ಕೇಪ್ ಟೌನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು 7 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಭಾರತ ತಂಡ ಇತಿಹಾಸವನ್ನು ಸೃಷ್ಟಿಸಿದೆ. ಈ ಗೆಲುವಿನೊಂದಿಗೆ ಪ್ರಸಕ್ತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಮುಂಬಡ್ತಿ ಕೂಡ ಸಿಕ್ಕಿದೆ.
ಕೇವಲ ಎರಡೇ ದಿನದಲ್ಲಿ ಆತಿಥೇಯರನ್ನು ಮಣಿಸಿದ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಇದೀಗ ಅಗ್ರಸ್ಥಾನಕ್ಕೇರಿದೆ. ಈ ಹಿಂದೆ ಸೆಂಚುರಿಯನ್ ಟೆಸ್ಟ್ ಸೋಲಿನ ನಂತರ ಟೀಂ ಇಂಡಿಯಾ ಟಾಪ್ 3ರಲ್ಲಿಯೂ ಇರಲಿಲ್ಲ. ಅಲ್ಲದೆ ಸ್ಲೋ ಓವರ್ ರೇಟ್‌ಗೆ ಎರಡು ಅಂಕಗಳನ್ನು ಸಹ ಕಡಿತಗೊಳಿಸಲಾಗಿತ್ತು.
ಇದೀಗ ಕೇಪ್ ಟೌನ್ ಟೆಸ್ಟ್‌ನಲ್ಲಿ ಐತಿಹಾಸಿಕ ಗೆಲುವಿನ ನಂತರ ಭಾರತ ನಂಬರ್ 1 ಸ್ಥಾನವನ್ನು ಅಲಂಕರಿಸಿದೆ . ಈ ಗೆಲುವಿನೊಂದಿಗೆ ಟೀಂ ಇಂಡಿಯಾ 12 ಅಂಕ ಗಳಿಸಿದೆ. ತಂಡದ ಗೆಲುವಿನ ಶೇಕಡಾವಾರು ಕೂಡ ಅತ್ಯುತ್ತಮವಾಗಿದೆ.
ಪ್ರಸ್ತುತ ಆವೃತ್ತಿಯ ಡಬ್ಲ್ಯುಟಿಸಿಯಲ್ಲಿ ಭಾರತ ತಂಡವು ಇಲ್ಲಿಯವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಒಂದು ಪಂದ್ಯವನ್ನು ಸೋತಿರುವ ಭಾರತ, ಎರಡು ಪಂದ್ಯವನ್ನು ಗೆದ್ದು ಬೀಗಿದೆ. ಉಳಿದಂರೆ ಒಂದು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. 54.16 ಗೆಲುವಿನ ಶೇಕಡಾವಾರು ಹೊಂದಿರುವ ಟೀಂ ಇಂಡಿಯಾ ಅತ್ಯಧಿಕ 26 ಅಂಕಗಳನ್ನು ಹೊಂದಿದೆ.
ಇದಕ್ಕೆ ವಿರುದ್ಧವಾಗಿ ಎರಡನೇ ಟೆಸ್ಟ್ ಪಂದ್ಯದ ಸೋಲಿನ ನಂತರ ದಕ್ಷಿಣ ಆಫ್ರಿಕಾ ತಂಡ 12 ಅಂಕ ಹಾಗೂ 50 ಗೆಲುವಿನ ಶೇಕಡಾವಾರುವಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮೂರನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ನಾಲ್ಕನೇ ಸ್ಥಾನದಲ್ಲಿ ಮತ್ತು ಬಾಂಗ್ಲಾದೇಶ ಐದನೇ ಸ್ಥಾನದಲ್ಲಿದೆ.
ಈ ಮೂರು ತಂಡಗಳ ಗೆಲುವಿನ ಶೇಕಡಾವಾರು ತಲಾ 50 ಆಗಿದೆ. ಆಸ್ಟ್ರೇಲಿಯಾದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಸೋತಿರುವ ಪಾಕಿಸ್ತಾನ ತಂಡವು 45.8 ಗೆಲುವಿನ ಶೇಕಡಾವಾರು ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ವೆಸ್ಟ್ ಇಂಡೀಸ್ 7ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 8ನೇ ಸ್ಥಾನದಲ್ಲಿದೆ. ಅಲ್ಲದೆ, ಶ್ರೀಲಂಕಾ ಇನ್ನೂ ತನ್ನ ಖಾತೆಯನ್ನು ತೆರೆಯದಿದ್ದು, ತಂಡವು ಕೊನೆಯ ಅಂದರೆ 9 ನೇ ಸ್ಥಾನದಲ್ಲಿದೆ.
ಕೇಪ್‌ಟೌನ್‌ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಸೋಲಿಸಿ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತು. ಈ ಗೆಲುವಿನೊಂದಿಗೆ ಭಾರತ ಸರಣಿಯನ್ನು ಉಳಿಸಿಕೊಂಡಿದ್ದು ಮಾತ್ರವಲ್ಲದೆ 31 ವರ್ಷಗಳ ನಂತರ ಕೇಪ್ ಟೌನ್‌ನಲ್ಲಿ ಮೊದಲ ಟೆಸ್ಟ್ ಜಯ ದಾಖಲಿಸಿದೆ.
Published On - 8:03 pm, Thu, 4 January 24