ಸೂರ್ಯಕುಮಾರ್ ಯಾದವ್ ಕಳೆದ ಕೆಲವು ಸಮಯದಿಂದ ಟೀಂ ಇಂಡಿಯಾ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ.2021 ರಲ್ಲಿ ಭಾರತಕ್ಕೆ ಪಾದಾರ್ಪಣೆ ಮಾಡಿದ ಸೂರ್ಯ ಇದುವರೆಗೆ ಟೀಂ ಇಂಡಿಯಾ ಪರ 60 ಟಿ20 ಪಂದ್ಯಗಳಲ್ಲಿ 2141 ರನ್ ಗಳಿಸಿದ್ದು, ಇದರಲ್ಲಿ ನಾಲ್ಕು ಶತಕಗಳು ಸೇರಿವೆ. ಇದಲ್ಲದೇ 17 ಅರ್ಧ ಶತಕ ಕೂಡ ಸಿಡಿಸಿದ್ದಾರೆ.