- Kannada News Photo gallery Cricket photos IND vs SA Smriti Mandhana missed hat trick century against south africa kannada news
IND vs SA: ಕೇವಲ ಹತ್ತೇ ಹತ್ತು ರನ್; ಹ್ಯಾಟ್ರಿಕ್ ಶತಕ ವಂಚಿತ ಸ್ಮೃತಿ ಮಂಧಾನ..!
Smriti Mandhana: ಬೆಂಗಳೂರಿನಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮಹಿಳಾ ತಂಡ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಸರಣಿಯಲ್ಲಿ ಸತತ ಮೂರನೇ ಶತಕ ಬಾರಿಸುವ ಅವಕಾಶದಿಂದ ವಂತಿರಾಗಿದ್ದಾರೆ.
Updated on: Jun 23, 2024 | 7:53 PM

ಬೆಂಗಳೂರಿನಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮಹಿಳಾ ತಂಡ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಸರಣಿಯಲ್ಲಿ ಸತತ ಮೂರನೇ ಶತಕ ಬಾರಿಸುವ ಅವಕಾಶದಿಂದ ವಂತಿರಾಗಿದ್ದಾರೆ.

ಪಂದ್ಯದಲ್ಲಿ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಮಾಡಿದ ಮಂಧಾನ, ಕೇವಲ 10 ರನ್ಗಳಿಂದ ಹ್ಯಾಟ್ರಿಕ್ ಶತಕ ಬಾರಿಸುವ ಅವಕಾಶವನ್ನು ಕಳೆದುಕೊಂಡರು.

ತಮ್ಮ ಇನ್ನಿಂಗ್ಸ್ನಲ್ಲಿ 83 ಎಸೆತಗಳನ್ನು ಎದುರಿಸಿದ ಮಂಧಾನ 11 ಬೌಂಡರಿಗಳ ನೆರವಿನಿಂದ 90 ರನ್ಗಳ ಇನ್ನಿಂಗ್ಸ್ ಕಟ್ಟಿದರು. ಈ ಪಂದ್ಯಕ್ಕೂ ಮುನ್ನ ನಡೆದ ಮೊದಲೆರಡೂ ಏಕದಿನ ಪಂದ್ಯಗಳಲ್ಲೂ ಸ್ಮೃತಿ ಶತಕ ಸಿಡಿಸಿ ಮಿಂಚಿದ್ದರು.

ಇದೇ ಬೆಂಗಳೂರಿನಲ್ಲಿ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ 127 ಎಸೆತಗಳನ್ನು ಎದುರಿಸಿದ್ದ ಸ್ಮೃತಿ 12 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 117 ರನ್ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದರು.

ಎರಡನೇ ಏಕದಿನ ಪಂದ್ಯದಲ್ಲೂ ಸ್ಮೃತಿ ಬ್ಯಾಟ್ನಿಂದ ಶತಕ ಸಿಡಿದಿತ್ತು. ಈ ಪಂದ್ಯದಲ್ಲಿ 126 ಎಸೆತಗಳನ್ನು ಎದುರಿಸಿದ್ದ ಮಂಧಾನ 18 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 136 ರನ್ಗಳ ಮತ್ತೊಂದು ಗೆಲುವಿನ ಇನ್ನಿಂಗ್ಸ್ ಆಡಿದ್ದರು.

ಸತತ ಎರಡು ಪಂದ್ಯಗಳಲ್ಲಿ 2 ಶತಕ ಸಿಡಿಸುವುದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದರು. ಅಲ್ಲದೆ ಭಾರತದ ಪರ ಅಧಿಕ ಏಕದಿನ ಶತಕ ಸಿಡಿಸಿದ ಮಹಿಳಾ ಆಟಗಾರ್ತಿಯರ ಪೈಕಿ 7 ಶತಕಗಳೊಂದಿಗೆ ಮೊದಲ ಸ್ಥಾನಕ್ಕೇರಿದರು.

ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೆ... ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 50 ಓವರ್‌ಗಳಲ್ಲಿ 215 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದೀಗ ಈ ಗುರಿ ಬೆನ್ನಟ್ಟಿರುವ ಭಾರತ ವನಿತಾ ಪಡೆ ಗೆಲುವಿನ ಸನಿಹದಲ್ಲಿದೆ.




