IND vs SL: ಕೇವಲ 22 ಎಸೆತಗಳಲ್ಲಿ ಸಿಡಿಲಬ್ಬರದ ಅರ್ಧಶತಕ ಚಚ್ಚಿದ ಸೂರ್ಯ..!

|

Updated on: Jul 27, 2024 | 9:46 PM

IND vs SL: ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ ಸೂರ್ಯ, ಬಂದ ಕೂಡಲೇ ಬೌಂಡರಿ, ಸಿಕ್ಸರ್ ಬಾರಿಸತೊಡಗಿದರು. ಸೂರ್ಯ 223 ರ ಬಿರುಗಾಳಿಯ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿ 26 ಎಸೆತಗಳಲ್ಲಿ 58 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ಸೂರ್ಯ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

1 / 6
ಶ್ರೀಲಂಕಾ ಮತ್ತು ಭಾರತ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಅಂದರೆ ಜುಲೈ 27 ರಂದು ಪಲ್ಲೆಕೆಲೆಯಲ್ಲಿ ನಡೆಯುತ್ತಿದೆ. ಭಾರತದ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಸಿಡಿಲಬ್ಬರದ ಆಟ ಪ್ರದರ್ಶಿಸಿದೆ.

2 / 6
ನಿಗದಿತ 20 ಓವರ್​ಗಳಲ್ಲಿ ತಂಡ 7ವಿಕೆಟ್ ಕಳೆದುಕೊಂಡು ಬರೋಬ್ಬರಿ 213 ರನ್ ಕಲೆಹಾಕಿದೆ. ಈ ಪಂದ್ಯದಲ್ಲಿ ತಂಡದ ಬ್ಯಾಟಿಂಗ್ ಆರ್ಡರ್ ಅದ್ಭುತ ಪ್ರದರ್ಶನ ನೀಡಿತು. ಅದರಲ್ಲೂ ನೂತನ ನಾಯಕನಾಗಿ ಆಯ್ಕೆಯಾಗಿರುವ  ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಶ್ರೀಲಂಕಾದ ಬೌಲರ್‌ಗಳ ಬೆವರಿಳಿಸಿದರು.

3 / 6
ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ ಸೂರ್ಯ, ಬಂದ ಕೂಡಲೇ ಬೌಂಡರಿ, ಸಿಕ್ಸರ್ ಬಾರಿಸತೊಡಗಿದರು. ಸೂರ್ಯ 223 ರ ಬಿರುಗಾಳಿಯ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿ 26 ಎಸೆತಗಳಲ್ಲಿ 58 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ಸೂರ್ಯ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

4 / 6
ಇದು ಸೂರ್ಯ ಅವರ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದ ಎರಡನೇ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮೊದಲು ಸೂರ್ಯ 2022 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ 18 ಎಸೆತಗಳಲ್ಲಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದ ವೇಗದ ಅರ್ಧಶತಕ ದಾಖಲಿಸಿದ್ದರು.

5 / 6
ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಹೊರತುಪಡಿಸಿ ಯಾವುದೇ ಬ್ಯಾಟ್ಸ್‌ಮನ್ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಯಶಸ್ವಿ ಜೈಸ್ವಾಲ್ ಮತ್ತು ಶುಭ್​ಮನ್ ಗಿಲ್ ಜೊತೆಗೆ ರಿಷಬ್ ಪಂತ್ ಕೂಡ ಸ್ಫೋಟಕ ಬ್ಯಾಟಿಂಗ್ ಮಾಡಿದರು. ರಿಷಭ್ 6 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 49 ರನ್ ಗಳಿಸಿದರು.

6 / 6
ಇನ್ನು ಆರಂಭಿಕರಾಗಿ ಕಣಕ್ಕಿಳಿದಿದ್ದ ಯಶಸ್ವಿ ಜೈಸ್ವಾಲ್ 40 ರನ್ ಗಳಿಸಿದರೆ, ಶುಭಮನ್ ಗಿಲ್ 34 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಕೊನೆಯಲ್ಲಿ ಅಕ್ಷರ್ ಪಟೇಲ್ 5 ಎಸೆತಗಳಲ್ಲಿ 10 ರನ್​ಗಳ ಕಾಣಿಕೆ ನೀಡಿದರು.