AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಸೋತ ಸೌತ್ ಆಫ್ರಿಕಾ ತಂಡಕ್ಕೆ ‘ಡಬಲ್’ ಶಾಕ್

India vs South Africa T20I: ಭಾರತದ ವಿರುದ್ಧದ ಏಕದಿನ ಸರಣಿಯನ್ನು ಹೀನಾಯವಾಗಿ ಸೋತಿರುವ ಸೌತ್ ಆಫ್ರಿಕಾ ತಂಡಕ್ಕೆ ಆಘಾತ ಎದುರಾಗಿದೆ. ಡಿಸೆಂಬರ್ 9 ರಿಂದ ಶುರುವಾಗಲಿರುವ ಟೀಮ್ ಇಂಡಿಯಾ ವಿರುದ್ಧದ 5 ಪಂದ್ಯಗಳ ಸರಣಿಯಿಂದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ. ಅದರಲ್ಲೂ ಪ್ರಮುಖ ಬ್ಯಾಟರ್ ಗಾಯಗೊಂಡು ಹೊರಗುಳಿದಿರುವುದು ಪ್ರವಾಸಿ ತಂಡ ಪಾಲಿಗೆ ಹಿನ್ನಡೆಯಾಗಿ ಪರಿಣಮಿಸಲಿದೆ.

ಝಾಹಿರ್ ಯೂಸುಫ್
|

Updated on:Dec 08, 2025 | 8:23 AM

Share
ಭಾರತ ಮತ್ಯು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳು ಟಿ20 ಸರಣಿಗಾಗಿ ಸಜ್ಜಾಗುತ್ತಿದೆ. ಆದರೆ ಈ ಸರಣಿಗೂ ಮುನ್ನವೇ ಸೌತ್ ಆಫ್ರಿಕಾ ತಂಡಕ್ಕೆ ಡಬಲ್ ಆಘಾತ ಎದುರಾಗಿದೆ.

1 / 5
ಸೌತ್ ಆಫ್ರಿಕಾ ತಂಡದ ಪ್ರಮುಖ ಆಟಗಾರರಿಬ್ಬರು ಟೀಮ್ ಇಂಡಿಯಾ ವಿರುದ್ಧದ 5 ಪಂದ್ಯಗಳ ಸರಣಿಯಿಂದ ಹೊರಗುಳಿದಿದ್ದಾರೆ. ಇವರಲ್ಲಿ ಇಬ್ಬರು ಎಡಗೈ ದಾಂಡಿಗನಾದರೆ, ಮತ್ತೋರ್ವ ಯುವ ವೇಗಿ. ಹೀಗಾಗಿ ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾ ಇಬ್ಬರು ಆಟಗಾರರ ಅಲಭ್ಯತೆಯನ್ನು ಎದುರಿಸಲಿದ್ದಾರೆ. ಅದರಂತೆ ಭಾರತದ ವಿರುದ್ಧದ ಸರಣಿಯಿಂದ ಹೊರಬಿದ್ದಿರುವ ಸೌತ್ ಆಫ್ರಿಕಾ ಆಟಗಾರರು ಯಾರೆಂದರೆ...

2 / 5
ಟೋನಿ ಡಿ ಝೋರ್ಝಿ: ಸೌತ್ ಆಫ್ರಿಕಾ ತಂಡದ ಸ್ಫೋಟಕ ದಾಂಡಿಗ ಟೋನಿ ಡಿ ಝೋರ್ಝಿ ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಬ್ಯಾಟಿಂಗ್ ನಡುವೆ ಕಾಲು ನೋವಿಗೆ ಸಿಲುಕಿದ್ದ ಝೋರ್ಝಿ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ಅವರ ಸ್ಕ್ಯಾನಿಂಗ್ ರಿಪೋರ್ಟ್ ಬಂದಿದ್ದು, ಇದನ್ನು ಪರಿಶೀಲಿಸಿದ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ 5 ಪಂದ್ಯಗಳ ಸರಣಿಯಿಂದ ಝೋರ್ಝಿ ಹೊರಗುಳಿದಿದ್ದಾರೆ.

3 / 5
ಕ್ವೆನಾ ಮಫಕಾ: ಸೌತ್ ಆಫ್ರಿಕಾ ತಂಡದ ಯುವ ವೇಗಿ ಕ್ವೆನಾ ಮಫಕಾ ಎಡ ಮಂಡಿರಜ್ಜು ಸ್ನಾಯುವಿನ ಗಾಯದಿಂದ ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಸಹ ಸೌತ್ ಆಫ್ರಿಕಾ ಟಿ20 ತಂಡದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ವೇಗದ ಬೌಲರ್ ಲುಥೊ ಸಿಪಾಮ್ಲಾ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಅದರಂತೆ ಭಾರತದ ವಿರುದ್ಧದ ಟಿ20 ಸರಣಿಗೆ ಸೌತ್ ಆಫ್ರಿಕಾ ತಂಡ ಈ ಕೆಳಗಿನಂತಿದೆ...

4 / 5
ಸೌತ್ ಆಫ್ರಿಕಾ ಟಿ20 ತಂಡ: ಐಡನ್ ಮಾರ್ಕ್ರಾಮ್ (ನಾಯಕ), ಓಟ್ನಿಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ಡೊನೊವನ್ ಫೆರೇರಾ, ರೀಝ ಹೆಂಡ್ರಿಕ್ಸ್, ಮಾರ್ಕೋ ಯಾನ್ಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಜಾರ್ಜ್ ಲಿಂಡೆ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯ, ಲುಥೋ ಸಿಪಮ್ಲಾ, ಟ್ರಿಸ್ಟನ್ ಸ್ಟಬ್ಸ್.

5 / 5

Published On - 8:23 am, Mon, 8 December 25

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ