IND vs SA: ಆಫ್ರಿಕಾ ವಿರುದ್ಧ 16 ವರ್ಷದ ಹಿಂದಿನ ಸೇಡು ತೀರಿಸಿಕೊಂಡ ಭಾರತ..!

|

Updated on: Jan 03, 2024 | 8:08 PM

IND vs SA: ಟೀಂ ಇಂಡಿಯಾ ಮೊದಲ ದಿನದಾಟದಲ್ಲಿ ದಕ್ಷಿಣ ಆಫ್ರಿಕಾವನ್ನು 55 ರನ್‌ಗಳಿಗೆ ಆಲೌಟ್ ಮಾಡಿ ಇತಿಹಾಸ ನಿರ್ಮಿಸಿದೆ. ಇದು ಟೆಸ್ಟ್‌ನಲ್ಲಿ ಭಾರತದ ವಿರುದ್ಧ ಯಾವುದೇ ತಂಡ ಗಳಿಸಿದ ಕನಿಷ್ಠ ಸ್ಕೋರ್ ಆಗಿದೆ. ಇದರೊಂದಿಗೆ ಭಾರತ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ 16ವರ್ಷದ ಹಿಂದಿನ ಸೇಡು ತೀರಿಸಿಕೊಂಡಿದೆ.

1 / 8
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ದಿನದಾಟದಲ್ಲಿ ದಕ್ಷಿಣ ಆಫ್ರಿಕಾವನ್ನು 55 ರನ್‌ಗಳಿಗೆ ಆಲೌಟ್ ಮಾಡಿ ಇತಿಹಾಸ ನಿರ್ಮಿಸಿದೆ.

2 / 8
ಇದು ಟೆಸ್ಟ್‌ನಲ್ಲಿ ಭಾರತದ ವಿರುದ್ಧ ಯಾವುದೇ ತಂಡ ಗಳಿಸಿದ ಕನಿಷ್ಠ ಸ್ಕೋರ್ ಆಗಿದೆ. ಇದರೊಂದಿಗೆ ಭಾರತ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ 16ವರ್ಷದ ಹಿಂದಿನ ಸೇಡು ತೀರಿಸಿಕೊಂಡಿದೆ.

3 / 8
ಕೇಪ್ ಟೌನ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಕೇವಲ 23.2 ಓವರ್‌ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. ಅಂದರೆ ಪಂದ್ಯದ ಮೊದಲ ಸೆಷನ್‌ನಲ್ಲಿಯೇ ಭಾರತದ ಬೌಲರ್‌ಗಳು ದಕ್ಷಿಣ ಆಫ್ರಿಕಾವನ್ನು ಆಲೌಟ್ ಮಾಡಿದರು.

4 / 8
ಈ ಹಿಂದೆ ಅಂದರೆ, 2008ರಲ್ಲಿ ದಕ್ಷಿಣ ಆಫ್ರಿಕಾ ಕೂಡ ಭಾರತ ತಂಡದ ವಿರುದ್ಧ ಇದೇ ರೀತಿಯ ಸಾಧನೆ ಮಾಡಿತ್ತು. 2008 ರ ಭಾರತ ಪ್ರವಾಸದ ಸಮಯದಲ್ಲಿ, ಅಹಮದಾಬಾದ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾವು ಟೀಮ್ ಇಂಡಿಯಾವನ್ನು 76 ರನ್‌ಗಳಿಗೆ ಆಲೌಟ್ ಮಾಡಿತ್ತು. ಆ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕೂಡ ಪಂದ್ಯದ ಮೊದಲ ಸೆಷನ್‌ನಲ್ಲಿ ಭಾರತವನ್ನು ಆಲೌಟ್ ಮಾಡಿತ್ತು.

5 / 8
2008 ರಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಟೆಸ್ಟ್ ಸರಣಿಯು 1-1 ರಿಂದ ಡ್ರಾದಲ್ಲಿ ಕೊನೆಗೊಂಡಿತು. ಸರಣಿಯ ಎರಡನೇ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನಿಂಗ್ಸ್ 76 ರನ್ ಗಳಿಗೆ ಕುಸಿದಿತ್ತು.

6 / 8
ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ನಷ್ಟಕ್ಕೆ 494 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಅದೇ ಸಮಯದಲ್ಲಿ, ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 328 ರನ್ ಗಳಿಸಲಷ್ಟೇ ಶಕ್ತವಾಯಿತು ಮತ್ತು ಪಂದ್ಯವನ್ನು ಇನ್ನಿಂಗ್ಸ್ ಮತ್ತು 90 ರನ್‌ಗಳಿಂದ ಕಳೆದುಕೊಂಡಿತ್ತು.

7 / 8
ಟೀಂ ಇಂಡಿಯಾ ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ 8 ಟೆಸ್ಟ್ ಸರಣಿಗಳನ್ನು ಆಡಿದೆ. ಈ ಪೈಕಿ ಭಾರತ 7 ಸರಣಿಗಳಲ್ಲಿ ಸೋಲು ಕಂಡಿದ್ದು, 1 ಸರಣಿ ಡ್ರಾ ಆಗಿದೆ. ಇಲ್ಲಿಯವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿದ ಏಕೈಕ ಭಾರತೀಯ ನಾಯಕ ಎಂಎಸ್ ಧೋನಿ.

8 / 8
ಆದರೆ ಕೇಪ್ ಟೌನ್ ಟೆಸ್ಟ್​ನಲ್ಲಿ ಭಾರತ ತಂಡ ಉತ್ತಮ ಆರಂಭ ಪಡೆದಿದ್ದು, ಎರಡನೇ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಡ್ರಾ ಮಾಡಿಕೊಳ್ಳುವ ಸುವರ್ಣಾವಕಾಶ ಪಡೆದಿದೆ.