ಟಿ20 ವಿಶ್ವಕಪ್ನಲ್ಲಿ ಭಾರತವನ್ನು ಚಾಂಪಿಯನ್ ಮಾಡಿದ್ದ ನಾಯಕ ರೋಹಿತ್ ಶರ್ಮಾ, ಇದೀಗ ಏಕದಿನ ಕ್ರಿಕೆಟ್ನಲ್ಲೂ ತನ್ನ ಸ್ಫೋಟಕ ಆಟದ ಮೂಲಕ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಹಿಟ್‌ಮ್ಯಾನ್, ಈ ವಿಶೇಷ ಸಾಧನೆ ಮಾಡಿದ ವಿಶ್ವದ ನಂಬರ್-1 ನಾಯಕ ಎನಿಸಿಕೊಂಡಿದ್ದಾರೆ.