ಈ ತಿಂಗಳ ಅಂತ್ಯದಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. 3 ಪಂದ್ಯಗಳ ಟಿ20 ಸರಣಿ ಜುಲೈ 27ರಿಂದ ಆರಂಭವಾಗಲಿದೆ. ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸೂರ್ಯಕುಮಾರ್ ಯಾದವ್ಗೆ ನಾಯಕತ್ವ ಪಟ್ಟಕಟ್ಟಲಾಗಿದೆ. ಈ ಸರಣಿಯೊಂದಿಗೆ ಹಲವು ವಿಶ್ವಕಪ್ ವಿಜೇತ ಆಟಗಾರರು ತಂಡಕ್ಕೆ ಮರಳಿದ್ದಾರೆ. ಆದಾಗ್ಯೂ ಕಳೆದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದರೂ ಈ ಐವರನ್ನು ಕಡೆಗಣಿಸಲಾಗಿದೆ.
ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಸರಣಿಯ ಎರಡನೇ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಕೇವಲ 46 ಎಸೆತಗಳಲ್ಲಿ ಶತಕ ದಾಖಲಿಸಿದರು. ಇದಲ್ಲದೇ ಬೌಲಿಂಗ್ನಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದರು. ಇದಾದ ನಂತರವೂ ಶ್ರೀಲಂಕಾ ಪ್ರವಾಸದಲ್ಲಿರುವ ಅಭಿಷೇಕ್ ತಂಡದಲ್ಲಿಲ್ಲ.
ವೇಗದ ಬೌಲರ್ ಅವೇಶ್ ಖಾನ್ ಜಿಂಬಾಬ್ವೆಯಲ್ಲಿ ಕೇವಲ ಮೂರು ಪಂದ್ಯಗಳನ್ನು ಆಡುವ ಅವಕಾಶ ಪಡೆದರಾದರೂ 6 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಾದ ನಂತರವೂ ಅವೇಶ್ ತಂಡದ ಭಾಗವಾಗಿಲ್ಲ.
ವೇಗದ ಬೌಲರ್ ಅವೇಶ್ ಖಾನ್ ಜಿಂಬಾಬ್ವೆಯಲ್ಲಿ ಕೇವಲ ಮೂರು ಪಂದ್ಯಗಳನ್ನು ಆಡುವ ಅವಕಾಶ ಪಡೆದರಾದರೂ 6 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಾದ ನಂತರವೂ ಅವೇಶ್ ತಂಡದ ಭಾಗವಾಗಿಲ್ಲ.
ಜಿಂಬಾಬ್ವೆ ಪ್ರವಾಸದ ವೇಳೆ ಮುಖೇಶ್ ಕುಮಾರ್ ಆಡಿದ 3 ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದರು. ಅಲ್ಲದೆ ಸರಣಿಯ ಕೊನೆಯ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿದ್ದರು. ಇದು ಅವರ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವೂ ಆಗಿತ್ತು. ಹಾಗಿದ್ದರೂ ಅವರಿಗೆ ಅವಕಾಶ ಸಿಕ್ಕಿಲ್ಲ.
ಜಿಂಬಾಬ್ವೆ ಪ್ರವಾಸದ ವೇಳೆ ಟಿ20 ವಿಶ್ವಕಪ್‌ನ ಹೀರೋಗಳಲ್ಲಿ ಒಬ್ಬರಾದ ಕುಲ್ದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಶ್ರೀಲಂಕಾ ವಿರುದ್ಧ ಅವರು ತಂಡಕ್ಕೆ ಮರಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಕುಲ್ದೀಪ್ ತಂಡದ ಭಾಗವಾಗಿಲ್ಲ. ಅವರಿಗೆ ಏಕದಿನದಲ್ಲಿ ಅವಕಾಶ ಸಿಕ್ಕಿದ್ದರೂ ಟಿ20ಯಿಂದ ಹೊರಗುಳಿದಿದ್ದಾರೆ.
Published On - 10:39 pm, Thu, 18 July 24