IND vs SA: ಭಾರತ- ದಕ್ಷಿಣ ಆಫ್ರಿಕಾ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

Edited By:

Updated on: Oct 31, 2022 | 1:09 PM

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದು ಹ್ಯಾಟ್ರಿಕ್ ಜಯದ ಕನಸಿನಲ್ಲಿದ್ದ ಭಾರತ ತಂಡಕ್ಕೆ ದಕ್ಷಿಣ ಆಫ್ರಿಕಾ ಶಾಕ್ ನೀಡಿತು. ಗೆಲ್ಲುವ ವಿಶ್ವಾಸದೊಂದಿಗೆ ಟಾಸ್ ಗೆದ್ದು ಬ್ಯಾಟಿಂಗ್​ಗೆ ಇಳಿದ ಭಾರತ ಆರಂಭದಲ್ಲೇ ಪ್ರಮುಖ ಸ್ಟಾರ್ ಬ್ಯಾಟರ್​​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

1 / 7
ಭಾನುವಾರ ಪರ್ತ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ (India vs South Africa) ಸೋಲು ಕಂಡಿತು. ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ನೀಡಿದ ಕಳಪೆ ಫೀಲ್ಡಿಂಗ್ ಸೋಲಿಗೆ ಮುಖ್ಯ ಕಾರಣವಾಯಿತು.

ಭಾನುವಾರ ಪರ್ತ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ (India vs South Africa) ಸೋಲು ಕಂಡಿತು. ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ನೀಡಿದ ಕಳಪೆ ಫೀಲ್ಡಿಂಗ್ ಸೋಲಿಗೆ ಮುಖ್ಯ ಕಾರಣವಾಯಿತು.

2 / 7

ನಾಯಕ ರೋಹಿತ್ ಶರ್ಮಾ (Rohit Sharma) ಕೂಡ ತಂಡ ಸೋಲಲು ನಾವು ಪ್ರದರ್ಶಿಸಿದ ಕೆಟ್ಟ ಫೀಲ್ಡಿಂಗ್ ಕಾರಣ ಎಂದು ಹೇಳಿದರು. 5 ವಿಕೆಟ್​ಗಳ ಗೆಲುವಿನ ಮೂಲಕ ಉತ್ತಮ ರನ್​ರೇಟ್​ ಹಾಗೂ 2 ಅಂಕ ಸಂಪಾದಿಸಿ ದಕ್ಷಿಣ ಆಫ್ರಿಕಾ ಟೇಬಲ್ ಟಾಪರ್ ಆಗಿದೆ.

3 / 7

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಲುಂಗಿ ಎನ್​ಗಿಡಿ ಆರಂಭದಲ್ಲೆ ಆಘಾತ ನೀಡಿದರು. ಕೆ.ಎಲ್. ರಾಹುಲ್ (9), ರೋಹಿತ್ ಶರ್ಮಾ (15), ವಿರಾಟ್ ಕೊಹ್ಲಿ (12), ಹಾರ್ದಿಕ್ ಪಾಂಡ್ಯ (0) ಹಾಗೂ ದೀಪಕ್ ಹೂಡ (0) ಅವರ ವಿಕೆಟ್‌ಗಳನ್ನು 50 ರನ್​ಗು ಮುನ್ನವೇ ಕಳೆದುಕೊಂಡಿತು. ಆದರೆ ಮತ್ತೊಮ್ಮೆ ದಿಟ್ಟ ಆಟವಾಡಿದ ಸೂರ್ಯಕುಮಾರ್ ಯಾದವ್ (68 ರನ್, 40ಎಸೆತ, 6 ಫೋರ್, 3 ಸಿಕ್ಸರ್) ಅವರಿಂದಾಗಿ ಭಾರತ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 133 ರನ್ ಗಳಿಸಿತು.

4 / 7

ಸಾಧಾರಣ ಗುರಿ ಬೆನ್ನತ್ತಿದ ಆಫ್ರಿಕಾಗೆ ಅರ್ಷದೀಪ್ ಸಿಂಗ್ ಆರಂಭದಲ್ಲೇ ಎರಡು ವಿಕೆಟ್ ಪಡೆದು ಆಘಾತ ನೀಡಿದರು. ಕ್ವಿಂಟಾನ್ ಡಿ ಕಾಕ್ 1 ಮತ್ತು ರಿಲೀ ರೋಸ್ಸೋ ಸೊನ್ನೆ ಸುತ್ತಿ ಔಟಾದರು. ಬಳಿಕ ಟೆಂಬಾ ಬಾವುವಾ 10 ರನ್ ಗಳಿಸಿದ್ದಾಗ ಶಮಿ ಬೌಲಿಂಗ್​ನಲ್ಲಿ ವಿಕೆಟ್ ಒಪ್ಪಿಸಿದರು.

5 / 7

ಇದರಿಂದಾಗಿ ಭಾರತಕ್ಕೂ ಗೆಲುವಿನತ್ತ ಸಾಗುವ ಅವಕಾಶ ಇತ್ತು. ಆದರೆ, ಫೀಲ್ಡಿಂಗ್‌ನಲ್ಲಿ ನಡೆದ ಲೋಪಗಳು ದುಬಾರಿಯಾದವು. ಆ್ಯಡಂ ಮರ್ಕ್ರಮ್ ಮತ್ತು ಡೇವಿಡ್ ಮಿಲ್ಲರ್ ಕ್ರಮವಾಗಿ 52 ಹಾಗೂ 59 ರನ್ ಬಾರಿಸಿ ತಂಡವನ್ನು ಅಪಾಯದಿಂದ ಪಾರು ಮಾಡಿ ಜಯದ ದಡಕ್ಕೆ ಕೊಂಡೊಯ್ದರು.

6 / 7

ಅಂತಿಮವಾಗಿ ಆಫ್ರಿಕಾ 19.4 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 137 ರನ್‌ ಗಳಿಸಿ ಜಯದ ನಗೆ ಬೀರಿತು.

7 / 7

ಗೆಲುವಿನ ಸಂಭ್ರಮದಲ್ಲಿ ದಕ್ಷಿಣ ಆಫ್ರಿಕಾ ತಂಡದ ಆಟಗಾರರು.

Published On - 1:09 pm, Mon, 31 October 22

Loading...
Unable to load recommendations.
Follow Us