆಫ್ರಿಕಾದ ಆತ್ಮವಿಶ್ವಾಸ ಹೆಚ್ಚಾಗಿದೆ. ಟೆಸ್ಟ್ ನಂತರ ಅದೇ ಆತ್ಮವಿಶ್ವಾಸದೊಂದಿಗೆ ದಕ್ಷಿಣ ಆಫ್ರಿಕಾ ಏಕದಿನ ಸರಣಿಯಲ್ಲಿ ಭಾರತವನ್ನು ಸೋಲಿಸಲು ಹೊರಡಲಿದೆ. ಟೆಂಬಾ ಬವುಮಾ ದಕ್ಷಿಣ ಆಫ್ರಿಕಾವನ್ನು ಮುನ್ನಡೆಸಲಿದ್ದಾರೆ. ಆದ್ದರಿಂದ, ದಕ್ಷಿಣ ಆಫ್ರಿಕಾದ ಗೆಲುವಿನ ಸರಣಿಯನ್ನು ನಿಲ್ಲಿಸುವ ಸವಾಲು ರಾಹುಲ್ ಮುಂದಿದೆ.

5 / 5
ಶುಭಮನ್ ಹೊರತಾಗಿ, ಉಪನಾಯಕ ಶ್ರೇಯಸ್ ಅಯ್ಯರ್ ಕೂಡ ಏಕದಿನ ಸರಣಿಯ ಭಾಗವಾಗಿಲ್ಲ. ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಗಾಯದಿಂದಾಗಿ ಶ್ರೇಯಸ್ ದಕ್ಷಿಣ ಆಫ್ರಿಕಾ ವಿರುದ್ಧ ಆಡಲು ಸಾಧ್ಯವಾಗುವುದಿಲ್ಲ. ಶುಭಮನ್ ಮತ್ತು ಶ್ರೇಯಸ್ ಇಲ್ಲದಿರುವುದು ಭಾರತಕ್ಕೆ ದೊಡ್ಡ ಹೊಡೆತ. ಆದಾಗ್ಯೂ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಜೋಡಿಯಿಂದ ರಾಹುಲ್​ಗೆ ಸಹಾಯ ಸಿಗಲಿದೆ.