
ಭಾರತ ಮತ್ಯು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳು ಟಿ20 ಸರಣಿಗಾಗಿ ಸಜ್ಜಾಗುತ್ತಿದೆ. ಆದರೆ ಈ ಸರಣಿಗೂ ಮುನ್ನವೇ ಸೌತ್ ಆಫ್ರಿಕಾ ತಂಡಕ್ಕೆ ಡಬಲ್ ಆಘಾತ ಎದುರಾಗಿದೆ.

ಸೌತ್ ಆಫ್ರಿಕಾ ತಂಡದ ಪ್ರಮುಖ ಆಟಗಾರರಿಬ್ಬರು ಟೀಮ್ ಇಂಡಿಯಾ ವಿರುದ್ಧದ 5 ಪಂದ್ಯಗಳ ಸರಣಿಯಿಂದ ಹೊರಗುಳಿದಿದ್ದಾರೆ. ಇವರಲ್ಲಿ ಇಬ್ಬರು ಎಡಗೈ ದಾಂಡಿಗನಾದರೆ, ಮತ್ತೋರ್ವ ಯುವ ವೇಗಿ. ಹೀಗಾಗಿ ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾ ಇಬ್ಬರು ಆಟಗಾರರ ಅಲಭ್ಯತೆಯನ್ನು ಎದುರಿಸಲಿದ್ದಾರೆ. ಅದರಂತೆ ಭಾರತದ ವಿರುದ್ಧದ ಸರಣಿಯಿಂದ ಹೊರಬಿದ್ದಿರುವ ಸೌತ್ ಆಫ್ರಿಕಾ ಆಟಗಾರರು ಯಾರೆಂದರೆ...

ಟೋನಿ ಡಿ ಝೋರ್ಝಿ: ಸೌತ್ ಆಫ್ರಿಕಾ ತಂಡದ ಸ್ಫೋಟಕ ದಾಂಡಿಗ ಟೋನಿ ಡಿ ಝೋರ್ಝಿ ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಬ್ಯಾಟಿಂಗ್ ನಡುವೆ ಕಾಲು ನೋವಿಗೆ ಸಿಲುಕಿದ್ದ ಝೋರ್ಝಿ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ಅವರ ಸ್ಕ್ಯಾನಿಂಗ್ ರಿಪೋರ್ಟ್ ಬಂದಿದ್ದು, ಇದನ್ನು ಪರಿಶೀಲಿಸಿದ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ 5 ಪಂದ್ಯಗಳ ಸರಣಿಯಿಂದ ಝೋರ್ಝಿ ಹೊರಗುಳಿದಿದ್ದಾರೆ.

ಕ್ವೆನಾ ಮಫಕಾ: ಸೌತ್ ಆಫ್ರಿಕಾ ತಂಡದ ಯುವ ವೇಗಿ ಕ್ವೆನಾ ಮಫಕಾ ಎಡ ಮಂಡಿರಜ್ಜು ಸ್ನಾಯುವಿನ ಗಾಯದಿಂದ ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಸಹ ಸೌತ್ ಆಫ್ರಿಕಾ ಟಿ20 ತಂಡದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ವೇಗದ ಬೌಲರ್ ಲುಥೊ ಸಿಪಾಮ್ಲಾ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಅದರಂತೆ ಭಾರತದ ವಿರುದ್ಧದ ಟಿ20 ಸರಣಿಗೆ ಸೌತ್ ಆಫ್ರಿಕಾ ತಂಡ ಈ ಕೆಳಗಿನಂತಿದೆ...

ಸೌತ್ ಆಫ್ರಿಕಾ ಟಿ20 ತಂಡ: ಐಡನ್ ಮಾರ್ಕ್ರಾಮ್ (ನಾಯಕ), ಓಟ್ನಿಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ಡೊನೊವನ್ ಫೆರೇರಾ, ರೀಝ ಹೆಂಡ್ರಿಕ್ಸ್, ಮಾರ್ಕೋ ಯಾನ್ಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಜಾರ್ಜ್ ಲಿಂಡೆ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯ, ಲುಥೋ ಸಿಪಮ್ಲಾ, ಟ್ರಿಸ್ಟನ್ ಸ್ಟಬ್ಸ್.
Published On - 8:23 am, Mon, 8 December 25