- Kannada News Photo gallery Cricket photos IND vs SA Rinku Singh, Sanju Samson get their chance in ODIs against South Africa says KL Rahul
IND vs SA: ರಿಂಕು, ಸಂಜು ಇನ್! ಪ್ಲೇಯಿಂಗ್ 11 ಬಗ್ಗೆ ಬಿಗ್ ಅಪ್ಡೇಟ್ ನೀಡಿದ ನಾಯಕ ರಾಹುಲ್
IND vs SA: ಏಕದಿನ ಸರಣಿ ಆರಂಭಕ್ಕೂ ಮುನ್ನ ಪ್ರತಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಎರಡು ಗುಡ್ ನ್ಯೂಸ್ ನೀಡಿದ್ದು, ಬಹಳ ದಿನಗಳಿಂದ ತಂಡದಲ್ಲಿ ಆಡುವ ಕನಸು ಕಾಣುತ್ತಿದ್ದ ರಿಂಕು ಸಿಂಗ್ ಮತ್ತು ಸಂಜು ಸ್ಯಾಮ್ಸನ್ಗೆ ಏಕದಿನ ತಂಡದಲ್ಲಿ ಅವಕಾಶ ನೀಡುವ ಬಗ್ಗೆ ಮಾತನಾಡಿದ್ದಾರೆ.
Updated on: Dec 16, 2023 | 7:26 PM

ಟಿ20 ಸರಣಿಯ ಬಳಿಕ ಇದೀಗ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಭಾನುವಾರ ಜೋಹಾನ್ಸ್‌ಬರ್ಗ್‌ನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಟೀಂ ಇಂಡಿಯಾದ ನಾಯಕತ್ವ ಕೆಎಲ್ ರಾಹುಲ್ ಕೈಯಲ್ಲಿದ್ದು, ಆಫ್ರಿಕಾ ತಂಡವನ್ನು ಐಡೆನ್ ಮಾರ್ಕ್‌ರಾಮ್ ಮುನ್ನಡೆಸಲಿದ್ದಾರೆ.

ಈ ಹಿಂದೆ ನಡೆದ ಉಭಯ ತಂಡಗಳ ನಡುವಿನ ಟಿ20 ಸರಣಿಯು 1-1 ರಿಂದ ಡ್ರಾದಲ್ಲಿ ಕೊನೆಗೊಂಡಿತು. ಆದರೆ ಈಗ ಉಭಯ ತಂಡಗಳೂ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿವೆ. ಅದರಂತೆ ಬಲಿಷ್ಠ ಪಡೆಗಳನ್ನು ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿವೆ.

ಈ ಏಕದಿನ ಸರಣಿ ಆರಂಭಕ್ಕೂ ಮುನ್ನ ಪ್ರತಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಎರಡು ಗುಡ್ ನ್ಯೂಸ್ ನೀಡಿದ್ದು, ಬಹಳ ದಿನಗಳಿಂದ ತಂಡದಲ್ಲಿ ಆಡುವ ಕನಸು ಕಾಣುತ್ತಿದ್ದ ರಿಂಕು ಸಿಂಗ್ ಮತ್ತು ಸಂಜು ಸ್ಯಾಮ್ಸನ್ಗೆ ಏಕದಿನ ತಂಡದಲ್ಲಿ ಅವಕಾಶ ನೀಡುವ ಬಗ್ಗೆ ಮಾತನಾಡಿದ್ದಾರೆ.

ಸಂಜು ಸ್ಯಾಮ್ಸನ್ ಮತ್ತು ರಿಂಕು ಸಿಂಗ್ ಇಬ್ಬರಿಗೂ ಅವಕಾಶ ಸಿಗಲಿದೆ ಎಂದು ಏಕದಿನ ಸರಣಿಯ ಮುನ್ನಾ ದಿನ ನಡೆದ ಸುದ್ದಿಗೋಷ್ಠಿಯಲ್ಲಿ ಕೆಎಲ್ ರಾಹುಲ್ ಹೇಳಿದ್ದಾರೆ. ಸಂಜು ಸ್ಯಾಮ್ಸನ್ ಏಕದಿನ ಸರಣಿಯಲ್ಲಿ ಆಡಲಿದ್ದು, 5 ಅಥವಾ 6ನೇ ಕ್ರಮಾಂಕದಲ್ಲಿ ಆಡಲಿದ್ದಾರೆ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ.

ಮತ್ತೊಂದೆಡೆ ರಿಂಕು ಸಿಂಗ್‌ಗೆ ಏಕದಿನ ಮಾದರಿಯಲ್ಲಿ ಪದಾರ್ಪಣೆ ಮಾಡುವ ಅವಕಾಶ ಸಿಗಲಿದೆ. ಟಿ20 ಕ್ರಿಕೆಟ್‌ನಲ್ಲಿ ರಿಂಕು ಸಿಂಗ್ ಅದ್ಭುತ ಪ್ರದರ್ಶನ ನೀಡಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಏಕದಿನ ಮಾದರಿಯಲ್ಲಿಯೂ ಅವಕಾಶ ಪಡೆಯುತ್ತಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ.

ಇನ್ನು ತಂಡದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿರುವ ಕೆಎಲ್ ರಾಹುಲ್, ಏಕದಿನ ಸರಣಿಯಲ್ಲೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾಗಿ ಹೇಳಿದ್ದಾರೆ. ಇದಲ್ಲದೇ ವಿಕೆಟ್ ಕೀಪಿಂಗ್ ಪಾತ್ರವನ್ನೂ ನಿರ್ವಹಿಸಲಿದ್ದಾರೆ. ಸಂಜು ಸ್ಯಾಮ್ಸನ್ ಉಪಸ್ಥಿತಿಯ ಹೊರತಾಗಿಯೂ ರಾಹುಲ್ ಈ ಜವಾಬ್ದಾರಿಯನ್ನು ಸ್ವತಃ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಇದಲ್ಲದೇ ಟೆಸ್ಟ್ನಲ್ಲಿ ಯಾವುದೇ ಪಾತ್ರವಹಿಸಲು ಸಿದ್ಧ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ. ಮ್ಯಾನೇಜ್‌ಮೆಂಟ್ ಮತ್ತು ನಾಯಕ ನಾನು ವಿಕೆಟ್ ಕೀಪಿಂಗ್ ಪಾತ್ರವನ್ನು ವಹಿಸಬೇಕೆಂದು ಬಯಸಿದರೆ, ನಾನು ಅದಕ್ಕೂ ಸಿದ್ಧ ಎಂದು ರಾಹುಲ್ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯ ಡಿಸೆಂಬರ್ 17 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ಎರಡನೇ ಏಕದಿನ ಪಂದ್ಯ ಡಿಸೆಂಬರ್ 19 ರಂದು ಸೇಂಟ್ ಜಾರ್ಜ್ ಪಾರ್ಕ್ ನಲ್ಲಿ ನಡೆಯಲಿದೆ. ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಡಿಸೆಂಬರ್ 21 ರಂದು ಪಾರ್ಲ್‌ನಲ್ಲಿ ನಡೆಯಲಿದೆ. ಇದಾದ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿ ಡಿಸೆಂಬರ್ 26ರಿಂದ ಆರಂಭವಾಗಲಿದೆ.




