IND vs SA: ಟೀಮ್ ಇಂಡಿಯಾದಿಂದ ಇಬ್ಬರು ಆಟಗಾರರು ಔಟ್
India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಡಿಸೆಂಬರ್ 9 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್ ಕಟಕ್ನಲ್ಲಿ ನಡೆದರೆ, ಎರಡನೇ ಪಂದ್ಯ ಮುಲ್ಲನ್ಪುರ್ನಲ್ಲಿ ಜರುಗಲಿದೆ. ಇನ್ನುಳಿದ ಪಂದ್ಯಗಳು ಕ್ರಮವಾಗಿ ಧರ್ಮಶಾಲ, ಲಕ್ನೋ ಮತ್ತು ಅಹಮದಾಬಾದ್ನಲ್ಲಿ ನಡೆಯಲಿದೆ.
Updated on: Dec 04, 2025 | 2:32 PM

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಟಿ20 ಸಿರೀಸ್ ಶುರುವಾಗಲಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಈ ಸರಣಿಗಾಗಿ 15 ಸದಸ್ಯರುಗಳ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಇಬ್ಬರು ಯುವ ಆಟಗಾರರು ಸ್ಥಾನ ಪಡೆದಿಲ್ಲ ಎಂಬುದು ವಿಶೇಷ.

ಅಂದರೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಆಟಗಾರರನ್ನು ತಂಡದಿಂದ ಕೈ ಬಿಡಲಾಗಿದೆ. ಅಲ್ಲದೆ ಏಷ್ಯಾಕಪ್ ಬಳಿಕ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಈ ಸರಣಿಗೆ ಆಯ್ಕೆಯಾಗಿದ್ದಾರೆ. ಇತ್ತ ಹಾರ್ದಿಕ್ ಪಾಂಡ್ಯ ಎಂಟ್ರಿಯೊಂದಿಗೆ ಅತ್ತ ಭಾರತ ತಂಡದಿಂದ ಹೊರಬಿದ್ದ ಆಟಗಾರರು ಯಾರೆಂದರೆ....

ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಟೀಮ್ ಇಂಡಿಯಾ ಪರ ಈವರೆಗೆ 4 ಟಿ20 ಪಂದ್ಯಗಳನ್ನಾಡಿದ್ದಾರೆ. ಅದರಲ್ಲೂ ಕಳೆದ ತಿಂಗಳು ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇದೀಗ ಹಾರ್ದಿಕ್ ಪಾಂಡ್ಯ ಅವರ ಕಂಬ್ಯಾಕ್ ಬೆನ್ನಲ್ಲೇ ನಿತೀಶ್ ಕುಮಾರ್ ರೆಡ್ಡಿ ತಂಡದಿಂದ ಹೊರಬಿದ್ದಿದ್ದಾರೆ.

ರಿಂಕು ಸಿಂಗ್: ಭಾರತದ ಪರ 35 ಟಿ20 ಪಂದ್ಯಗಳನ್ನಾಡಿರುವ ರಿಂಕು ಸಿಂಗ್ ಅವರನ್ನು ಸಹ ಸೌತ್ ಆಫ್ರಿಕಾ ಸರಣಿಯಿಂದ ಕೈ ಬಿಡಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದ ರಿಂಕು ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂಬುದು ವಿಶೇಷ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ...

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ)*, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.
